Bharat Jodo Yatra: ಕಾಂಗ್ರೆಸ್ ಮತ್ತೆ ಎದ್ದು ಬರಲಿದೆ; ವಿದೇಶದಿಂದ ಸೋನಿಯಾ ಗಾಂಧಿ ವ್ಯಾಖ್ಯಾನ

ಈ ಯಾತ್ರೆಯು ಭಾರತೀಯ ರಾಜಕೀಯ ಇತಿಹಾಸದಲ್ಲಿ ಒಂದು ಪರಿವರ್ತನಾ ಕ್ಷಣವಾಗಲಿದೆ ಎಂದು ಪಕ್ಷದ ಮುಖ್ಯಸ್ಥರೂ ಆಗಿರುವ ಸೋನಿಯಾ ಗಾಂಧಿ ವ್ಯಾಖ್ಯಾನಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

 • Share this:
  ದೆಹಲಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ಪಕ್ಷದ ಪುನರುಜ್ಜೀವನದಲ್ಲಿ (Congress Rejuvenation) ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಕಾಂಗ್ರೆಸ್ ಅಧಿಕಾಯಕಿ ಸೋನಿಯಾ ಗಾಂಧಿ (Sonia Gandhi) ಹೇಳಿದ್ದಾರೆ. ಸಂಸದ ಮತ್ತು ಅವರ ಮಗ ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ಯಾತ್ರೆಯ  2ನೇ ದಿನದ ಪ್ರಚಾರವನ್ನು (Sonia Gandhi on Bharat Jodo Day 2) ಕನ್ಯಾಕುಮಾರಿಯ ಅಗಸ್ತೇಶ್ವರಂನಲ್ಲಿ ಪ್ರಾರಂಭಿಸುವ ಮುನ್ನ ಸೋನಿಯಾ ಗಾಂಧಿ ಈ ವ್ಯಾಖ್ಯಾನ ಮಾಡಿದ್ದಾರೆ.   ಸದ್ಯ ಸೋನಿಯಾ ಗಾಂಧಿ ಆರೋಗ್ಯ ತಪಾಸಣೆಗಾಗಿ ವಿದೇಶದಲ್ಲಿದ್ದು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. 

  ಈ ಯಾತ್ರೆಯು ಭಾರತೀಯ ರಾಜಕೀಯ ಇತಿಹಾಸದಲ್ಲಿ ಒಂದು ಪರಿವರ್ತನಾ ಕ್ಷಣವಾಗಲಿದೆ ಎಂದು ಪಕ್ಷದ ಮುಖ್ಯಸ್ಥರೂ ಆಗಿರುವ ಸೋನಿಯಾ ಗಾಂಧಿ ವ್ಯಾಖ್ಯಾನಿಸಿದ್ದಾರೆ.

  ಭೌತಿಕವಾಗಿ ಭಾಗವಹಿಸಲು ಸಾಧ್ಯವಿಲ್ಲವೇ?
  ಭಾರತ್ ಜೋಡೋ ಯಾತ್ರೆಯಲ್ಲಿ ಭೌತಿಕವಾಗಿ ಭಾಗವಹಿಸಲು ಸಾಧ್ಯವಿಲ್ಲದವರು ಉತ್ಸಾಹಭರಿತ ಚಿಂತನೆಯ ಮೂಲಕ ಭಾಗವಹಿಸುತ್ತಾರೆ. ಬನ್ನಿ, ಒಗ್ಗಟ್ಟಿನಿಂದ ಮುನ್ನಡೆಯಲು ಪ್ರತಿಜ್ಞೆ ಮಾಡೋಣ ಎಂದು ಕಾಂಗ್ರೆಸ್ ವಕ್ತಾರೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆಯು ಕಾಂಗ್ರೆಸ್‌ಗೆ ಐತಿಹಾಸಿಕ ಕ್ಷಣವಾಗಿದೆ. ಪಾದಯಾತ್ರೆಯು ಕಾಂಗ್ರೆಸ್‌ನ ಪುನಶ್ಚೇತನದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

  ರಾಜ್ಯದಲ್ಲಿ ಸಂಚರಿಸುವ ಭಾರತ್ ಜೋಡೋ ಯಾತ್ರೆಯ ರೂಟ್ ಮ್ಯಾಪ್ ಹೀಗಿದೆ.

  1. ಮೊದಲ ಹಂತದ ರೂಟ್ ಮ್ಯಾಪ್
  ತಮಿಳುನಾಡು ರಾಜ್ಯದಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಗುಂಡ್ಲುಪೇಟೆ, ನಂಜನಗೂಡು, ಮೈಸೂರು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಸಂಚಾರ ಮಾಡಲಿದೆ. ನಂತರ ಮೇಲುಕೋಟೆಯಿಂದ ರಂಗನಾಥಪುರದ ಮೂಲಕ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಲಾಗುತ್ತದೆ.

  ಇದನ್ನೂ ಓದಿ: Mosque In Water: ನೀರಿನಿಂದ ಮೇಲೆದ್ದ ಮಸೀದಿ! ಕುತೂಹಲದಲ್ಲಿ ಮುಸ್ಲಿಂ ಸಮುದಾಯ

  ರಂಗನಾಥಪುರದಿಂದ ತುಮಕೂರಿನ ತುರುವೇಕೆರೆ ನಂತರ ಇಲ್ಲಿಂದ ಚಿಕ್ಕನಾಯಕನಹಳ್ಳಿ ಹುಳಿಯಾರ್ ಮೂಲಕ ಚಿತ್ರದುರ್ಗ ಹಿರಿಯೂರುಗೆ ಪಾದಯಾತ್ರೆ ತೆರಳಲಿದೆ. ಹಿರಿಯೂರಿನಿಂದ ಚಳ್ಳಕೇರೆಗೆ, ಚಳ್ಳಕೆರೆಯಿಂದ ರಾಯಪುರಕ್ಕೆ ಯಾತ್ರೆ ತೆರಳಲಿದ್ದು, ಅಲ್ಲಿಂದ ಆಂಧ್ರ ಪ್ರವೇಶವನ್ನು ಪಾದಯಾತ್ರೆ ಪ್ರವೇಶಿಸಲಿದೆ.

  2. ಎರಡನೇ ಹಂತದ ರೂಟ್ ಮ್ಯಾಪ್
  ಹೀರೆಹಾಳ್‌ ನಿಂದ ಓಬಾಳಪುರ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಾಗುತ್ತದೆ. ಹಲಕುಂಡಿ, ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಸಂಚಾರ ಆರಂಭಗೊಂಡು ಅಲ್ಲಿಂದ ಅಲುರ್ ಮೂಲಕ ಆಂಧ್ರ ಪ್ರವೇಶ ಮಾಡಲಿದೆ.

  3.ಮೂರನೇ ಹಂತದ ರೂಟ್ ಮ್ಯಾಪ್
  ಮಾಧವರಂ ಮೂಲಕ‌ ರಾಯಚೂರಿನ ಗಿಲ್ಲೆಸೂಗೂರು ಮೂಲಕ ಪಾದಯಾತ್ರೆ ತಂಡ ಪ್ರವೇಶ ಮಾಡಲಿದೆ. ಗಿಲ್ಲೆಸೂಗೂರು ನಿಂದ ಯರೇಗಾರಕ್ಕೆ ಪಾದಯಾತ್ರೆ ಸಂಚರಿಸಲಿದೆ. ಯರೇಗಾರ ಮೂಲಕ ರಾಯಚೂರು, ರಾಯಚೂರಿನಿಂದ ದೇವಸೂಗೂರುಗೆ ಭಾರತ್ ಜೋಡೋ ಯಾತ್ರೆ ತೆರಳಲಿದೆ. ದೇವಸೂಗೂರಿನಿಂದ ವಿಕಾರಬಾದ್ ಮೂಲಕ ತೆಲಂಗಾಣಕ್ಕೆ ಪ್ರವೇಶ ಮಾಡಲಿದೆ.

  ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಯಲ್ಲಿ ರಾಬರ್ಟ್ ವಾದ್ರಾ ಏಕೆ? ಬಿಜೆಪಿ ವ್ಯಂಗ್ಯ

  ಕಾಂಗ್ರೆಸ್ ಇಂದಿನಿಂದ ಭಾರತ್ ಜೋಡೋ ಯಾತ್ರೆಯನ್ನು ಹಮ್ಮಿಕೊಂಡಿದ್ದು ಇದರಲ್ಲಿ ರಾಬರ್ಟ್ ವಾದ್ರಾ (Robert Vadra) ಪಾತ್ರದ ಬಗ್ಗೆ ಇದೀಗ ಟೀಕೆ ವಿವಾದಗಳು ಕೇಳಿಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ಇಂದು ತಮ್ಮ ಫೋಟೋದೊಂದಿಗೆ ಪಕ್ಷದ 'ಭಾರತ್ ಜೋಡೋ ಯಾತ್ರೆ'ಯ (Bharat Jodo Yatra) ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರ. ಈ ಫೋಟೋಗಳನ್ನು ಗುರಿಯಾಗಿರಿಸಿಕೊಂಡು ಬಿಜೆಪಿ (BJP) ವ್ಯಂಗ್ಯ ಮಾಡಿದೆ. ರಾಬರ್ಟ್ ವಾದ್ರಾ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಸೇರ್ಪಡೆಯಾಗುತ್ತಿರುವುದು ತಮಾಷೆಯಾಗಿದೆ ಎಂದು ಬಿಜೆಪಿ ನಾಯಕ ಸಚಿವ ರವಿಶಂಕರ್ ಪ್ರಸಾದ್ ಸುದ್ದಿಗಾರರೊಂದಿಗೆ ಸಂವಾದದಲ್ಲಿ ಟೀಕೆ ನಡೆಸಿದ್ದಾರೆ. ರಾಬರ್ಟ್ ವಾದ್ರಾ ಈಗ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
  Published by:guruganesh bhat
  First published: