BECIL Recruitment 2020: 1500 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ; 8ನೇ ತರಗತಿ ಉತ್ತೀರ್ಣರಾದವರಿಗೂ ಆದ್ಯತೆ!

BECIL Recruitment: 8ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

news18-kannada
Updated:October 6, 2020, 6:40 PM IST
BECIL Recruitment 2020: 1500 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ; 8ನೇ ತರಗತಿ ಉತ್ತೀರ್ಣರಾದವರಿಗೂ ಆದ್ಯತೆ!
JOB
  • Share this:
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 1500 ಸ್ಕಿಲ್ಡ್ ಮತ್ತು ಅನ್‌ಸ್ಕಿಲ್ಡ್ ಹುದ್ದೆಗಳನ್ನು ಖಾಲಿ ಇದ್ದು, ಭರ್ತಿ ಮಾಡಲು ಆಹ್ವಾನ ಹೊರಡಿಸಿದೆ. ಅಕ್ಟೋಬರ್​ 20ರ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ: 8ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆ ಮೂಲಕ ಖಾಲಿ ಇರುವ ಸ್ಕಿಲ್ಡ್ ಮತ್ತು ಅನ್‌ಸ್ಕಿಲ್ಡ್ ಹುದ್ದೆಗಳನ್ನು ಭರ್ತಿ ಮಾಡಲು ತಿಳಿಸಿದೆ.

ವಯೋಮಿತಿ: ಬಿಇಸಿಐಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ:

ಸ್ಕಿಲ್ಡ್ ಮತ್ತು ಅನ್‌ಸ್ಕಿಲ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಆಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಅರ್ಜಿ ಸಲ್ಲಿಸಬೇಕು. ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು
ಅಕ್ಟೋಬರ್ 20,2020ರೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
Published by: Harshith AS
First published: October 6, 2020, 6:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading