Afghanistan: ಕಾಬೂಲ್‌ನ ಮಸೀದಿಯಲ್ಲಿ ಸ್ಫೋಟ, 20 ಸಾವು, 50 ಮಂದಿಗೆ ಗಾಯ!

ಕಾಬೂಲ್‌ನ ಪಿಡಿ 17 ರಲ್ಲಿ ಇಂದು ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ದೃಢಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕಾಬೂಲ್(ಆ.18): ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ (Afghanistan Capital Kabui) ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Mosque Explosion in Kabul) ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಕಾಬೂಲ್‌ನ ಪಿಡಿ 17 ರಲ್ಲಿ ಇಂದು ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ದೃಢಪಡಿಸಿದ್ದಾರೆ. ಉತ್ತರ ಕಾಬೂಲ್‌ನ ನೆರೆಹೊರೆಯಲ್ಲಿ ಸ್ಫೋಟಗಳು (Blasts) ಕೇಳಿ ಬಂದವು, ಹತ್ತಿರದ ಕಟ್ಟಡಗಳ ಕಿಟಕಿಗಳು ಒಡೆದುಹೋಗಿವೆ, ಆಂಬ್ಯುಲೆನ್ಸ್ ಸ್ಥಳಕ್ಕೆ ಬಂದು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಾರಂಭಿಸಿತು ಎಂದು ಸ್ಫೋಟದ ಸಮಯದಲ್ಲಿ ಅಲ್ಲಿದ್ದ ಜನರು ರಾಯಿಟರ್ಸ್‌ಗೆ ತಿಳಿಸಿದರು.

ಇದನ್ನೂ ಓದಿ: Bomb Blast: ಬಾಂಬ್ ಸ್ಫೋಟದಲ್ಲಿ 9 ಮಂದಿ ಸಾವು, ಹಲವರಿಗೆ ಗಂಭೀರ ಗಾಯ! ವಿಧ್ವಂಸಕ ಕೃತ್ಯದ ಹಿಂದೆ ಯಾರಿದ್ದಾರೆ?

ರಾಯಿಟರ್ಸ್ ವರದಿಯ ಪ್ರಕಾರ, ಬುಧವಾರ ಸಂಜೆ ಪ್ರಾರ್ಥನೆಯ ಸಮಯದಲ್ಲಿ ಕಾಬೂಲ್‌ನ ಮಸೀದಿಯಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಗಾಯಗೊಂಡವರ ಸಂಖ್ಯೆಯ ಬಗ್ಗೆ ಪೊಲೀಸರು ಯಾವುದೇ ನಿಖರ ಮಾಹಿತಿ ನೀಡಿಲ್ಲ. 35 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ತಾಲಿಬಾನ್ ಗುಪ್ತಚರ ಅಧಿಕಾರಿ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಸಾವಿನ ಸಂಖ್ಯೆ 20 ಎಂದು ಅಪರಿಚಿತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ. ಏಳು ವರ್ಷದ ಮಗು ಸೇರಿದಂತೆ 27 ಗಾಯಗೊಂಡ ರೋಗಿಗಳನ್ನು ತಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್‌ನ ತುರ್ತು ಆಸ್ಪತ್ರೆ ಟ್ವಿಟರ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ:  Varanasi Bomb Blast Case 2006: ವಾರಣಾಸಿ ಬಾಂಬ್ ಸ್ಪೋಟ ಪ್ರಕರಣ: 16 ವರ್ಷದ ನಂತರ ಅಪರಾಧಿ ವಾಲಿವುಲ್ಲಾಗೆ ಗಲ್ಲು ಶಿಕ್ಷೆ ಪ್ರಕಟ

ಪ್ರತ್ಯಕ್ಷದರ್ಶಿಗಳು ಹೇಳೋದೇನು?

ಉತ್ತರ ಕಾಬೂಲ್ ನೆರೆಹೊರೆಯಲ್ಲಿ ಪ್ರಬಲವಾದ ಸ್ಫೋಟದ ಸದ್ದು ಕೇಳಿಸಿದ್ದು, ಸಮೀಪದ ಕಟ್ಟಡಗಳ ಕಿಟಕಿಗಳು ಒಡೆದು ಹೋಗಿವೆ ಎಂದು ಪ್ರತ್ಯಕ್ಷದರ್ಶಿಗಳು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿತು. ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ “ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಅನೇಕ ಸಾವುನೋವುಗಳು ಸಂಭವಿಸಿವೆ, ಆದರೆ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.


ಅಫ್ಗಾನಿಸ್ತಾನದಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ ಎಂದು ತಾಲಿಬಾನ್ ಹೇಳಿಕೊಳ್ಳುತ್ತಿದೆ. ಇನ್ನೊಂದೆಡೆ ನಾಗರಿಕರನ್ನು ಗುರಿಯಾಗಿಸಿ ಇಸ್ಲಾಮಿಕ್ ಸ್ಟೇಟ್ ನಿರಂತರ ದಾಳಿ ನಡೆಸುತ್ತಲೇ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Bomb Threat Message: ಡಿಕೆಶಿ ಮಾಲೀಕತ್ವದ ಶಾಲೆಗೆ ಬಾಂಬ್ ಬೆದರಿಕೆ! ಮಕ್ಕಳು, ಪೋಷಕರಲ್ಲಿ ಆತಂಕ

ಎರಡು ವಾರಗಳ ಹಿಂದೆಯಷ್ಟೇ ಕಾಬೂಲ್‌ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದಲ್ಲಿ 10 ಮಂದಿ ಮೃತಪಟ್ಟಿದ್ದರು.

ಕಳೆದ ವರ್ಷ ಅಫ್ಗಾನಿಸ್ತಾನದಿಂದ ತನ್ನ ಸೇನೆಯನ್ನು ಅಮೆರಿಕ ಹಿಂತೆಗೆದುಕೊಂಡಿತ್ತು. ಈ ವೇಳೆ ತಾನಿಬಾನ್‌‌ಗಳು ಅಫ್ಗಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಿದ್ದರು
Published by:Precilla Olivia Dias
First published: