ಚೌಕಿದಾರರು ಉಳ್ಳವರ ಪರವಾಗಿ ಕೆಲಸ ಮಾಡುತ್ತಿದ್ದಾರೆ; ಕಬ್ಬು ಬೆಳೆಗಾರರ ಬಾಕಿ ಮೊತ್ತದ ಬಗ್ಗೆ ಧ್ವನಿಯೆತ್ತಿದ ಪ್ರಿಯಾಂಕಾ ಗಾಂಧಿ

ಕಬ್ಬು ಬೆಳೆಗಾರರಿಗೆ ಉತ್ತರಪ್ರದೇಶ ಸರ್ಕಾರದಿಂದ ಸಂದಾಯವಾಗಬೇಕಾದ ಹಣ 10,000 ಕೋಟಿಗೂ ಹೆಚ್ಚಿದೆ ಎಂಬ ವರದಿಯನ್ನು ಪ್ರಿಯಾಂಕಾ ಗಾಂಧಿ ಟ್ವಿಟ್ಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

sushma chakre | news18
Updated:March 24, 2019, 4:13 PM IST
ಚೌಕಿದಾರರು ಉಳ್ಳವರ ಪರವಾಗಿ ಕೆಲಸ ಮಾಡುತ್ತಿದ್ದಾರೆ; ಕಬ್ಬು ಬೆಳೆಗಾರರ ಬಾಕಿ ಮೊತ್ತದ ಬಗ್ಗೆ ಧ್ವನಿಯೆತ್ತಿದ ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
sushma chakre | news18
Updated: March 24, 2019, 4:13 PM IST
ನವದೆಹಲಿ (ಮಾ. 24): ಉತ್ತರಪ್ರದೇಶ ಸರ್ಕಾರ ಕಬ್ಬು ಬೆಳೆಗಾರರಿಗೆ ಬಾಕಿ ಮೊತ್ತವನ್ನು ಪಾವತಿಸದಿರುವ ಬಗ್ಗೆ ಆರೋಪಿಸಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಚೌಕಿದಾರರು ಕೇವಲ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದ್ದಾರೆಯೇ ಹೊರತು ಬಡವರ ಕಡೆಗೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಕಬ್ಬು ಬೆಳೆಗಾರರಿಗೆ ಬಾಕಿ ಮೊತ್ತವನ್ನು ಪಾವತಿಸಿಲ್ಲ. ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಸಂದಾಯವಾಗಬೇಕಾದ ಹಣ 10,000 ಕೋಟಿಗೂ ಹೆಚ್ಚಿದೆ ಎಂಬ ವರದಿಯನ್ನು ಪ್ರಿಯಾಂಕಾ ಟ್ವಿಟ್ಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಕಬ್ಬು ಬೆಳೆಗಾರರು ರಾತ್ರಿ-ಹಗಲೆನ್ನದೆ ದುಡಿದು ಕಬ್ಬು ಬೆಳೆಯುತ್ತಾರೆ. ಆದರೆ, ಉತ್ತರಪ್ರದೇಶ ಸರ್ಕಾರ ರೈತರ ಬಾಕಿ ಮೊತ್ತವನ್ನು ಪಾವತಿಸುವ ಜವಾಬ್ದಾರಿಯನ್ನೂ ತೆಗೆದುಕೊಳ್ಳುತ್ತಿಲ್ಲ ಎಂದಿದ್ದಾರೆ.

ಮೋದಿ, ಆಡ್ವಾಣಿ ಪ್ರಭಾವ; ಕುಟುಂಬ ರಾಜಕಾರಣದ ಕಳಂಕ ಬೇಡವೆಂದು ಚುನಾವಣೆಯಿಂದ ಹಿಂದೆ ಸರಿದ ಬಿಜೆಪಿ ನಾಯಕನ ಮಗ

ಬಾಕಿಯಿರುವ 10,000 ಕೋಟಿ ಮೊತ್ತದಲ್ಲಿ ರೈತರು ತಮ್ಮ ಮಕ್ಕಳ ಶಿಕ್ಷಣ, ಮನೆ ಖರ್ಚು, ಊಟ-ತಿಂಡಿ, ಆರೋಗ್ಯ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ. ಆದರೆ, ತಮ್ಮನ್ನು ಚೌಕಿದಾರರು ಎಂದು ಹೇಳಿಕೊಳ್ಳುವವರು ಉಳ್ಳವರ ಪರವಾಗಿ ಮಾತ್ರ ಕೆಲಸ ಮಾಡುತ್ತಾರೆ. ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲದೆ ಅವರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.

First published:March 24, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626