ಕೇಂದ್ರ ಸರ್ಕಾರದ ವಿರುದ್ಧ ಇಂದು ದೆಹಲಿಯಲ್ಲಿ ನಡೆಯಲಿದೆ ಭಾರತ್ ಬಚಾವೋ ಬೃಹತ್ ಆಂದೋಲನ; ಬಹುತೇಕ ವಿರೋಧ ಪಕ್ಷಗಳ ನಾಯಕರು ಭಾಗಿ

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಇಡೀ ಈಶಾನ್ಯ ಭಾರತದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಈವರೆಗೆ ಮೂರು ಮಂದಿ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಕರ್ಪ್ಯೂ ಹೇರಲಾಗಿದೆ.

news18-kannada
Updated:December 14, 2019, 9:46 AM IST
ಕೇಂದ್ರ ಸರ್ಕಾರದ ವಿರುದ್ಧ ಇಂದು ದೆಹಲಿಯಲ್ಲಿ ನಡೆಯಲಿದೆ ಭಾರತ್ ಬಚಾವೋ ಬೃಹತ್ ಆಂದೋಲನ; ಬಹುತೇಕ ವಿರೋಧ ಪಕ್ಷಗಳ ನಾಯಕರು ಭಾಗಿ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆಯಲ್ಲಿ ಸುಡಲಾಗಿರುವ ವಾಹನಗಳು.
  • Share this:
ದೆಹಲಿ (ಡಿಸೆಂಬರ್ 14): ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಮಸೂದೆ ಸೇರಿದಂತೆ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿರುವ ವಿರೋಧ ಪಕ್ಷಗಳು ಇಂದು ದೆಹಲಿಯಲ್ಲಿ ಭಾರತ್ ಬಚಾವೋ ಬೃಹತ್ ಸಮಾವೇಶ ಆಯೋಜಿಸಿದ್ದು ಬಹುತೇಕ ವಿರೋಧ ಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಇಡೀ ಈಶಾನ್ಯ ಭಾರತದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಈವರೆಗೆ ಮೂರು ಮಂದಿ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಕರ್ಪ್ಯೂ ಹೇರಲಾಗಿದೆ.

ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಇಂದು ದೆಹಲಿಯಲ್ಲಿ “ಭಾರತ್ ಬಚಾವೋ” ಎಂಬ ಸಮಾವೇಶಕ್ಕೆ ಕರೆ ನೀಡಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯದ ಘಟಾನುಘಟಿ ನಾಯಕರ ಭಾಗವಹಿಸಲಿದ್ದಾರೆ. ಅಲ್ಲದೆ, ಸಮಾನ ಮನಸ್ಕ ಇತರೆ ವಿರೋಧ ಪಕ್ಷದ ನಾಯಕರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಮಾಜಿ ಡಿ.ಕೆ. ಶಿವಕುಮಾರ್ ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಪೌರತ್ವ ತಿದ್ದುಪಡಿ ವಿರೋಧಿ ಹೋರಾಟ, ಪೊಲೀಸರ ಗುಂಡಿಗೆ ಬಲಿಯಾದ 17 ವರ್ಷದ ಬಾಲಕ; ಈಶಾನ್ಯ ಭಾರತದ ಭಾವನೆಯನ್ನು ಕೆಣಕಿದ ಸಾವು
First published:December 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading