ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು(BESCOM) ಕಾನೂನು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 19,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ:
ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವವರು ನಿವೃತ್ತ ನ್ಯಾಯಾಧೀಶರು ಹಾಗೂ ಕಾನೂನು ವಿಷಯಗಳ ಬಗ್ಗೆ ಅನುಭವ/ಜ್ಞಾನ ಹೊಂದಿರುವವರಿಗೆ ಅವಕಾಶವನ್ನು ನೀಡುತ್ತಿದೆ.
ವಯೋಮಿತಿ:
ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಕಾನೂನು ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 500/-ರೂ ಅರ್ಜಿ ಪಾವತಿಸಬೇಕಿದೆ. ಡಿ.ಡಿ ಮೂಲಕ ಸೂಕ್ತವಾದ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಜಿ ಸಲ್ಲಿಸುವ ಆಸಕ್ತರು ಅಧಿಕೃತ ವೆಬ್ಸೈಟ್ https://bescom.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಪೂರ್ತಿಯಾಗಿ ಓದಿ. ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸರಿಯಾದ ವಿಳಾಸಕ್ಕೆ ಅಕ್ಟೋಬರ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಕಚೇರಿ ವಿಳಾಸ:
ಪ್ರಧಾನ ವ್ಯವಸ್ಥಾಪಕರು,
ಕಂಪನಿ ಕಾರ್ಯಾಲಯ, ಬೆಳಕು ಭವನ,
ಕೆ.ಆರ್.ವೃತ್ತ. ಬೆವಿಕಂ,
ಬೆಂಗಳೂರು - 560001.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ