ಛತ್ತೀಸ್​ಗಢ: ನೂತನ ಸಿಎಂ ಆಗಿ ಭೂಪೇಶ್ ಬಘೇಲ್ ಪ್ರಮಾಣ ಸ್ವೀಕಾರ!

ಬುಡಕಟ್ಟು ಸಮುದಾಯಗಳ ಪ್ರಾಬಲ್ಯದ ಛತ್ತೀಸಗಡದಲ್ಲಿ 15 ವರ್ಷಗಳ ವನವಾಸದ ಬಳಿಕ ಕಾಂಗ್ರೆಸ್‌ ಮೂರನೇ ಎರಡು ಬಹುಮತದ ಮೂಲಕ ಅಧಿಕಾರಕ್ಕೆ ಬಂದಿತ್ತು. 90 ಕ್ಷೇತ್ರಗಳ ವಿಧಾನಸಭೆಯಲ್ಲಿ 68 ಕ್ಷೇತ್ರಗಳನ್ನು ಗೆದ್ದಿತ್ತು. ಹೇಳಿಕೊಳ್ಳುವಂತಹ ಜನನಾಯಕರೇ ಇಲ್ಲದ ಕಾಂಗ್ರೆಸ್ ಪಕ್ಷ ಅಲ್ಲಿ ದಾಖಲೆಯ ಜಯ ಪಡೆದಿದೆ.

Ganesh Nachikethu
Updated:December 17, 2018, 9:15 PM IST
ಛತ್ತೀಸ್​ಗಢ: ನೂತನ ಸಿಎಂ ಆಗಿ ಭೂಪೇಶ್ ಬಘೇಲ್ ಪ್ರಮಾಣ ಸ್ವೀಕಾರ!
ಭೂಪೇಶ್​ ಬಘೇಲ್​
  • Share this:
ನವದೆಹಲಿ(ಡಿ.17): ಸತತ 15 ವರ್ಷಗಳ ಆಡಳಿತದಲ್ಲಿದ್ದ ಬಿಜೆಪಿಯನ್ನು ಸೋಲಿಸಿ ಛತ್ತೀಸ್​​ಗಡದಲ್ಲಿ ಕಾಂಗ್ರೆಸ್​​ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್​​ ಸರ್ಕಾರ ರಚಿಸಿದ್ದು, ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೇಲ್ ಇಂದು(ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ 5 ವರ್ಷಗಳಿಂದ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಭೂಪೇಶ್​​ ಪಕ್ಷ ಅಧಿಕಾರಕ್ಕೆ ತರಲು ಭಾರೀ  ಶ್ರಮಿಸಿದ್ದರು. ಇದೀಗ ತಮ್ಮ ಶ್ರಮಕ್ಕೆ ಪ್ರತಿಫಲ ಸಿಕ್ಕಿದ್ದು, ಮುಖ್ಯಮಂತ್ರಿ ಹುದ್ದೆ ಅಂಲಕರಿಸಿದ್ದಾರೆ.

ಭೂಪೇಶ್​​ ಬಘೇಲ್​​ ಪ್ರಮಾಣ ಸ್ವೀಕಾರ ಸಮಾರಂಭ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ವೇದಕೆಯಾಯಿತು. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ, ಮುಖಂಡರಾದ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ, ಎಲ್‌‍ಜೆಡಿ ನಾಯಕ ಶರದ್ ಯಾದವ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ: ಅಧಿಕಾರಕ್ಕೇರಿದ ದಿನವೇ ರೈತರ 2 ಲಕ್ಷ ರೂ ಸಾಲ ಮನ್ನಾ ಮಾಡಿದ ಮ.ಪ್ರ. ಸರಕಾರ

ಬುಡಕಟ್ಟು ಸಮುದಾಯಗಳ ಪ್ರಾಬಲ್ಯದ ಛತ್ತೀಸಗಡದಲ್ಲಿ 15 ವರ್ಷಗಳ ವನವಾಸದ ಬಳಿಕ ಕಾಂಗ್ರೆಸ್‌ ಮೂರನೇ ಎರಡು ಬಹುಮತದ ಮೂಲಕ ಅಧಿಕಾರಕ್ಕೆ ಬಂದಿತ್ತು. 90 ಕ್ಷೇತ್ರಗಳ ವಿಧಾನಸಭೆಯಲ್ಲಿ 68 ಕ್ಷೇತ್ರಗಳನ್ನು ಗೆದ್ದಿತ್ತು. ಹೇಳಿಕೊಳ್ಳುವಂತಹ ಜನನಾಯಕರೇ ಇಲ್ಲದ ಕಾಂಗ್ರೆಸ್ ಪಕ್ಷ ಅಲ್ಲಿ ದಾಖಲೆಯ ಜಯ ಪಡೆದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 49 ಕ್ಷೇತ್ರಗಳನ್ನು ಗೆದ್ದಿತ್ತು. ಆದರೆ ಈ ಬಾರಿ 16 ಸ್ಥಾನಗಳನ್ನು ಗೆಲ್ಲಲು ಮಾತ್ರ ಬಿಜೆಪಿಗೆ ಸಾಧ್ಯವಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 39 ಕ್ಷೇತ್ರಗಳಲ್ಲಿ ಗೆದ್ದಿತ್ತು ಎನ್ನಲಾಗಿದೆ.

ರೈತರ ಸಂಕಷ್ಟ, ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಆರೋಪಗಳೇ 15 ವರ್ಷಗಳ ರಮಣ್‌ ಸಿಂಗ್‌ ಆಳ್ವಿಕೆ ಕೊನೆಗೊಳ್ಳಲು ಕಾರಣ ಎಂಬಂತೆ ತೋರಿದೆ. ಕೇಂದ್ರ ಸರ್ಕಾರ ಕೈಗೊಂಡ ನೋಟು ರದ್ದತಿ ಮತ್ತು ಜಿಎಸ್‌ಟಿಯಂತಹ ನಿರ್ಧಾರಗಳೂ ಪರಿವರ್ತನೆಗೆ ಕಾರಣವಾಗಿತ್ತು. ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿವೆ ಎನ್ನಲಾದ ದೌರ್ಜನ್ಯಗಳು ಬಿಜೆಪಿಯ ವಿರುದ್ಧ ಕೆಲಸ ಮಾಡಿವೆ ಎನ್ನಲಾಗಿತ್ತು. ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ನಕ್ಸಲರ ವಿರುದ್ಧ ಕೈಗೊಂಡ ಕಾರ್ಯಾಚರಣೆಯಿಂದ ಬುಡಕಟ್ಟು ಜನರಿಗೆ ಭಾರಿ ತೊಂದರೆ ಆಗಿತ್ತು. ಅದೂ ಫಲಿತಾಂಶದಲ್ಲಿ ಪ್ರತಿಫಲಿತವಾಗಿದೆ. ಬಸ್ತಾರ್‌ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ ಲಭ್ಯವಾಗಿರುವುದು ಇದಕ್ಕೆ ನಿದರ್ಶನವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶಕ್ಕೆ ಕಮಲ್​ನಾಥ್​​, ರಾಜಸ್ಥಾನಕ್ಕೆ ಗೆಹ್ಲೋಟ್‌, ಛತ್ತೀಸ್​​ಗಡಕ್ಕೆ ಬಘೇಲ್; ಮೂರೂ ಸಿಎಂಗಳು ನಡೆದುಬಂದ ಹಾದಿಯತ್ತ ವಾರೆನೋಟ

ಮತಗಳಿಗೆ ಪ್ರಮಾಣ ಇಳಿಕೆ: ಈ ಬಾರಿ ಜೋಗಿ ಅವರ ಪಕ್ಷ ಶೇ 8.5ರಷ್ಟು ಹಾಗೂ ಬಿಎಎಸ್‌ಪಿ ಶೇ 3.4ರಷ್ಟು ಮತ ಪಡೆದಿವೆ. 2008ರಲ್ಲಿ ಶೇ 6.11ರಷ್ಟಿದ್ದ ಬಿಎಸ್‌ಪಿಯ ಮತ ಗಳಿಕೆ ಪ್ರಮಾಣವು 2013ರಲ್ಲಿ ಶೇ 4.27ಕ್ಕೆ ಕುಸಿದಿದೆ. ಈ ಬಾರಿ ಇನ್ನಷ್ಟು ಕುಸಿತ ಕಂಡಿದೆ.---------------
ವಿಧಾನಸಭೆಯಲ್ಲಿ ಮೊಬೈಲ್ ನಲ್ಲಿ ಚಿತ್ರ ವೀಕ್ಷಿಸುತ್ತಿದ್ದ ಮಾಜಿ ಸಚಿವ ಎನ್.ಮಹೇಶ್
First published:December 17, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ