HOME » NEWS » National-international » BEL RECRUITMENT 2020 NOTIFICATION 13 TRAINEE ENGINEER AND PROJECT ENGINEER POSTS VACANCIES HG

BEL recruitment 2020: ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ

ವಿದ್ಯಾರ್ಹತೆ: ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

news18-kannada
Updated:December 22, 2020, 6:51 PM IST
BEL recruitment 2020: ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ
JOB
  • Share this:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ: ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ: ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ: ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000 ರಿಂದ 31,000 ರೂ ವೇತನ ಸಿಗಲಿದೆ. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000 ರಿಂದ 50,000 ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 200 ರೂ ಶುಲ್ಕ ಪಾವತಿಸಬೇಕು. ಅಂತೆಯೇ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕು. ಅಂಗವಿಕಲ, ಪರಿ‍ಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಜನವರಿ 6,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Published by: Harshith AS
First published: December 22, 2020, 6:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories