HOME » NEWS » National-international » ASSAM ASSEMBLY POLLS BJP ALLY BODOLAND PEOPLES FRONT JOINS CONGRESS GRAND ALLIANCE RHHSN

Assam Assembly Polls: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಕೈ ಹಿಡಿದ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್

ಅಸ್ಸಾಂನಲ್ಲಿ 126 ಕ್ಷೇತ್ರಗಳಿಗೆ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 

news18-kannada
Updated:February 27, 2021, 9:46 PM IST
Assam Assembly Polls: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಕೈ ಹಿಡಿದ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್
ಬಿಪಿಎಫ್ ಅಧ್ಯಕ್ಷ ಹಗ್ರಾಮ ಮೊಹಿಲರಿ
  • Share this:
ಬೊಡೊಲ್ಯಾಂಡ್ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಹುದೊಡ್ಡ ಬೆಳವಣಿಗೆ ಆಗಿದೆ. ಆಡಳಿತಾರೂಢ ಬಿಜೆಪಿ ಜೊತೆಗೆ ಮೈತ್ರಿಯಾಗಿದ್ದ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಬಿಜೆಪಿ ಮೈತ್ರಿಗೆ ವಿದಾಯ ಹೇಳಿ ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿ ಸೇರಿದೆ. ಸರಬಾನಂದ ಸೊನೊವಾಲ್ ನೇತೃತ್ವದ ಹಾಲಿ ಸರ್ಕಾರದಲ್ಲಿ ಬಿಪಿಎಫ್ 12 ವಿಧಾನಸಭೆ ಸದಸ್ಯರಿದ್ದು, ಮೂವರು ಮಂತ್ರಿಗಳಾಗಿದ್ದಾರೆ.

“ಶಾಂತಿ, ಐಕ್ಯತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು, ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿ ಸೇರಲು ನಿರ್ಧರಿಸಿದೆ. ನಾವು ಇನ್ನು ಮುಂದೆ ಬಿಜೆಪಿಯೊಂದಿಗೆ ಸ್ನೇಹ ಅಥವಾ ಮೈತ್ರಿ ಮಾಡಿಕೊಳ್ಳುವುದಿಲ್ಲ,”ಎಂದು ಬಿಪಿಎಫ್ ಅಧ್ಯಕ್ಷ ಹಗ್ರಾಮ ಮೊಹಿಲರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

To work for Peace, Unity and Development the Bodoland People’s Front (BPF) has decided to join hands with MAHAJATH in the forthcoming Assam Assembly Election. We shall no longer maintain friendship or alliance with BJP.ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಅವರು ಬಿಪಿಎಫ್ ಕೃತಜ್ಞತೆ ಸಲ್ಲಿಸಿದ್ದಾರೆ. “ಅಸ್ಸಾಂನ ಪ್ರತಿಯೊಂದು ಮೂಲೆಯಲ್ಲೂ ನಂಬಿಕೆ ಎಂದರೆ ಕಾಂಗ್ರೆಸ್. ಬೋಡೋಸ್‌ನ ನೆಚ್ಚಿನ ಪಕ್ಷವಾದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ಇದನ್ನು ಒಪ್ಪಿ, ನಮ್ಮೊಂದಿಗೆ ಕೈಜೋಡಿಸಿದೆ. ಹಗ್ರಾಮ ಮೊಹಿಲ್ಲರಿ ಅವರು ಕಾಂಗ್ರೆಸ್‌ನಲ್ಲಿ ತೋರಿಸಿರುವ ಹೊಸ ವಿಶ್ವಾಸಕ್ಕೆ ನಾವು ಆಭಾರಿಯಾಗಿದ್ದೇವೆ ”ಎಂದು ಗೊಗೊಯ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಮಾರ್ಚ್ 27ರಂದು, ಏಪ್ರಿಲ್ 1ರಂದು ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನವಾದರೆ, ಎರಡನೇ ಹಂತದಲ್ಲಿ 39 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಹಾಗೂ ಕೊನೆಯ ಹಂತದ ಚುನಾವಣೆಯಲ್ಲಿ 40 ಕ್ಷೇತ್ರಗಳಿಗೆ ಮತದಾನವಾಗಲಿದೆ. ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ 2.29 ಕೋಟಿ ಜನರು ಮತ ಚಲಾಯಿಸಲಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 33,530 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.ಇದನ್ನು ಓದಿ: Five States Election: ಕೊರೋನಾ ಬಳಿಕ 5 ರಾಜ್ಯಗಳಿಗೆ ನಡೆಯುತ್ತಿರುವ 2ನೇ ಚುನಾವಣೆ, ಆಯೋಗಕ್ಕೆ ಕಠಿಣ ಸವಾಲು

ಇದೇ ವರ್ಷದಲ್ಲಿ ಒಂದು ಕೇಂದ್ರಾಡಳಿತ ಪ್ರದೇಶ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮಬಂಗಾಳ ಹಾಗೂ ಪುದುಚೇರಿ ರಾಜ್ಯಗಳಲ್ಲಿ ವಿವಿಧ ಹಂತದಲ್ಲಿ ಮಾರ್ಚ್ ಹಾಗೂ ಏಪ್ರಿಲ್​ನಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಒಂದೇ ದಿನದಲ್ಲಿ ಪ್ರಕಟವಾಗಲಿದೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ಕೇರಳದ 14 ಜಿಲ್ಲೆಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಅಸ್ಸಾಂನಲ್ಲಿ 126 ಕ್ಷೇತ್ರಗಳಿಗೆ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 2ಎಂದು ಫಲಿತಾಂಶ ಪ್ರಕಟವಾಗಲಿದೆ.
Published by: HR Ramesh
First published: February 27, 2021, 9:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories