BEL Recruitment 2021: ಖಾಲಿ ಇರುವ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25 ಸಾವಿರ ರೂ ವೇತನವನ್ನು ನೀಡಲಾಗುವುದು.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
    ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಖಾಲಿ ಇರುವ 10 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ. ಫೆಬ್ರವರಿ 27,2021ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಜನವರಿ 1, 2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    -ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ: ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25 ಸಾವಿರ ರೂ ವೇತನವನ್ನು ನೀಡಲಾಗುವುದು.

    ಅರ್ಜಿ ಶುಲ್ಕ: 

    ಆಸಕ್ತ ಅರ್ಜಿದಾರರು 200ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ, ಪ.ಜಾ/ಪ.ಪಂ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ ಹೇಗೆ?:  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತರು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ  ನೀಡಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
    Published by:Harshith AS
    First published: