HOME » NEWS » National-international » AT THE FOREFRONT OF COVID 19 BATTLE WHO CHIEF GOES INTO QUARANTINE AFTER CONTACT TESTS POSITIVE LG

ಕೊರೋನಾ ಸೋಂಕಿತನೊಂದಿಗೆ ಸಂಪರ್ಕ; ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಸ್ವಯಂ ಕ್ವಾರಂಟೈನ್

ಸಾಂಕ್ರಾಮಿಕ ರೋಗ ಕೊರೋನಾ ವಿರುದ್ಧದ ಹೋರಾಟದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅವಿರತವಾಗಿ ಶ್ರಮಿಸಿದ್ದಾರೆ. ನಾವೆಲ್ಲರೂ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸುವುದು ಬಹಳಷ್ಟು ಮುಖ್ಯ ಎಂದು ಪದೇ ಪದೇ ವಿಶ್ವಕ್ಕೆ ಎಚ್ಚರಿಕೆಯನ್ನು ನೀಡುತ್ತಾ ಬಂದಿದ್ದಾರೆ.

news18-kannada
Updated:November 2, 2020, 9:31 AM IST
ಕೊರೋನಾ ಸೋಂಕಿತನೊಂದಿಗೆ ಸಂಪರ್ಕ; ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಸ್ವಯಂ ಕ್ವಾರಂಟೈನ್
ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ
  • Share this:
ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರಿಗೂ ಕೊರೋನಾ ಭೀತಿ ಆವರಿಸಿದೆ. ಕೊರೋನಾ ಸೋಂಕು ದೃಢಪಟ್ಟಿದ್ದ ವ್ಯಕ್ತಿಯನ್ನು ಸಂಪರ್ಕಿಸಿದ ಬಳಿಕ ತಾವು ಕೂಡ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಆದರೆ ಯಾವುದೇ ರೋಗ ಲಕ್ಷಣಗಳಿಲ್ಲ ಎಂಬುದಾಗಿ ಅವರೇ ಖುದ್ದಾಗಿ ತಿಳಿಸಿದ್ದಾರೆ. ಹೌದು, ಸೋಂಕಿತನೊಂದಿಗೆ ಸಂಪರ್ಕ ಹೊಂದಿದ ವಿಚಾರ ತಿಳಿಯುತ್ತಲೇ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧಾನಮ್ ಘೆಬ್ರೆಯೆಸಸ್ ಅವರು ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಈ ಕುರಿತಾಗಿ ಮುಖ್ಯಸ್ಥರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಕೋವಿಡ್-19 ಸೋಂಕಿತರೊಬ್ಬರೊಂದಿಗೆ ನಾನು ಸಂಪರ್ಕ ಹೊಂದಿರುವುದು ಗೊತ್ತಾಗಿದೆ. ಯಾವುದೇ ರೋಗ ಲಕ್ಷಣಗಳಿಲ್ಲದೇ ನಾನು ಆರೋಗ್ಯವಾಗಿದ್ದೇನೆ. ಆದರೂ ಸಹ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಅನುಸಾರ ಕೆಲ ದಿನಗಳ ಕಾಲ ನಾನು ಸ್ವಯಂ ಕ್ವಾರಂಟೈನ್​​ನಲ್ಲಿರುತ್ತೇನೆ. ಹೀಗಾಗಿ ಮನೆಯಿಂದಲೇ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಹಳೇಬೀಡು ದ್ವಾರಸಮುದ್ರ ಕೆರೆ ಅಭಿವೃದ್ಧಿಗೆ ಪಣ; ಸಚಿವ ಕೆ.ಗೋಪಾಲಯ್ಯ

ಸಾಂಕ್ರಾಮಿಕ ರೋಗ ಕೊರೋನಾ ವಿರುದ್ಧದ ಹೋರಾಟದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅವಿರತವಾಗಿ ಶ್ರಮಿಸಿದ್ದಾರೆ. ನಾವೆಲ್ಲರೂ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸುವುದು ಬಹಳಷ್ಟು ಮುಖ್ಯ ಎಂದು ಪದೇ ಪದೇ ವಿಶ್ವಕ್ಕೆ ಎಚ್ಚರಿಕೆಯನ್ನು ನೀಡುತ್ತಾ ಬಂದಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಚೀನಾದಲ್ಲಿ ಹೊರಹೊಮ್ಮಿದ ಈ ಮಾರಕ ಕೊರೋನಾ ವೈರಸ್​ ಈವರೆಗೆ ಸುಮಾರು 12 ಲಕ್ಷ ಜನರನ್ನು ಬಲಿ ತೆಗೆದುಕೊಂಡಿದೆ. ಅಲ್ಲದೇ ವಿಶ್ವಾದ್ಯಂತ 4 ಕೋಟಿ 60 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
Published by: Latha CG
First published: November 2, 2020, 9:27 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories