news18-kannada Updated:April 6, 2020, 4:47 PM IST
ಪ್ರಾತಿನಿಧಿಕ ಚಿತ್ರ
ನವದೆಹಲಿ: ಸೋಮವಾರ ಭಾರತೀಯ ಜನತಾ ಪಕ್ಷ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಉತ್ತರ ಪ್ರದೇಶದಾದ್ಯಂತ ಒಂದು ವಾರದ ಅವಧಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಅಲ್ಲದೇ ಕೊರೋನಾ ವೈರಸ್, ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುವ ಜನರಿಗೆ ಧನ್ಯವಾದ ಸಲ್ಲಿಸಲು ಸಹಿ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಸ್ವತಂತ್ರ ದೇವ್ ಸಿಂಗ್ ಹೇಳಿದರು.
ಪಕ್ಷದ ಕಾರ್ಯಕರ್ತರಿಗೆ ಜನರಿಗಾಗಿ ತಮ್ಮ ಮನೆಗಳಲ್ಲಿ ಕನಿಷ್ಠ ಎರಡು ಫೇಸ್ ಮಾಸ್ಕ್ಗಳನ್ನು ಮಾಡುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಪೊಲೀಸರು, ನೈರ್ಮಲ್ಯ ಕಾರ್ಮಿಕರು, ಬ್ಯಾಂಕ್ ಅಧಿಕಾರಿಗಳು, ಅಂಚೆ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಇತರ ಇಲಾಖೆಗಳಿಗೆ ಧನ್ಯವಾದ ಸಲ್ಲಿಸುವ ಸಲುವಾಗಿ ಒಂದು ವಾರದ ಅವಧಿಯ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ಸಿಂಗ್ ಹೇಳಿದರು.
ಪ್ರಧಾನ ಕಾರ್ಯದರ್ಶಿ (ಸಂಸ್ಥೆ) ಸುನೀಲ್ ಬನ್ಸಾಲ್ ಅವರು ಅಭಿಯಾನವನ್ನು ಕೈಗೊಳ್ಳುವಾಗ, ಕೋವಿಡ್-19 ಹರಡುವುದನ್ನು ತಡೆಗಟ್ಟಲು ಪಕ್ಷದ ಕಾರ್ಯಕರ್ತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನು ಓದಿ: ಏ.14ರ ನಂತರವೂ ಲಾಕ್ಡೌನ್ ಮುಂದುವರೆಯಬಹುದು ಅಥವಾ ಕೆಲವು ಸ್ಥಳಗಳಲ್ಲಿ ಮಾತ್ರ ತೆಗೆಯಬಹುದು
ವರದಿ: ಸಂಧ್ಯಾ ಎಂ
First published:
April 6, 2020, 4:47 PM IST