ಛತ್ತೀಸ್ಗಢ(ಏ.03): ನಕ್ಸಲರು ಮತ್ತು ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 8 ಮಂದಿ ಭಾರತೀಯ ಸೈನಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಬಿಜಾಪುರ್ನಲ್ಲಿ ನಡೆದಿದೆ.
6 ಡಿಆರ್ಜಿ ಸಿಬ್ಬಂದಿ ಹಾಗೂ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಸೇರಿ ಒಟ್ಟು 6 ಮಂದಿ ಸೈನಿಕರು ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾರೆ. ಸೈನಿಕರು ಹಾಗೂ ನಕ್ಸಲರ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಇನ್ನೂ ಸಹ ಸ್ಥಳದಲ್ಲಿ ಎನ್ಕೌಂಟರ್ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
Coronavirus Pandemic: ಪರೀಕ್ಷೆ ನಡೆಸದೆ 1-8ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಮಹಾರಾಷ್ಟ್ರ ಸರ್ಕಾರ
ತಾರೆಮ್ ಪ್ರದೇಶದ ಸಿಲೆಗರ್ ಅರಣ್ಯ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ನಲ್ಲಿ ಈಗಾಗಲೇ 6 ಮಂದಿ ಸೈನಿಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಸಹ ಎನ್ಕೌಂಟರ್ ನಡೆಯುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ