ಜಮ್ಮು-ಕಾಶ್ಮೀರ ಮತ್ತು ಲಡಾಖ್​​ ವಿಭಜನೆ ಕಾನೂನುಬಾಹಿರ ಎಂದ ಚೀನಾ: ಇದು ದೇಶದ ಆಂತರಿಕ ವಿಚಾರ ಎಂದು ಭಾರತ ತಿರುಗೇಟು

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಸಾಕಷ್ಟು ಬದಲಾವಣೆಗಳಾಗಿತ್ತು. ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಾಗಿತ್ತು.

news18-kannada
Updated:November 1, 2019, 8:36 AM IST
ಜಮ್ಮು-ಕಾಶ್ಮೀರ ಮತ್ತು ಲಡಾಖ್​​ ವಿಭಜನೆ ಕಾನೂನುಬಾಹಿರ ಎಂದ ಚೀನಾ: ಇದು ದೇಶದ ಆಂತರಿಕ ವಿಚಾರ ಎಂದು ಭಾರತ ತಿರುಗೇಟು
ಕಾಶ್ಮೀರ
  • Share this:
ನವದೆಹಲಿ(ಅ.31): ಜಮ್ಮು-ಕಾಶ್ಮೀರ ಮತ್ತು ಲಡಾಖ್​​​​ ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಡೆಗೆ ಚೇನಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಲ್ಲದೇ ಜಮ್ಮು-ಕಾಶ್ಮೀರದ ವಿಭಜನೆ ಕಾನೂನುಬಾಹಿರ ಎಂದು ಹೇಳಿದೆ.

ಭಾರತ ಸರ್ಕಾರ ಜಮ್ಮು-ಕಾಶ್ಮೀರ ಮತ್ತು ಲಡಾಖ್​​​ ವಿಭಜಿಸಿ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಅಧಿಕೃತ ಆದೇಶ ಹೊರಡಿಸಿದೆ. ಈ ಕೇಂದ್ರಾಡಳಿ ಪ್ರದೇಶಗಳ ವ್ಯಾಪ್ತಿಗೆ ಚೀನಾದ ಕೆಲವು ಪ್ರದೇಶಗಳು ಸೇರಿಸಿಕೊಳ್ಳಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಭಾರತದ ಸರ್ಕಾರದ ಈ ನಿರ್ಧಾರ ಕಾನೂನುಬಾಹಿರ ಮತ್ತು ಅಸಿಂಧುವಾಗಿದೆ. ನಮ್ಮ ಪ್ರದೇಶಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಚೀನಾ ಗಂಭೀರ ಆರೋಪ ಎಸಗಿದೆ.

ಈ ಬೆನ್ನಲ್ಲೀಗ ಚೀನಾ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತ, ಜಮ್ಮು-ಕಾಶ್ಮೀರ ದೇಶದ ಆಂತರಿಕ ವಿಚಾರ. ಹಾಗಾಗಿ ದೇಶದ ಆಂತರಿಕ ವಿಚಾರಕ್ಕೆ ನಾವು ಚೀನಾ ಸೇರಿದಂತೆ ಇತರೆ ದೇಶಗಳಿಂದ ಯಾವುದೇ ಪ್ರತಿಕ್ರಿಯೆ ನಿರೀಕ್ಷಿಸುವುದಿಲ್ಲ. ಬದಲಿಗೆ ದೇಶದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರಿಸುತ್ತವೆ ಎಂದು ನಿರೀಕ್ಷಿಸುತ್ತೇವೆ. ನಮ್ಮ ನೆಲ ಅತಿಕ್ರಮಿಸಿದ ನೀವು ನಮ್ಮ ಬಗ್ಗೆಯೇ ಮಾತನಾಡುತ್ತೀರಿ ಎಂದು ಚೀನಾಗೆ ಭಾರತ ತಿರುಗೇಟು ನೀಡಿದೆ.

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಸಾಕಷ್ಟು ಬದಲಾವಣೆಗಳಾಗಿತ್ತು. ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಾಗಿತ್ತು. ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಕೇಂದ್ರಾಡಳಿತ ಪ್ರದೇಶಗಳಿಗೆ ಮೊದಲ ಲೆಫ್ಟಿನೆಂಟ್ ಗವರ್ನರ್​ಗಳಾಗಿ ಗಿರೀಶ್ ಚಂದ್ರ ಮುರ್ಮು ಮತ್ತು ಆರ್​.ಕೆ. ಮಾಥೂರ್ ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ‘ಕಾಶ್ಮೀರದ ವಾಸ್ತವ ಅರಿಯಲು ಯೂರೋಪ್​​ ಸಂಸದರ ಭೇಟಿಯೇ ಹೊರತು, ಇನ್ಯಾವುದೇ ಉದ್ದೇಶದಿಂದಲ್ಲ‘: ಕೇಂದ್ರ ಸರ್ಕಾರ

ಬುಧವಾರ ಮಧ್ಯರಾತ್ರಿಗೆ ಜಮ್ಮು ಕಾಶ್ಮೀರದ ರಾಜ್ಯದ ಸ್ಥಾನಮಾನ ಅಂತ್ಯವಾಗಿದೆ. ಇಂದಿನಿಂದ ಅಧಿಕೃತವಾಗಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಲಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದಂದೇ ಲೆಫ್ಟಿನೆಂಟ್​​ ಗವರ್ನರ್​ಗಳು ಅಧಿಕಾರ ವಹಿಸಿಕೊಂಡಿದ್ದಾರೆ. ಜಮ್ಮು ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಬೇಕೆಂಬುದು ಸರ್ದಾರ್ ವಲ್ಲಭಭಾಯಿ ಪಟೇಲ್ ಕನಸಾಗಿತ್ತು. ಅವರ ಜನ್ಮದಿನದಂದೇ ಈ ಕನಸು ಈಡೇರಿಸಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ಐಎಎಸ್​ ಅಧಿಕಾರಿ ಜಿ.ಸಿ. ಮುರ್ಮು ಹಾಗೂ ಲಡಾಖ್​​​​ ಲೆಫ್ಟಿನೆಂಟ್ ಗವರ್ನರ್ ಆಗಿ ಆರ್​.ಕೆ. ಮಾಥೂರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ತೆಗೆದುಹಾಕಿತ್ತು. ಭಾರತದಲ್ಲಿ ಇದೇ ಮೊದಲ ಬಾರಿಗೆ ರಾಜ್ಯವೊಂದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಬದಲಾಯಿಸಲಾಗಿದೆ.------------
First published:October 31, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ