ಗುವಾಹಟಿ (ಜೂ. 30): ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೈಋತ್ಯ ರಾಜ್ಯಗಳಲ್ಲಿ ಪ್ರವಾಹ ಎದುರಾಗಿದೆ. ಅಸ್ಸಾಂ, ಸಿಕ್ಕಿಂ, ಮೇಘಾಲಯ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಪ್ರವಾಹದಿಂದ ಅಸ್ಸಾಂನಲ್ಲಿ 25 ಜಿಲ್ಲೆಗಳ ಜನರು ಆತಂಕಕ್ಕೆ ಒಳಗಾಗಿದ್ದು, 24 ಜನರು ಸಾವನ್ನಪ್ಪಿದ್ದಾರೆ.
ಬಿಹಾರ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಬಂಗಾಳದ ಹಲವು ಕಡೆ ಹಾಗೂ ಸಿಕ್ಕಿಂನಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಸ್ಸಾಂ ರಾಜ್ಯದ 25 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಈಗಾಗಲೇ ಇಲ್ಲಿನ 13.16 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ 273 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಇದನ್ನೂ ಓದಿ: Vizag Gas Leak: ವಿಶಾಖಪಟ್ಟಣದ ವೈಜಾಗ್ನಲ್ಲಿ ಮತ್ತೆ ಗ್ಯಾಸ್ ಸೋರಿಕೆ; ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ
ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಅಸ್ಸಾಂನ 13,16,927 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಈಡಾಗಿದ್ದಾರೆ. 24 ಜನರು ಸಾವನ್ನಪ್ಪಿದ್ದು, 273 ಸಂತ್ರಸ್ತ ಕೇಂದ್ರಗಳಿಗೆ 27,452 ಜನರನ್ನು ಶಿಫ್ಟ್ ಮಾಡಲಾಗಿದೆ. ಪ್ರವಾಹದಿಂದ ಅಸ್ಸಾಂನ 7,63,764 ದೊಡ್ಡ ಪ್ರಾಣಿಗಳು, 4,07,838 ಸಣ್ಣ ಪ್ರಾಣಿಗಳು ತೊಂದರೆಗೀಡಾಗಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ