ಚುನಾವಣಾ ಸಮೀಕ್ಷೆ, ವದಂತಿಗಳಿಗೆ ಕಿವಿಗೊಡಬೇಡಿ; ಕಾರ್ಯಕರ್ತರಿಗೆ ಪ್ರಿಯಾಂಕ ಗಾಂಧಿ ಆಡಿಯೋ ಸಂದೇಶ

ಏಳನೇ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ದೇಶದ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎ ಪೂರ್ಣ ಬಹುಮತ ಲಭಿಸಲಿದೆ ಎಂದು ಭವಿಷ್ಯ ನುಡಿದಿವೆ. ಈ ಹಿನ್ನೆಲೆಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿರುವ ಪ್ರಿಯಾಂಕ ಗಾಂಧಿ ಆ ಮೂಲಕ ತಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

MAshok Kumar | news18
Updated:May 21, 2019, 10:45 AM IST
ಚುನಾವಣಾ ಸಮೀಕ್ಷೆ, ವದಂತಿಗಳಿಗೆ ಕಿವಿಗೊಡಬೇಡಿ; ಕಾರ್ಯಕರ್ತರಿಗೆ ಪ್ರಿಯಾಂಕ ಗಾಂಧಿ ಆಡಿಯೋ ಸಂದೇಶ
ಪ್ರಿಯಾಂಕ ಗಾಂಧಿ.
  • News18
  • Last Updated: May 21, 2019, 10:45 AM IST
  • Share this:
ನವ ದೆಹಲಿ (ಮೇ.21); ಚುನಾವಣೋತ್ತರ ಸಮೀಕ್ಷೆಗಳನ್ನು ನಂಬಬೇಡಿ. ವದಂತಿಗಳಿಗೆ ಕಿವಿಗೊಡಬೇಡಿ. ಮೇ.23 ಫಲಿತಾಂಶದ ವರೆಗೆ ಕಾಯಿರಿ ಎಂದು ಪಶ್ಚಿಮ ಉತ್ತರಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಏಳನೇ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ದೇಶದ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎ ಪೂರ್ಣ ಬಹುಮತ ಲಭಿಸಲಿದೆ ಎಂದು ಭವಿಷ್ಯ ನುಡಿದಿವೆ. ಈ ಹಿನ್ನೆಲೆಯಲ್ಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿರುವ ಪ್ರಿಯಾಂಕ ಗಾಂಧಿ ಆ ಮೂಲಕ ತಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಈ ಆಡಿಯೋದಲ್ಲಿ “ನನ್ನ ಪ್ರೀತಿಯ ಕಾಂಗ್ರೆಸ್ ಕಾರ್ಯಕರ್ತರೆ, ಚುನಾವಣೋತ್ತರ ಸಮೀಕ್ಷೆಗಳು ನಿಮ್ಮಲ್ಲಿ ನಿರುತ್ಸಾಹ ತುಂಬುವ ಕೆಲಸ ಮಾಡುತ್ತಿದೆ. ಆದರೆ, ನೀವು ಇಂತಹ ವದಂತಿಗಳಿಗೆ, ಗಾಳಿ ಮಾತಿಗೆ ಕಿವಿಗೊಡಬೇಡಿ. ನಿಮ್ಮ ನಿರ್ಣಯಗಳನ್ನು ಮುರಿಯುವ ಸಲುವಾಗಿ ಇಂತಹ ಕೆಲಸಗಳನ್ನು ಮಾಡಲಾಗುತ್ತಿದೆ. ಇವುಗಳ ಮಧ್ಯೆ ನೀವು ಜಾಗರೂಕರಾಗಿರಬೇಕು. ನಮ್ಮೆಲ್ಲರ ಒಗ್ಗಟ್ಟು ಹಾಗೂ ಶ್ರಮ ಖಂಡಿತ ನಮಗೆ ಉತ್ತಮ ಫಲ ನೀಡಲಿದೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ದೆಹಲಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಆಡಳಿತ, ವಿರೋಧ ಪಕ್ಷಗಳ ಮಹತ್ವದ ಸಭೆ ಇಂದು

ಈ ಭಾರಿ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ನಾಯಕತ್ವದಲ್ಲಿ ಎದುರಿಸಿತ್ತು. ಕೇಂದ್ರ ಸರ್ಕಾರದ ಕೆಲವು ವಿಫಲ ಯೋಜನೆಗಳು ಹಾಗೂ ನೀತಿ ನಿರ್ಣಯಗಳನ್ನು ಪ್ರಚಾರದ ವೇಳೆ ಟೀಕಿಸಿದ್ದ ರಾಹುಲ್ ಗಾಂಧಿ ತಮ್ಮ ಪಕ್ಷಕ್ಕೆ ಇದು ಲಾಭ ನೀಡಲಿದೆ ಎಂದು ಊಹಿಸಿದ್ದರು. ಅಲ್ಲದೆ ರಾಹುಲ್ ಗಾಂಧಿಗೆ ಪರ್ಯಾಯವಾಗಿ ಪ್ರಿಯಾಂಕ ಗಾಂಧಿಯನ್ನೂ ಈ ಭಾರಿ ಕಾಂಗ್ರೆಸ್ ಕಣಕ್ಕಿಳಿಸಿತ್ತು. ಆದರೆ, ಈ ಯಾವ ಯೋಜನೆಗಳು ಕಾಂಗ್ರೆಸ್ ಪಾಲಿಗೆ ಕೈಕೊಡಲಿಲ್ಲ. ಪರಿಣಾಮ ಚುನಾವಣೋತ್ತರ ಸಮೀಕ್ಷೆಗಳು ಈ ಭಾರಿಯೂ ಕಾಂಗ್ರೆಸ್ ಪಕ್ಷಕ್ಕೆ ಕಡಿಮೆ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿರುವುದು ಕಾಂಗ್ರೆಸ್ ಪಾಳಯದಲ್ಲಿ ತಳಮಳಕ್ಕೆ ಕಾರಣವಾಗಿದೆ.

First published:May 21, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading