ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆ; ಬೆಳಗಾವಿಗೆ ಮತ್ತೆ ಪ್ರವಾಹ ಭೀತಿ

ಇತ್ತೀಚೆಗೆ ಉತ್ತರ ಕರ್ನಾಟಕ ಪ್ರವಾಹಕ್ಕೆ ತತ್ತರಿಸಿದೆ. ಅದರಲ್ಲೂ ಬೆಳಗಾವಿ ಜಿಲ್ಲೆ ಬಹುತೇಕ ಮುಳುಗಡೆಯಾಗಿದೆ. ಉತ್ತರ ಭಾರತದಲ್ಲಿ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು.

news18
Updated:September 6, 2019, 9:46 AM IST
ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆ; ಬೆಳಗಾವಿಗೆ ಮತ್ತೆ ಪ್ರವಾಹ ಭೀತಿ
ಸಾಂದರ್ಭಿಕ ಚಿತ್ರ
  • News18
  • Last Updated: September 6, 2019, 9:46 AM IST
  • Share this:
ಮುಂಬೈ(ಸೆ.05): ಮಹಾರಾಷ್ಟ್ರದಲ್ಲಿ ಮತ್ತೆ ಧಾರಕಾರ ಮಳೆಯಾಗುತ್ತಿದೆ. ಇದರ ಪರಿಣಾಮ ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದ್ದು, ಅಪಾಯ ಮಟ್ಟ ತಲುಪಿದೆ. ಹೀಗಾಗಿ ಕೃಷ್ಣಾ ನದಿ ದಡದಲ್ಲಿ ಬದುಕುತ್ತಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು  ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್.ಬಿ ಬೊಮ್ಮನಹಳ್ಳಿ ಆದೇಶಿಸಿದ್ದಾರೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಅತಿವೃಷ್ಟಿಯಿಂದಾಗಿ ಭಾರಿ ಮಳೆಯಾಗುತ್ತಿದೆ. ಇನ್ನೂ ನಾಲ್ಕು ದಿನಗಳು ಮಳೆ ಮುಂದುವರೆಯಲಿದೆ. ಇದರಿಂದಾಗಿ ನದಿಗಳು ತುಂಬಿ ಹರಿಯುತ್ತಿವೆ. ಈಗಾಗಲೇ ಕೃಷ್ಣಾ, ಕೊಯ್ನಾ, ಪಂಚಗಂಗಾ ನದಿಗಳಿಗೆ 2 ಲಕ್ಷ ಕ್ಯೂಸೆಕ್ ನೀರನ್ನು ಬಿಡುವ ನಿರ್ಧಾರ ತೆಗೆದುಕೊಂಡಿದ್ದೇವೆ. ಹೀಗಾಗಿ ಕೃಷ್ಣಾ ನದಿ ಸುತ್ತಮತ್ತ ವಾಸಿಸುತ್ತಿರುವ ಜನ ಎಚ್ಚರಿಕೆ ವಹಿಸಬೇಕೆಂದು ಕೊಲ್ಲಾಪುರ ಜಿಲ್ಲಾಧಿಕಾರಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ದೇಶಾದ್ಯಂತ ಮುಂಗಾರು ಚುರುಕುಗೊಂಡ ಕಾರಣದಿಂದಾಗಿ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಗಳು ತುಂಬಿ ಹರಿಯುತ್ತಿವೆ. ಮಹಾಮಳೆಗೆ ಕೃಷ್ಣಾ ನದಿಯ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಒಳ ಹರಿವಿನ ಪ್ರಮಾಣ ಎರಡು ಲಕ್ಷ ಕ್ಯೂಸೆಕ್ ಗಡಿ ದಾಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರವೂ ಹೈ ಅಲರ್ಟ್​​ ಘೋಷಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: 118 ವರ್ಷಗಳಲ್ಲಿ ಈ ಬಾರಿಯೇ ದಾಖಲೆ ಮಳೆ; ಮಲೆನಾಡು ಭಾಗದಲ್ಲಿ ನಾಳೆಯೂ ರೆಡ್​ ಅಲರ್ಟ್​

ಇತ್ತೀಚೆಗೆ ಉತ್ತರ ಕರ್ನಾಟಕ ಪ್ರವಾಹಕ್ಕೆ ತತ್ತರಿಸಿದೆ. ಅದರಲ್ಲೂ ಬೆಳಗಾವಿ ಜಿಲ್ಲೆ ಬಹುತೇಕ ಮುಳುಗಡೆಯಾಗಿದೆ. ಉತ್ತರ ಭಾರತದಲ್ಲಿ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು. ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ದಟ್ಟವಾದ ಮೋಡಗಳ ಸಾಲು ಉಂಟಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಈ ಮಳೆಗೆ ಕರಾವಳಿ, ಮಲೆನಾಡು, ಬೆಳಗಾವಿ ಜಿಲ್ಲೆಗಳು ಅಧೋಗತಿಗೆ ತಲುಪಿದ್ದವು.

ಭೀಕರ ಪ್ರವಾಹಕ್ಕೆ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡವೂ ಭೇಟಿಯೂ ನೀಡಿತ್ತು. ಇಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚಾರ ನಡೆಸಿದ ತಂಡ ಎಷ್ಟು ಪ್ರಮಾಣದ ಹಾನಿ ಸಂಭವಿಸಿದೆ ಎಂದು ಪರಿಶೀಲಿಸಿತು. ಜತೆಗೆ ನೆರೆ ಸಂತ್ರಸ್ತರಿಗೆ ಸದ್ಯದಲ್ಲೇ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಗೃಹ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಭರವಸೆ ನೀಡಿದ್ದರು.ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ
-------------
First published:September 5, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ