news18-kannada Updated:February 18, 2021, 10:23 AM IST
JOB
ಆಕ್ಸಿಸ್ ಬ್ಯಾಂಕ್ ನಲ್ಲಿ 11256 ಬ್ಯುಸಿನೆಸ್ ಅಸೋಸಿಯೇಟ್ ಮತ್ತು ಟೀಂ ಮೆಂಬರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಫೆಬ್ರವರಿ 28, 2021ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ: ಪದವಿ, ಪೋಸ್ಟ್ ಗ್ರಾಜುಯೇಟ್, ಎಂಬಿಎ ಮತ್ತು ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಬ್ಯಾಂಕ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್
https://www.axisbank.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
ಫೆಬ್ರವರಿ 28,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Published by:
Harshith AS
First published:
February 18, 2021, 10:23 AM IST