ಸೋನಿಯಾ ವಿರುದ್ಧ ಕಾಂಗ್ರೆಸ್​ ಮಾಜಿ ನಾಯಕನನ್ನು ಕಣಕ್ಕಿಳಿಸಿದ ಬಿಜೆಪಿ; ಅಮಿತ್ ಶಾ ಎದುರಾಳಿಯಾಗಿ ಕಾಂಗ್ರೆಸ್​ ಶಾಸಕ ಸ್ಪರ್ಧೆ

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಅಜಂಗಢ ಕ್ಷೇತ್ರದಿಂದ ಭೋಜ್​ಪುರಿ ನಟ ಹಾಗೂ ಗಾಯಕ ದಿನೇಶ್​ ಲಾಲ್​ ಯಾದವ್​ ಅವರನ್ನು ಬಿಜೆಪಿ ಸ್ಪರ್ಧೆಗೆ ಇಳಿಸಿದೆ.

HR Ramesh | news18
Updated:April 4, 2019, 9:16 AM IST
ಸೋನಿಯಾ ವಿರುದ್ಧ ಕಾಂಗ್ರೆಸ್​ ಮಾಜಿ ನಾಯಕನನ್ನು ಕಣಕ್ಕಿಳಿಸಿದ ಬಿಜೆಪಿ; ಅಮಿತ್ ಶಾ ಎದುರಾಳಿಯಾಗಿ ಕಾಂಗ್ರೆಸ್​ ಶಾಸಕ ಸ್ಪರ್ಧೆ
ಸೋನಿಯಾ ಗಾಂಧಿ
  • News18
  • Last Updated: April 4, 2019, 9:16 AM IST
  • Share this:
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ಸ್ಪರ್ಧೆ ಮಾಡಲಿರುವ ಕಾಂಗ್ರೆಸ್​ನ ಸೋನಿಯಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಮುಲಾಯಂ ಸಿಂಗ್ ಯಾದವ್​ ಸೇರಿದಂತೆ ಘಟಾನುಘಟಿ ನಾಯಕರ ವಿರುದ್ಧ ಸ್ಪರ್ಧೆ ಮಾಡಲಿರುವ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.

ಉತ್ತರಪ್ರದೇಶದ ರಾಯ್​ಬರೇಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಎದುರಾಳಿಯಾಗಿ ಸ್ಥಳೀಯ ಮುಖಂಡ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಕಾಂಗ್ರೆಸ್​ನಲ್ಲಿ ಬಂಡಾಯ ಬಾವುಟ ಹಾರಿಸಿ, ಕಳೆದ ವರ್ಷ ಬಿಜೆಪಿ ಸೇರಿದ್ದ ದಿನೇಶ್​, ಸೋನಿಯಾ ಅವರಿಗೆ ಪ್ರಬಲ ಪೈಪೋಟಿ ಒಡ್ಡುವ ಲೆಕ್ಕಾಚಾರದ ಮೇಲೆ ಇವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಅಲ್ಲದೇ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಅಜಂಗಢ ಕ್ಷೇತ್ರದಿಂದ ಭೋಜ್​ಪುರಿ ನಟ ಹಾಗೂ ಗಾಯಕ ದಿನೇಶ್​ ಲಾಲ್​ ಯಾದವ್​ ಅವರನ್ನು ಬಿಜೆಪಿ ಸ್ಪರ್ಧೆಗೆ ಇಳಿಸಿದೆ.

ಇದನ್ನು ಓದಿ: ಧೈರ್ಯವಿದ್ದರೆ ಮೋದಿ ನನ್ನ ಜೊತೆ ಬಹಿರಂಗ ಚರ್ಚೆಗೆ ಬರಲಿ; ಪ್ರಧಾನಿಗೆ ಮಮತಾ ಬ್ಯಾನರ್ಜಿ ಸವಾಲು

ಇನ್ನು ಅಖಿಲೇಶ್ ಅವರ ತಂದೆ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಎದುರಾಳಿಯಾಗಿ ಮೈನ್​ಪುರಿ ಕ್ಷೇತ್ರದಿಂದ ಪ್ರೇಮ್ ಸಿಂಗ್ ಶಾಕ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಹಾಗೆಯೇ, ಗುಜರಾತ್​ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಧ್ಯಕ್ಷ ಅಮಿತ್​ ಶಾ ಸ್ಪರ್ಧೆ ಮಾಡುತ್ತಿದ್ದು, ಇವರ ವಿರುದ್ಧ ಕಾಂಗ್ರೆಸ್​ ಶಾಸಕ ಸಿ.ಜೆ. ಚಾವ್ಡಾ ಅವರನ್ನು ಸ್ಪರ್ಧೆಗೆ ಇಳಿಸಿದೆ. ಗಾಂಧಿನಗರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಚಾವ್ಡಾ ಅವರು ಅಮಿತ್ ಶಾಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ ಎನ್ನುವ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.

First published:April 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading