ಸಿಎಂ ಮಮತಾ ಬ್ಯಾನರ್ಜಿ ಸಭೆ ಯಶಸ್ಸು: ಮುಷ್ಕರ ಕೈಬಿಟ್ಟ ಕಿರಿಯ ವೈದ್ಯರು

ವೈದ್ಯರ ಹೋರಾಟ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಸಿಎಂ ಮಮತಾ ಬ್ಯಾನರ್ಜಿ, ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. 

Ganesh Nachikethu | news18
Updated:June 17, 2019, 9:08 PM IST
ಸಿಎಂ ಮಮತಾ ಬ್ಯಾನರ್ಜಿ ಸಭೆ ಯಶಸ್ಸು: ಮುಷ್ಕರ ಕೈಬಿಟ್ಟ ಕಿರಿಯ ವೈದ್ಯರು
ಮುಷ್ಕರನಿರತ ವೈದ್ಯರು
  • News18
  • Last Updated: June 17, 2019, 9:08 PM IST
  • Share this:
ನವದೆಹಲಿ(ಜೂನ್​​.16): ತಮ್ಮ ಮೇಲಿನ ಹಲ್ಲೆ ಖಂಡಿಸಿ ಕಳೆದ ಒಂದು ವಾರದಿಂದ ನಡೆಸುತ್ತಿದ್ದ ಸರ್ಕಾರಿ ಕಿರಿಯ ವೈದ್ಯರ ಮುಷ್ಕರ ಅಂತ್ಯಗೊಂಡಿದೆ. ಪ್ರತಿಭಟನಾನಿರತ ವೈದ್ಯರ ಜೊತೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮುಷ್ಕರ ಹಿಂಪಡೆಯಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಕಚೇರಿಯಲ್ಲಿ ವೈದ್ಯಕೀಯ ಕಾಲೇಜಿನ ತಲಾ ಇಬ್ಬರು ಪ್ರತಿನಿಧಿಗಳ ಜತೆ ಕ್ಯಾಮೆರಾ ಸಮ್ಮುಖದಲ್ಲೇ ಮಾತುಕತೆ ನಡೆಸಿದರು. ಬಳಿಕ ಕೂಡಲೇ ವೈದ್ಯರ ಸುರಕ್ಷತೆಗಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಪೊಲೀಸರಿಗೆ ಸೂಚಿಸಿದರು. ಜೊತೆಗೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧವೂ ಕಠಿಣ ಕ್ರಮಕೈಗೊಳ್ಳುವುದಾಗಿ ದೀದಿ ಭರವಸೆ ನೀಡಿದರು.

ಇತ್ತೀಚೆಗೆ ಕಿರಿಯ ವೈದ್ಯರ ಮೇಲೆ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಎನ್ನಲಾದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ ಒಂದು ವಾರದಿಂದ  ವೈದ್ಯ ಸಮುದಾಯ ಮುಷ್ಕರ ನಡೆಸುತ್ತಿತ್ತು.

ಇದನ್ನೂ ಓದಿ: ಸಂಸತ್‌ನಲ್ಲಿ ಮೊಳಗಿದ ಕನ್ನಡ ಕಹಳೆ: ನಾಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಸಂಸದರು

ವೈದ್ಯರ ಹೋರಾಟ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಸಿಎಂ ಮಮತಾ ಬ್ಯಾನರ್ಜಿ, ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಬಳಿಕ 4 ಗಂಟೆಗಳ ಗಡುವು ನೀಡಿದ್ದ ದೀದಿ, ಕರ್ತವ್ಯಕ್ಕೆ ಮರಳದಿದ್ದರೆ ವೈದ್ಯ ವಿದ್ಯಾರ್ಥಿಗಳನ್ನು ಹಾಸ್ಟೆಲ್​​ನಿಂದ ತೆರವುಗೊಳಿಸುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ಸಮ್ಮತಿ ಸೂಚಿಸಿದ ಸಿಎಂ ಮಮತಾ ಬ್ಯಾನರ್ಜಿ

ಸಿಎಂ ಮಮತಾ ಬ್ಯಾನರ್ಜಿ ಬೆದರಿಕೆಗೆ ಬಗ್ಗದ ವೈದ್ಯ ಸಮುದಾಯ ಮತ್ತಷ್ಟು ಪ್ರತಿಭಟನೆ ತೀವ್ರಗೊಳಿಸಿದ್ದರು. ಪಶ್ಚಿಮ ಬಂಗಾಳದ ವೈದ್ಯ ಸಮುದಾಯಕ್ಕೆ ಬೆಂಬಲ ಸೂಚಿಸಿ ದೇಶಾದ್ಯಂತ ಪ್ರಗತಿಪರ ಸಂಘಟನೆಗಳು ಬೀದಿಗಿಳಿದಿದ್ದವು. ಅಂತೆಯೇ ಕರ್ತವ್ಯನಿರತ ವೈದ್ಯರು ಕೂಡ ಇಂದು ಮುಷ್ಕರ ನಡೆಸಿದ್ದರು. ಇದರಿಂದಾಗಿ ರೋಗಿಗಳ ಪರದಾಡುವಂತಾಗಿತ್ತು.-----------
First published:June 17, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ