HOME » NEWS » National-international » BECIL RECRUITMENT 2021 FOR 120 CSSD TECHNICIAN LAB ATTENDANT AND OTHER POSTS HG

BECIL Recruitment 2021: 120 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಪಾಸಾದವರಿಗೂ ಇದೆ ಅವಕಾಶ!

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

news18-kannada
Updated:February 10, 2021, 10:22 AM IST
BECIL Recruitment 2021: 120 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಪಾಸಾದವರಿಗೂ ಇದೆ ಅವಕಾಶ!
jobs
  • Share this:
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ 120 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಲು ತಿಳಿಸಿದೆ. ಫೆಬ್ರವರಿ 22,2021 ಅರ್ಜಿಯನ್ನು ಸಲ್ಲಿಸಲು ಕೊನರಯ ದಿನಾಂಕವಾಗಿದೆ.

ವಿದ್ಯಾರ್ಹತೆ: B.sc, ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ, 12th, 10th ಮತ್ತು iTi ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

-ಓಬಿಸಿ, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವ‍ರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ವಿವಿಧ ಹುದ್ದೆಗಳಿಗೆ ಅನುಸಾರವಾಗಿ 17,303 ರೂ ನಿಂದ  42,950 ರೂ. ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು  830 ರೂ. ಮತ್ತು ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ  ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
Published by: Harshith AS
First published: February 10, 2021, 10:21 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories