ಅಜಾತ ಶತ್ರು ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ರಾಜಕೀಯ ದಿಗ್ಗಜರ ಭೇಟಿ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ವಿಚಾರಿಸಲು ರಾಜಕೀಯ ನಾಯಕರ ದಂಡೇ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಭೇಟಿ ನೀಡುತ್ತಿದೆ.

Sharath Sharma Kalagaru | news18
Updated:August 16, 2018, 1:51 PM IST
ಅಜಾತ ಶತ್ರು ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ರಾಜಕೀಯ ದಿಗ್ಗಜರ ಭೇಟಿ
ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ವಿಚಾರಿಸಲು ರಾಜಕೀಯ ನಾಯಕರ ದಂಡೇ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಭೇಟಿ ನೀಡುತ್ತಿದೆ.
Sharath Sharma Kalagaru | news18
Updated: August 16, 2018, 1:51 PM IST
- ನವದೆಹಲಿ (ಆಗಸ್ಟ್​ 16): ಅಜಾತ ಶತ್ರು ಎಂದೇ ಖ್ಯಾತನಾಮರಾಗಿರುವ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯ ರಾಜಕೀಯ ನಾಯಕನ ಆರೋಗ್ಯ ವಿಚಾರಿಸಲು rಆಜಕೀಯ ಮುಖಂಡರ ದಂಡೇ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಧಾವಿಸುತ್ತಿದೆ.

ಕಳೆದ ಕೆಲ ದಿನಗಳಿಂದ ಅಟಲ್​ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿತ್ತು. ಅದರ ಬೆನ್ನಲ್ಲೇ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈಗವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಏಮ್ಸ್​ ಆಡಳಿತ ಮಂಡಳಿ ತಿಳಿಸಿದೆ.

ಬುಧವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ಏಮ್ಸ್​ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ನೆಚ್ಚಿನ ನಾಯಕ ಮತ್ತು ರಾಜಕೀಯ ಗುರು ವಾಜಪೇಯಿಯವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಇಂದು ಮುಂಜಾನೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಅದಾದ ನಂತರ 9 ಗಂಟೆ ಸುಮಾರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ ಕೂಡ ಭೇಟಿ ನೀಡಿ ವಾಜಪೇಯಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಧರ್ಮೇಂದ್ರ ಪ್ರಧಾನ್​ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮಾಜಿ ಪ್ರಧಾನಿ ಮನ್​ಮೋಹನ್​ ಸಿಂಗ್​, ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿ, ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್, ಧರ್ಮೇಂದ್ರ ಪ್ರಧಾನ್​, ಜೆಪಿ ನಡ್ಡಾ​ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಧ್ಯಾಹ್ನ 2.50ಕ್ಕೆ ಕೋಲ್ಕತ್ತಾದಿಂದ ದೆಹಲಿಗೆ ಹೊರಡಲಿದ್ದಾರೆ.
First published:August 16, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ