ಎನ್​​​ಪಿಆರ್​​​ ಸಮೀಕ್ಷೆ ವೇಳೆ ತಪ್ಪು ಮಾಹಿತಿ ನೀಡಿದರೆ ಬೀಳುತ್ತೆ 1 ಸಾವಿರ ರೂ ದಂಡ

ಈ ಹೇಳಿಕೆ ಬೆನ್ನಲ್ಲೇ ಅರುಂಧತಿ ರಾಯ್ ವಿರುದ್ಧ ದೆಹಲಿಯಲ್ಲಿ ಸುಪ್ರೀಂಕೋರ್ಟ್ ವಕೀಲರೊಬ್ಬರು ಕ್ರಿಮಿನಲ್​​​ ಪ್ರಕರಣ ದಾಖಲಿಸಿದ್ದಾರೆ. ಅರುಂಧತಿ ರಾಯ್ ಉದ್ದೇಶಪೂರ್ವಕವಾಗಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಇವರನ್ನು ಈ ಕೂಡಲೇ ಬಂಧಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ಧಾರೆ.

news18-kannada
Updated:January 16, 2020, 5:24 PM IST
ಎನ್​​​ಪಿಆರ್​​​ ಸಮೀಕ್ಷೆ ವೇಳೆ ತಪ್ಪು ಮಾಹಿತಿ ನೀಡಿದರೆ ಬೀಳುತ್ತೆ 1 ಸಾವಿರ ರೂ ದಂಡ
ಎನ್​​​​ಪಿಆರ್​​
  • Share this:
ನವದೆಹಲಿ(ಜ.16): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ ಯೋಜನೆ ಜಾರಿಗೊಳಿಸಿದೆ. ಈಗಾಗಲೇ ಕೇಂದ್ರ ಸಚಿವ ಸಂಪುಟ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್​ಪಿಆರ್) ಕಾರ್ಯಕ್ಕೆ ಅನುಮೋದನೆ ನೀಡಿದ್ದು, ಯೋಜನೆ ಜಾರಿ ಮಾಡಲಾಗಿದೆ. ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್​​ಪಿ​​ಆರ್) ಬಗ್ಗೆ ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿದ ಮಧ್ಯೆಯೇ ಕೇಂದ್ರ ಗೃಹ ಇಲಾಖೆ ಮತ್ತೊಂದು ಆದೇಶ ಹೊರಡಿಸಿದೆ. ನೋಂದಣಿ ಪರಿಷ್ಕರಣೆ ವೇಳೆ ಯಾವುದೇ ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಸರಿಯಾದ ಮಾಹಿತಿ ನೀಡದಿದ್ದರೆ ಒಂದು ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೇಳಿದೆ. ಪೌರತ್ವ ಕಾಯ್ದೆಯ 17ನೇ ನಿಯಮದ ಪ್ರಕಾರ ನೋಂದಣಿ ಪರಿಷ್ಕರಣೆ ಮಾಹಿತಿ ನೀಡಲು ನಿರಾಕರಿಸಿದವರಿಗೆ 1 ಸಾವಿರ ರೂ. ದಂಡ ವಿಧಿಸಬಹುದಾಗಿದೆ. ಇಂತಹ ಒಂದು ಕಾನೂನಿದ್ದರು 2011 ಮತ್ತು 2015 ಜನಗಣತಿ ಪ್ರಕ್ರಿಯೆ ಸಂದರ್ಭದಲ್ಲಿ ನಿಯಮ ಪಾಲಿಸಿರಲಿಲ್ಲ. ಆದರೀಗ ಈ ನಿಯಮ ಪಾಲಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಗರಹ ಇಲಾಖೆ ಆದೇಶಿಸಿದೆ.

ಇತ್ತೀಚೆಗಷ್ಟೇ "ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮಾಡುವುದರಿಂದ ರಾಷ್ಟ್ರೀಯ ಪೌರತ್ವ ನೋಂದಣಿಗೆ ಡೇಟಾ ಬೇಸ್ ಆಗಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ವೈಯಕ್ತಿಕ ಮಾಹಿತಿ ಸೋರಿಕೆಯಾಗದಂತೆ ತಡೆಯಲು ಅಧಿಕಾರಿಗಳು ನಿಮ್ಮ ಮನೆಗೆ ಬಂದಾಗ ಸತ್ಯದ ಬದಲಿಗೆ ಸುಳ್ಳು ಮಾಹಿತಿ ನೀಡಿ ಎಂದು ಅರುಂಧತಿ ರಾಯ್ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಬೆನ್ನಲ್ಲೇ ಅರುಂಧತಿ ರಾಯ್ ವಿರುದ್ಧ ದೆಹಲಿಯಲ್ಲಿ ಸುಪ್ರೀಂಕೋರ್ಟ್ ವಕೀಲರೊಬ್ಬರು ಕ್ರಿಮಿನಲ್​​​ ಪ್ರಕರಣ ದಾಖಲಿಸಿದ್ದಾರೆ. ಅರುಂಧತಿ ರಾಯ್ ಉದ್ದೇಶಪೂರ್ವಕವಾಗಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಇವರನ್ನು ಈ ಕೂಡಲೇ ಬಂಧಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ಧಾರೆ.

ಇದನ್ನೂ ಓದಿ: PMC Bank scam: ಜೈಲಿನಿಂದ ಆರೋಪಿಗಳ ಸ್ಥಳಾಂತರ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ

ಅರುಂಧತಿ ರಾಯ್ ಅವರಂತೆಯೇ ಕಾಂಗ್ರೆಸ್​​ ಸೇರಿದಂತೆ ವಿರೋಧ ಪಕ್ಷಗಳು ಎನ್​​ಆರ್​ಪಿ ಬಗ್ಗೆ  ಆತಂಕ ವ್ಯಕ್ತಪಡಿಸಿದ್ದವು. ಈ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಗೃಹ ಇಲಾಖೆ ನೋಂದಣಿ ವೇಳೆ ಯಾವುದೇ ದಾಖಲೆಗಳನ್ನಾಗಲಿ ಅಥವಾ ಬಯೋಮೆಟ್ರಿಕ್ ಮಾಹಿತಿಗಳನ್ನು ಪಡೆಯಲಾಗುವುದಿಲ್ಲ ಎಂದು ತಿಳಿಸಿತ್ತು. ಆದರೆ, ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ವೆಬ್ ಸೈಟ್​ನಲ್ಲಿ ಮಾತ್ರ ಎನ್​​ಪಿಆರ್​​ ದತ್ತಾಂಶಕ್ಕೆ ಬಯೋಮೆಟ್ರಿಕ್ ಮಾಹಿತಿ ಅಗತ್ಯವಿದೆ ಎಂದು ತಿಳಿಸಲಾಗಿತ್ತು. ಇದೇ ವೇಳೆ ಕೇಂದ್ರದ ನಡೆಗೆ ವಿರೋಧ ವ್ಯಕ್ತಪಡಿಸಿರುವ ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಎನ್​​ಪಿಆರ್​ ಪ್ರಕ್ರಿಯೆಗೆ ತಡೆ ನೀಡಿದೆ.
First published:January 16, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ