BBMP Elections: ಸುಪ್ರೀಂ ಕೋರ್ಟ್ ಆದೇಶದ ಅಧ್ಯಯನಕ್ಕೆ ಸಿಎಂ ಬೊಮ್ಮಾಯಿ‌  ಸೂಚನೆ

ದೇಶದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ಹೇಳಿತ್ತು. ಆದ್ದರಿಂದ ಬಿಬಿಎಂಪಿ‌ ಚುನಾವಣೆಗೂ ಅನ್ವಯ ಎಂಬ ವ್ಯಾಖ್ಯಾನ ಮಾಡಲಾಗಿತ್ತು. ಆದರೆ ಬಿಬಿಎಂಪಿ  ವ್ಯಾಪ್ತಿಯಲ್ಲಿ ಇನ್ನೂ ಡಿಲಿಮಿಟೇಷನ್ ಮಾಡಿಲ್ಲದಿರುವುದರಿಂದ 'ಚುನಾವಣೆ ಹೇಗೆ ಸಾಧ್ಯ?' ಎಂಬ ಗೊಂದಲ ನಿರ್ಮಾಣವಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ

  • Share this:
    ನವದೆಹಲಿ, ಮೇ 10: ಕಳೆದ ಒಂದೂವರೆ ವರ್ಷಕ್ಕಿಂತಲೂ‌ ಹೆಚ್ಚು ದಿನಗಳಿಂದ ಹಲವು ಕಾರಣಗಳಿಗೆ ನೆನೆಗುದಿಗೆ ಬಿದ್ದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhuth Bangalore Mahanagara Palike) ಚುನಾವಣೆಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ (Supream Courtl ನೀಡಿರುವ ತೀರ್ಪಿನಲ್ಲಿ ಕೆಲವು ಗೊಂದಲ ಇರುವುದರಿಂದ ಅವುಗಳ 'ಸರ್ವೋಚ್ಚ ನ್ಯಾಯಾಲಯದ ಆದೇಶದ ಬಗ್ಗೆ  ಕಾನೂನು ಇಲಾಖೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ಸಂಪೂರ್ಣ ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraja Bommai) ಸೂಚನೆ ನೀಡಿದ್ದಾರೆ.

    ಗೊಂದಲ ಪರಿಹಾರಕ್ಕಾಗಿ ಅಧ್ಯಯನ
    ಮಧ್ಯಪ್ರದೇಶದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ನೀಡಿ ಡಿಲಿಮಿಟೇಷನ್ ಅಥವಾ ಮೀಸಲಾತಿ ವಿಷಯಗಳೇನೇ ಇದ್ದರೂ ಅದನ್ನು ಕೂಡಲೇ ಬಗೆಹರಿಸಿ ಎರಡು ವಾರದೊಳಗೆ ಚುನಾವಣೆ ನಡೆಸಲು ಅಧಿಸೂಚನೆ ನಡೆಸುವಂತೆ ಆದೇಶ ನೀಡಿತ್ತು. ಇದು ದೇಶದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ಹೇಳಿತ್ತು. ಆದ್ದರಿಂದ ಬಿಬಿಎಂಪಿ‌ ಚುನಾವಣೆಗೂ ಅನ್ವಯ ಎಂಬ ವ್ಯಾಖ್ಯಾನ ಮಾಡಲಾಗಿತ್ತು. ಆದರೆ ಬಿಬಿಎಂಪಿ  ವ್ಯಾಪ್ತಿಯಲ್ಲಿ ಇನ್ನೂ ಡಿಲಿಮಿಟೇಷನ್ ಮಾಡಿಲ್ಲದಿರುವುದರಿಂದ 'ಚುನಾವಣೆ ಹೇಗೆ ಸಾಧ್ಯ?' ಎಂಬ ಗೊಂದಲ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ‌ 'ಅಧ್ಯಯನಕ್ಕೆ' ಸೂಚನೆ ನೀಡಿದರು.

    ಇದನ್ನೂ ಓದಿ: BBMP ಎಲೆಕ್ಷನ್ ನಡೆಸುವಂತೆ ಸುಪ್ರೀಂಕೋರ್ಟ್​ ಮಹತ್ವದ ಆದೇಶ; ಶೀಘ್ರವೇ ನೋಟಿಫಿಕೇಷನ್ ಹೊರಡಿಸಲು ಸೂಚನೆ

    ಚುನಾವಣಾ ಆಯೋಗದೊಂದಿಗೆ ಚರ್ಚೆ
    'ಸರ್ವೋಚ್ಚ ನ್ಯಾಯಾಲಯದ  ಆದೇಶ ಪ್ರತಿ ನಮಗೆ ಬಂದಿಲ್ಲ. ಸರ್ವೋಚ್ಚ   ನ್ಯಾಯಾಲಯ  ಚುನಾವಣಾ ಆಯೋಗ ಏನು ತೀರ್ಮಾನ ಮಾಡುತ್ತಾರೆ ಅದನ್ನು ಪಾಲಿಸಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ  ಚುನಾವಣಾ ಆಯೋಗದೊಂದಿಗೆ ಚರ್ಚೆ ಮಾಡಲಾಗುವುದು. ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು  ಎಂದರು.

    ಚುನಾವಣೆಗಳಿಗೂ ಸಿದ್ಧ

    ಇದೇ ವೇಳೆ ಬಿಬಿಪಿಎಂ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ದವಿದೆಯೇ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಪಕ್ಷ ಅವರದ್ದನ್ನು ಅವರು  ನೋಡಿಕೊಳ್ಳಬೇಕು. ಸಭೆಗಳಲ್ಲಿ ಬಡಿದಾಡಿಕೊಂಡು ಬಂದಿದ್ದಾರೆ. ನಾವು ಇಡೀ ರಾಜ್ಯ ಸುತ್ತಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ಮಾಡಿದ್ದೆವು. ಬಿಬಿಎಂಪಿಯಲ್ಲಿಯೂ  ಸಭೆಗಳನ್ನು ಮಾಡಿದ್ದೇವೆ.   ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಅಧ್ಯಯನ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಸಿಎಂ ಸಂವಾದ
    ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ - 2022  - ಜಾಗತಿಕ ಹೂಡಿಕೆದಾರರ ಸಮಾವೇಶದ ಕುರಿತು ಬಿಂಬಿಸಲು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಮಂಗಳವಾರ  ವಿವಿಧ ದೇಶಗಳ ರಾಯಭಾರಿಗಳೊಂದಿಗೆ ನವದೆಹಲಿಯಲ್ಲಿ ಸಂವಾದ ನಡೆಸಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕೈಗಾರಿಕಾ ಇಲಾಖೆ ಆಯುಕ್ತ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.

    ಕರ್ನಾಟಕ ಸರಕಾರದಿಂದಲೂ ಮೇಲ್ಮನವಿ ಸಲ್ಲಿಕೆ

    ಈ ಹಿಂದೆ ಬಿಬಿಎಂಪಿಯ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನೀಡಿದ ಆದೇಶದ ವಿರುದ್ಧ ಕರ್ನಾಟಕ ಸರಕಾರ ಸಹ ಮೇಲ್ಮನವಿ ಸಲ್ಲಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿತ್ತು. ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ (2020) ಅನುಸಾರ 243 ವಾರ್ಡ್‌ಗಳಿಗೆ ಬದಲಾಗಿ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್‌ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ 2020ರ ಡಿಸೆಂಬರ್‌ 4ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.
    Published by:Kavya V
    First published: