Bank of India recruitment 2020: ಖಾಲಿ ಇರುವ 214 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Bank of India Job Vacancies:ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಖಾಲಿ ಇರುವ 214 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಭಾರತೀಯ ಪ್ರಜೆಯಾಗಿರಬೇಕು. ಕನಿಷ್ಠ 20 ವರ್ಷ, ಗರಿಷ್ಠ 38 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದೆ. ಶಿಕ್ಷಣ ಮತ್ತು ಅರ್ಹತೆಯ ಮೇರೆಗೆ ಆಯ್ಕೆ ಮಾಡಲಾಗುತ್ತದೆ.

news18-kannada
Updated:September 15, 2020, 3:34 PM IST
Bank of India recruitment 2020: ಖಾಲಿ ಇರುವ 214 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್​
  • Share this:
ಬ್ಯಾಂಕ್​ ಆಫ್​​ ಇಂಡಿಯಾದಲ್ಲಿ ಖಾಲಿ ಇರುವ 214 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್​ 16ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಸೆ. 30ರ ಕೊನೆಯ ದಿನಾಂಕವಾಗಿದೆ.

ಆಯ್ಕೆ ಹೇಗೆ?: ಆನ್​ಲೈನ್​ ಪರೀಕ್ಷೆ , ಸಂದರ್ಶನ ಮೂಲಕ ಆಯ್ಕೆ ನಡೆಸಲಾಗುವುದು. ಆನ್​ಲೈನ್​​ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಕೇಳಲಾಗಿರುವ 175 ಪ್ರಶ್ನೆಗಳಿಗೆ 150 ನಿಮಿಷದಲ್ಲಿ ಉತ್ತರಿಸಬೇಕು. ಅದರ ಜೊತೆಗೆ ಇಂಗ್ಲೀಷ್​ ಭಾಷೆಯ 50 ಪ್ರಶ್ನೆಗಳು ಮತ್ತು ಬ್ಯಾಂಕಿಂಗ್​ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ವಯಸ್ಸು: ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಖಾಲಿ ಇರುವ 214 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಭಾರತೀಯ ಪ್ರಜೆಯಾಗಿರಬೇಕು. ಕನಿಷ್ಠ 20 ವರ್ಷ, ಗರಿಷ್ಠ 38 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದೆ. ಶಿಕ್ಷಣ ಮತ್ತು ಅರ್ಹತೆಯ ಮೇರೆಗೆ ಆಯ್ಕೆ ಮಾಡಲಾಗುತ್ತದೆ.

ಶುಲ್ಕ: ಅಭ್ಯರ್ಥಿಗಳು 850 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ಶುಲ್ಕ ವಿನಾಯಿತಿ ಇದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ  ತಿಂಗಳಿಗೆ 42 ಸಾವಿರದಿಂದ 59 ಸಾವಿರದ ವರೆಗೆ ಸಂಬಳ ನೀಡಲಾಗುತ್ತದೆ. ಆದರೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಈ ಸಂಬಳ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು www.bankofindia.co.in  ವೆಬ್​ಸೈಟ್​​ಗೆ ತೆರಳಿ ಅಧಿಸೂವನೆಯನ್ನು ಓದಿ ಅರ್ಜಿ ಸಲ್ಲಿಸಲು ತಿಳಿಸಿದೆ
First published: September 15, 2020, 3:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading