HOME » NEWS » National-international » BEL RECRUITMENT 2020 TRAINEE OFFICIAL LANGUAGE OFFICER POST HG

BEL Recruitment 2020: ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಸ್ನಾತಕೋತ್ತರ ಪದವಿ ಪಡೆದವರಿಗೆ ಅವಕಾಶ

ವಯೋಮಿತಿ: ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

news18-kannada
Updated:December 9, 2020, 4:18 PM IST
BEL Recruitment 2020: ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಸ್ನಾತಕೋತ್ತರ ಪದವಿ ಪಡೆದವರಿಗೆ ಅವಕಾಶ
ಸಾಂದರ್ಭಿಕ ಚಿತ್ರ
  • Share this:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ.  ಡಿಸೆಂಬರ್ 31,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ವಿದ್ಯಾರ್ಹತೆ: ಹಿಂದಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:  ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000 ರಿಂದ 31,000ರೂ ವೇತನ ಸಿಗಲಿದೆ.

ಅರ್ಜಿ ಶುಲ್ಕ: ಸಾಮಾನ್ಯ, ಓಬಿಸಿ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 200ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.

-ಪ.ಜಾ, ಪ.ಪಂ,ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.ಆಯ್ಕೆ ಪ್ರಕ್ರಿಯೆ:  ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓ ದಿ ನಂತರ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಬೇಕು. ಅದಾದ ಬಳಿಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಡಿಸೆಂಬರ್ 31,2020ರೊಳಗೆ ತಲುಪಿಸಬೇಕು.

ಕಚೇರಿ ವಿಳಾಸ: Manager, Central research laboratory, bharat electronics limited, jalahalli post, bangalore-560013.
First published: December 9, 2020, 4:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories