Aurangabad Train Accident: ಔರಂಗಾಬಾದ್​ ರೈಲು ದುರಂತ; ಸಾವನ್ನಪ್ಪಿದವರ ಕುಟುಂಬಕ್ಕೆ ಮಧ್ಯಪ್ರದೇಶ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ

Aurangabad Train Accident: ಔರಂಗಾಬಾದ್ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್

ಶಿವರಾಜ್ ಸಿಂಗ್ ಚೌಹಾಣ್

  • Share this:
ಔರಂಗಾಬಾದ್ (ಮೇ 8): ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಇಂದು ಬೆಳಗ್ಗೆ 5 ಗಂಟೆ ವೇಳೆಗೆ ಗೂಡ್ಸ್​ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ.  ಲಾಕ್​ಡೌನ್​ನಿಂದ ಮಹಾರಾಷ್ಟ್ರದಲ್ಲಿ ಸಿಲುಕಿಕೊಂಡಿದ್ದ ಮಧ್ಯಪ್ರದೇಶದ ಕಾರ್ಮಿಕರು ರೈಲ್ವೆ ಹಳಿಯನ್ನು ಅನುಸರಿಸಿ ತಮ್ಮ ಊರಿಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಸುಸ್ತಾದ ಕಾರ್ಮಿಕರು ವಿಶ್ರಾಂತಿಗೆಂದು ನಿನ್ನೆ ರಾತ್ರಿ ಹಳಿಯ ಮೇಲೆ ಮಲಗಿದ್ದರು. ಇಂದು ಬೆಳಗ್ಗೆ ಜಾಲ್ನಾದಿಂದ ಔರಂಗಾಬಾದ್​ನತ್ತ ತೆರಳುತ್ತಿದ್ದ ಗೂಡ್ಸ್​ ರೈಲು ಹಳಿಯ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Aurangabad Train Accident: ಔರಂಗಾಬಾದ್​ ದುರಂತ; ರೈಲು ನಿಲ್ಲಿಸಲು ಚಾಲಕ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದ ರೈಲ್ವೆ ಇಲಾಖೆ

ಜಾಲ್ನಾದಿಂದ 170 ಕಿ.ಮೀ. ದೂರದ ಭುವಸಾಲ್​ಗೆ ನಡೆದುಕೊಂಡು ಹೋಗುತ್ತಿದ್ದ ವಲಸೆ ಕಾರ್ಮಿಕರು ಇನ್ನು 45 ಕಿ.ಮೀ. ನಡೆದರೆ ಊರು ಸೇರುತ್ತಿದ್ದರು. ನಿದ್ರೆಯಲ್ಲೇ ಸಾವನ್ನಪ್ಪಿದ ಕಾರ್ಮಿಕರ ದುರಂತ ಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್ ಘೋಷಿಸಿದ್ದಾರೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ರೈಲ್ವೆ ಇಲಾಖೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಇದನ್ನೂ ಓದಿ: Aurangabad Accident: ಔರಂಗಾಬಾದ್‌ನಲ್ಲಿ ರೈಲ್ವೆ ಹಳಿಯ ಮೇಲೆ ಮಲಗಿದ್ದ 17 ವಲಸೆ ಕಾರ್ಮಿಕರ ಮೇಲೆ ಹರಿದ ರೈಲು

ಇಂದು ಮುಂಜಾನೆ ಗೂಡ್ಸ್​ ರೈಲು ಹೋಗುವ ಹಳಿಯ ಮೇಲೆ ಜನರು ಮಲಗಿರುವುದು ಲೋಕೋ ಪೈಲಟ್ ಗಮನಕ್ಕೆ ಬಂದಿದೆ. ತಕ್ಷಣ ಅವರು ರೈಲನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗದೆ ರೈಲು ಜನರ ಮೇಲೆ ಹರಿದಿದೆ. ಬದ್ನಾಪುರ್ ಮತ್ತು ಕರ್ಮಾಡ್​ ರೈಲ್ವೆ ನಿಲ್ದಾಣಗಳ ನಡುವೆ ಈ ದುರಂತ ನಡೆದಿದೆ. ಗಾಯಗೊಂಡವರನ್ನು ಔರಂಗಾಬಾದ್​ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
First published: