Ayodhya Judgement: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ವಿಧಿಸಿದ ಷರತ್ತುಗಳೇನು?

ಜಾಗದ ಹಕ್ಕುದಾರಿಕೆಗೆ ಅರ್ಜಿ ಹಾಕಿದ್ದ ಸುನ್ನಿ ಬೋರ್ಡ್​​ಗೆ 5 ಎಕರೆ ಪರ್ಯಾಯ ಜಾಗ ನೀಡಲಾಗುತ್ತಿದೆ. ಇಲ್ಲಿ ಮಸೀದಿ ನಿರ್ಮಾಣ ಮಾಡಬೇಕೋ ಅಥವಾ ಬೇಡವೋ ಎನ್ನುವುದು ಸುನ್ನಿ ಬೋರ್ಡ್ ವಿವೇಚನೆಗೆ ಬಿಟ್ಟಿದ್ದು ಎಂದು ಕೋರ್ಟ್​ ಹೇಳಿದೆ.

Rajesh Duggumane | news18-kannada
Updated:November 9, 2019, 12:35 PM IST
Ayodhya Judgement: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ವಿಧಿಸಿದ ಷರತ್ತುಗಳೇನು?
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ನ.9): ವಿವಾದಿತ ರಾಮಜನ್ಮಭೂಮಿ ಪ್ರಕರಣದ ವಿವಾದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ಪ್ರಕಟ ಮಾಡಿದೆ. ಎಲ್ಲಾ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್​ನ ಸಾಂವಿಧಾನಿಕ ಪೀಠ, ಕೇವಲ ನಂಬಿಕೆಗಳಿಂದ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಜತೆಗೆ ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಇನ್ನು ಮುಸ್ಲಿಂ ಸಮುದಾಯಕ್ಕೆ ಬದಲಿ ಜಾಗವನ್ನು ನೀಡಲು ಸಹ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಈ ಮೂಲಕ ಅತಿ ಹಳೆಯ ವಿವಾದಕ್ಕೆ ತೆರೆ ಎಳೆದಿದೆ.  ಇದೇ ತಿಂಗಳ 17ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ನವೆಂಬರ್​ 17ರಂದು ತೀರ್ಪು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಿದೆ.

ತೀರ್ಪಿನಲ್ಲಿರುವ ಷರತ್ತುಗಳೇನು?:

ಸುಪ್ರೀಂಕೋರ್ಟ್​​ ವಿವಾದಿತ ಅಯೋಧ್ಯೆ ಜಾಗವನ್ನು ರಾಮಲಲ್ಲಾಗೆ ನೀಡಿದೆ. ಆದರೆ,  ರಾಮಲಲ್ಲಾಗೆ ಮಂದಿರ ನಿರ್ಮಾಣದ ಹಕ್ಕಿಲ್ಲ ಎಂದು ಹೇಳಿದೆ. ವಿವಾದಿತ ಜಾಗವನ್ನು ಕೇಂದ್ರಸರ್ಕಾರಕ್ಕೆ ಒಪ್ಪಿಸಬೇಕು. ಕೇಂದ್ರ ಸರ್ಕಾರ ಮೂರು ತಿಂಗಳ ಒಳಗೆ ಟ್ರಸ್ಟ್ ರಚಿಸಬೇಕು. ನಂತರ ಈ ಜಾಗ ಟ್ರಸ್ಟ್​ಗೆ ಹಸ್ತಾಂತರವಾಗಲಿದೆ. ಟ್ರಸ್ಟ್ ಮೇಲುಸ್ತುವಾರಿಯಲ್ಲೇ ಮಂದಿರ ನಿರ್ಮಾಣವಾಗಬೇಕು. ಇದರಲ್ಲಿ ಬೇರೆ ಯಾರೊಬ್ಬರೂ ತಲೆ ಹಾಕುವಂತಿಲ್ಲ ಎಂದು ಕೋರ್ಟ್​ ಹೇಳಿದೆ.

ಜಾಗದ ಹಕ್ಕುದಾರಿಕೆಗೆ ಅರ್ಜಿ ಹಾಕಿದ್ದ ಸುನ್ನಿ ಬೋರ್ಡ್​​ಗೆ 5 ಎಕರೆ ಪರ್ಯಾಯ ಜಾಗ ನೀಡಲಾಗುತ್ತಿದೆ. ಇಲ್ಲಿ ಮಸೀದಿ ನಿರ್ಮಾಣ ಮಾಡಬೇಕೋ ಅಥವಾ ಬೇಡವೋ ಎನ್ನುವುದು ಸುನ್ನಿ ಬೋರ್ಡ್ ವಿವೇಚನೆಗೆ ಬಿಟ್ಟಿದ್ದು. ಪರ್ಯಾಯ ಜಾಗವನ್ನು ಇತರೆ ಅವಶ್ಯಕತೆಗೂ ಬಳಸಬಹುದು ಎಂದು ಕೋರ್ಟ್​​ ಆದೇಶದಲ್ಲಿ ತಿಳಿಸಿದೆ.

ಏನಿದು ಪ್ರಕರಣ?:

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. 1528 ಶ್ರೀರಾಮ ಹುಟ್ಟಿದ ಸ್ಥಳ ಎಂದು ನಂಬಲಾಗುವ ಅಯೋಧ್ಯೆಯಲ್ಲಿ ಬಾಬರ್‌ ಮಸೀದಿ ನಿರ್ಮಾಣ ಮಾಡಿದ್ದ. ರಾಮ ಮಂದಿರ ಕೆಡವಿ ದೇವಾಲಯ ನಿರ್ಮಿಸಲಾಗಿದೆ ಎಂಬುದು ಆರೋಪ.ಇದು ಸುಳ್ಳು. ಬಾಬ್ರಿ ಮಸೀದಿ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದ. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳುತ್ತಿದೆ. 2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಗುಂಪುಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸಿ, ತೀರ್ಪು ನೀಡಿದೆ.First published:November 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading