ಶಬರಿಮಲೆ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಿಂದು ಅಮ್ಮಿನಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ಪ್ರಕರಣವನ್ನು ಸುಪ್ರೀಂಕೋರ್ಟ್ ನವೆಂಬರ್ 14ರಂದು ಏಳು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಹಿಸಿದ ಬಳಿಕ ಕೇರಳ ಸರ್ಕಾರ ತನ್ನ ನಿಲುವು ಬದಲಿಸಿಕೊಂಡಿದೆ. ನ್ಯಾಯಾಲಯ ಹೇಳುವವರೆಗೂ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದಿಲ್ಲ ಎಂದು ಕೇರಳ ಪೊಲೀಸರು ಹೇಳುತ್ತಾರೆ. 

HR Ramesh | news18-kannada
Updated:December 2, 2019, 5:51 PM IST
ಶಬರಿಮಲೆ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಿಂದು ಅಮ್ಮಿನಿ
ಕಳೆದ ವರ್ಷ ಶಬರಿಮಲೆ ದೇಗುಲ ಪ್ರವೇಶಿಸಿದ್ದ ಕನಕದುರ್ಗ, ಬಿಂದು ಅಮ್ಮಿನಿ
  • Share this:
ನವದೆಹಲಿ: ಶಬರಿಮಲೆಗೆ ಆಗಮಿಸುವ ಎಲ್ಲ ವಯೋಮಾನದ ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿ ಕಾರ್ಯಕರ್ತೆ ಬಿಂದೂ ಅಮ್ಮಿನಿ ಅವರು ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಕಳೆದ ವರ್ಷ ಶಬರಿಮಲೆ ದೇಗುಲ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಲ್ಲಿ ಬಿಂದು ಅಮ್ಮಿನಿ ಕೂಡ ಒಬ್ಬರು.

ಎಲ್ಲ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂಬ 2018ರ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿಲ್ಲ. ಆದ್ದರಿಂದ ಶಬರಿಮಲೆಗೆ ಬರುವ ಎಲ್ಲ ಮಹಿಳೆಯರಿಗೆ ಕೇರಳ ಸರ್ಕಾರ ರಕ್ಷಣೆ ನೀಡಬೇಕು ಎಂದು ಅಮ್ಮಿನಿ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ವಯಸ್ಸಿನ ಮಿತಿ ಇಲ್ಲದೆ ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಕಳೆದ ವರ್ಷದ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಆ ಬಳಿಕ ಬಿಂದೂ ಅಮ್ಮಿನಿ ಮತ್ತು ಕನಕ ದುರ್ಗಾ ಎಂಬ ಮಹಿಳೆಯರು ಪೊಲೀಸರ ರಕ್ಷಣೆಯಲ್ಲಿ ಶಬರಿಮಲೆ ಬೆಟ್ಟ ಪ್ರವೇಶಿಸಿದ್ದರು. 

ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ಪ್ರಕರಣವನ್ನು ಸುಪ್ರೀಂಕೋರ್ಟ್ ನವೆಂಬರ್ 14ರಂದು ಏಳು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಹಿಸಿದ ಬಳಿಕ ಕೇರಳ ಸರ್ಕಾರ ತನ್ನ ನಿಲುವು ಬದಲಿಸಿಕೊಂಡಿದೆ. ನ್ಯಾಯಾಲಯ ಹೇಳುವವರೆಗೂ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದಿಲ್ಲ ಎಂದು ಕೇರಳ ಪೊಲೀಸರು ಹೇಳುತ್ತಾರೆ.

ಪುಣೆ ಮೂಲದ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರೊಂದಿಗೆ ನವೆಂಬರ್ 26ರಂದು ಅವರು ಶಬರಿಮಲೆ ದೇಗುಲ ಪ್ರವೇಶಿಸಲು ಮುಂದಾದಾಗ ಕೆಲವರು ಕಾರದ ಪುಡಿ ಸ್ಪ್ರೇ ಮಾಡುವ ಮೂಲಕ ದಾಳಿ ಮಾಡಿದ್ದರು.

ಇದನ್ನು ಓದಿ: ಮುಂಜಾನೆ ಶಬರಿಮಲೆ ಪ್ರವೇಶಕ್ಕೆ ಮುಂದಾದ ಇಬ್ಬರು ಮಹಿಳೆಯರು; ಮತ್ತೆ ಭುಗಿಲೆದ್ದ ಪ್ರತಿಭಟನೆಯ ಕಾವು

ಈ ವಿಚಾರವಾಗಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮ್ಮಿನಿ ಅವರು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟವಾಗಿದ್ದರೂ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ಪೊಲೀಸ್ ರಕ್ಷಣೆ ಒದಗಿಸದ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
Loading...

First published:December 2, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...