ಅಟಲ್ ಭೂಜಲ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಉಪಯೋಗ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯ ಲಾಭವನ್ನು ಕರ್ನಾಟಕ ಸೇರಿದಂತೆ ದೇಶದ ಸುಮಾರು 6 ರಾಜ್ಯಗಳು ಪಡೆಯಲಿವೆ ಎಂದು ಈ ವೇಳೆ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ.

ಪ್ರಧಾನಿ ನರೇಂದ್ರ ಮೋದಿ.

  • Share this:
ದೆಹಲಿ (ಡಿಸೆಂಬರ್ 25); ದೇಶದಲ್ಲಿ ಅಂತರ್ಜಲದ ನೀರಿನ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಅಟಲ್ ಭೂ ಜಲ ಯೋಜನೆಗೆ ಚಾಲನೆ ನೀಡಿದ್ದಾರೆ.

ಇಂದು ದೆಹಲಿಯ ವಿಜ್ಞಾನ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಹುಟ್ಟುಹಬ್ಬದ ಪ್ರಯುಕ್ತ ಅಂತರ್ಜಲವನ್ನು ಹೆಚ್ಚಿಸುವ ಸುಮಾರು 6 ಸಾವಿರ ಕೋಟಿ ವೆಚ್ಚದ ಅಟಲ್ ಭೂ ಜಲ ಯೋಜನೆಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯ ಲಾಭವನ್ನು ಕರ್ನಾಟಕ ಸೇರಿದಂತೆ ದೇಶದ ಸುಮಾರು 6 ರಾಜ್ಯಗಳು ಪಡೆಯಲಿವೆ ಎಂದು ಈ ವೇಳೆ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಅಟಲ್ ಭೂ ಜಲ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ನೀರು ಅತೀ ಅಮೂಲ್ಯವಾದ ವಿಚಾರವಾಗಿದ್ದು, ನಾವು ನಮ್ಮ ಮುಂದಿನ ಪೀಳಿಗೆಗೆ ನೀರನ್ನು ಉಳಿಸಬೇಕಿದೆ. ಹೀಗಾಗಿ ಮಳೆ ನೀರನ್ನು ಅಂತರ್ಜಲವಾಗಿ ಉಳಿಸುವ ಅಗತ್ಯವಿದ್ದು, ಈ ಕೆಲಸಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು ಗೋಲಿಬಾರ್​ನಲ್ಲಿ ಮೃತಪಟ್ಟವರಿಗೆ 1 ರೂ ಕೂಡ ಪರಿಹಾರ ಕೊಡಲ್ಲ; ಬಿಎಸ್​ವೈ ಸ್ಪಷ್ಟನೆ
Published by:MAshok Kumar
First published: