ದಲಿತರ ಮತಕ್ಕಾಗಿ ಬಿಜೆಪಿ ಅಡ್ವಾಣಿ ಬದಲು ಕೋವಿಂದ್​ರನ್ನು ರಾಷ್ಟ್ರಪತಿಯಾಗಿ ಮಾಡಿದೆ; ಸಿಎಂ ಅಶೋಕ್​ ಗೆಹ್ಲೋಟ್​ ವಿವಾದಾತ್ಮಕ ಹೇಳಿಕೆ

ಕಳೆದ ಮಾರ್ಚ್​ನಲ್ಲಿ ಕೂಡ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಗೆಹ್ಲೋಟ್​, ಕಾಂಗ್ರೆಸ್​ ಮುಕ್ತ ಭಾರತವನ್ನು ನಿರ್ಮಾಣ ಮಾಡಲು ಹೋದ ಬಿಜೆಪಿ ಅಡ್ವಾಣಿ ಮುಕ್ತ ಭಾರತವನ್ನು ನಿರ್ಮಾಣ ಮಾಡಿದೆ ಎಂದು ವ್ಯಂಗ್ಯವಾಡಿದ್ದರು.

Sushma Chakre | news18
Updated:April 17, 2019, 3:37 PM IST
ದಲಿತರ ಮತಕ್ಕಾಗಿ ಬಿಜೆಪಿ ಅಡ್ವಾಣಿ ಬದಲು ಕೋವಿಂದ್​ರನ್ನು ರಾಷ್ಟ್ರಪತಿಯಾಗಿ ಮಾಡಿದೆ; ಸಿಎಂ ಅಶೋಕ್​ ಗೆಹ್ಲೋಟ್​ ವಿವಾದಾತ್ಮಕ ಹೇಳಿಕೆ
ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್
Sushma Chakre | news18
Updated: April 17, 2019, 3:37 PM IST
ನವದೆಹಲಿ (ಏ. 17): ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಬಿಜೆಪಿ ನಾಯಕ ಎಲ್​.ಕೆ. ಅಡ್ವಾಣಿ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, ಅವರಿಗೆ ಸಿಗಬೇಕಾದ ಗೌರವವನ್ನು ನೀಡುತ್ತಿಲ್ಲ ಎಂಬ ಆಕ್ಷೇಪ ಕೇಳಿಬರುತ್ತಲೇ ಇದೆ. ಇದೀಗ, ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಕೂಡ ಈ ಬಗ್ಗೆ ಪ್ರಸ್ತಾಪಿಸಿದ್ದು, ವೋಟ್​ ಬ್ಯಾಂಕ್​ ರಾಜಕೀಯಕ್ಕಾಗಿ ಅಡ್ವಾಣಿಯನ್ನು ಮೂಲೆಗೆ ಕೂರಿಸಿ ರಾಮನಾಥ್​ ಕೋವಿಂದ್​ ಅವರನ್ನು ರಾಷ್ಟ್ರಪತಿಯಾಗಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಎರಡನೇ ಹಂತದ ಲೋಕಸಭಾ ಚುನಾವಣೆಗೆ ಇನ್ನೇನು ಒಂದೇ ದಿನ ಇದೆ ಎನ್ನುವಾಗಲೇ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿದೆ ಎಂಬ ಬಗ್ಗೆ ಇಂದು ಹೇಳಿಕೆ ನೀಡಿರುವ ಗೆಹ್ಲೋಟ್​, ಈ ಬಾರಿಯ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಲಿತರ ಮತಗಳನ್ನು ಸೆಳೆಯಲೆಂದೇ ಅಡ್ವಾಣಿ ಬದಲು ರಾಮನಾಥ ಕೋವಿಂದ್​ ಅವರಿಗೆ ರಾಷ್ಟ್ರಪತಿ ಪಟ್ಟ ಕಟ್ಟಲಾಗಿದೆ ಎಂದಿದ್ದಾರೆ.

ಮಾಲೆಗಾಂವ್ ಬಾಂಬ್​ ಸ್ಫೋಟದ​​ ಆರೋಪಿ ಸಾಧ್ವಿ ಪ್ರಗ್ಯಾ ಬಿಜೆಪಿ ಸೇರ್ಪಡೆ; ಭೂಪಾಲ್​ನಲ್ಲಿ ದಿಗ್ವಿಜಯ ಸಿಂಗ್ ವಿರುದ್ಧ ಕಣಕ್ಕೆ?

ಮೊದಲು ಎಲ್​.ಕೆ. ಅಡ್ವಾಣಿಯವರನ್ನು ರಾಷ್ಟ್ರಪತಿಯಾಗಿ ಮಾಡಲಾಗುವುದು ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಆದರೆ, ಹಾಗೆ ಮಾಡಿದರೆ ಬಿಜೆಪಿಗೆ ಗುಜರಾತ್​ನಲ್ಲಿ ಸೋಲುವ ಭಯ ಕಾಡತೊಡಗಿತು. ಹಾಗಾಗಿ, ಮತ ಬ್ಯಾಂಕ್​ಗಾಗಿ ದಲಿತರೊಬ್ಬರನ್ನು ರಾಷ್ಟ್ರಪತಿಯನ್ನಾಗಿ ಘೋಷಿಸಲು ಬಿಜೆಪಿ ನಿರ್ಧರಿಸಿತು. ಇದರಿಂದಾಗಿ ಅಡ್ವಾಣಿಗೆ ಅವಕಾಶ ತಪ್ಪಿಹೋಯಿತು ಎಂದು ಅಶೋಕ್​ ಗೆಹ್ಲೋಟ್​ ಹೇಳಿದ್ದಾರೆ.

ಅಂದಹಾಗೆ, ಅಡ್ವಾಣಿಯನ್ನು ಬಿಜೆಪಿ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಮಾರ್ಚ್​ನಲ್ಲಿ ಕೂಡ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಗೆಹ್ಲೋಟ್​, ಕಾಂಗ್ರೆಸ್​ ಮುಕ್ತ ಭಾರತವನ್ನು ನಿರ್ಮಾಣ ಮಾಡಲು ಹೋದ ಬಿಜೆಪಿ ಅಡ್ವಾಣಿ ಮುಕ್ತ ಭಾರತವನ್ನು ನಿರ್ಮಾಣ ಮಾಡಿದೆ ಎಂದು ವ್ಯಂಗ್ಯವಾಡಿದ್ದರು.

'ನಾನು ಪ್ರಧಾನಿ ಮೋದಿ ಅವರಂತಲ್ಲ, 15 ಲಕ್ಷ ಹಣ ಹಾಕುತ್ತೇನೆ ಎಂದು ಸುಳ್ಳು ಹೇಳುವುದಿಲ್ಲ'; ರಾಹುಲ್ ವಾಗ್ದಾಳಿ
Loading...

ಗೆಹ್ಲೋಟ್​ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು, ಈ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಗೆಹ್ಲೋಟ್​ ವಿನಾಕಾರಣ ದಲಿತ ಸಮುದಾಯವನ್ನು ಟೀಕಿಸಿ ಅವಮಾನ ಮಾಡುತ್ತಿದ್ದಾರೆ. ದಲಿತ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್​ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್​ ಡಾ. ಬಿ.ಆರ್​. ಅಂಬೇಡ್ಕರ್​ ವಿರುದ್ಧ ಕೂಡ ಅವಹೇಳನಕಾರಿ ಹೇಳಿಕೆ ನೀಡಿತ್ತು. ರಾಷ್ಟ್ರಪತಿಗಳ ವಿರುದ್ಧ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಲಾಗಿದೆ.

 

First published:April 17, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626