news18-kannada Updated:January 15, 2021, 8:00 PM IST
ಪ್ರಾತಿನಿಧಿಕ ಚಿತ್ರ.
ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಹೆಚ್ಇಎಲ್) ಖಾಲಿ ಇರುವ 120 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.
ವಿದ್ಯಾರ್ಹತೆ: 10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ: ಜನವರಿ 1, 2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಹೇಗೆ?: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಅರ್ಜಿ ಸಲ್ಲಿಸಬೇಕು. ಜನವರಿ 16,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Published by:
Harshith AS
First published:
January 15, 2021, 8:00 PM IST