ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ನೈತಿಕ ಜನಾದೇಶವಿದೆ; ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್

ದಿಢೀರ್​​ ಬೆಳವಣಿಗೆಯಲ್ಲಿ ಎನ್​​ಸಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗಿದೆ. ದೇವೇಂದ್ರ ಪಡ್ನವೀಸ್ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೇ ಎನ್​​ಸಿಪಿಯ ಅಜಿತ್​​ ಪವರ್​​​​ ಉಪಮುಖ್ಯಮಂತ್ರಿಯಾಗಿ ಪ್ರಮಾಣ ತೆಗೆದುಕೊಂಡಿದ್ಧಾರೆ.

HR Ramesh | news18-kannada
Updated:November 23, 2019, 4:47 PM IST
ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ನೈತಿಕ ಜನಾದೇಶವಿದೆ; ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್
  • Share this:
ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ನೈತಿಕ ಜನಾದೇಶ ಇದೆ ಎಂದು ಶನಿವಾರ ಬಿಜೆಪಿ ಪ್ರತಿಪಾದಿಸಿದೆ. ಚುನಾವಣೆ ಸಮಯದಲ್ಲಿ ಎನ್​ಸಿಪಿ ಅಜಿತ್ ಪವಾರ್ ಅವರನ್ನು ಭ್ರಷ್ಟ ಎಂದು ಪ್ರಚಾರದುದ್ದಕ್ಕೂ ಹೇಳಿ ಇದೀಗ ಅದೇ ಅಜಿತ್ ಪವಾರ್ ಸಹಕಾರದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ. 

ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿರುವ ಕೇಂದ್ರದ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಕಾಂಗ್ರೆಸ್, ಎನ್​ಸಿಪಿ ಮತ್ತು ಶಿವಸೇನೆ ವಿರುದ್ಧ ಹರಿಹಾಯ್ದರು. ಸೈದ್ಧಾಂತಿಕವಾಗಿ ತದ್ವಿರುದ್ಧವಾಗಿರುವ ಪಕ್ಷಗಳು ಅಧಿಕಾರಕ್ಕಾಗಿ ಒಂದಾದವು. ಕೇಸರಿ ಪಕ್ಷ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜನಾದೇಶದೊಂದಿಗೆ ಸರ್ಕಾರ ರಚಿಸಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಶಂಕರ್ ಪ್ರಸಾದ್, ಸರ್ಕಾರ ರಚನೆಗೆ ಶಾಸಕರ ಬೆಂಬಲ ಪತ್ರ ನೀಡಿದ ಬಿಜೆಪಿಯ ಫಡ್ನವೀಸ್ ಮತ್ತು ಎನ್​ಸಿಪಿಯ ಅಜಿತ್ ಪವಾರ್ ಅವರು ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ನಿರ್ಧಾರ ಮಾಡಿದರು. ಯಾವುದೇ ಪಕ್ಷ ಅಥವಾ ಮೈತ್ರಿಯಿಂದ ಹಕ್ಕುಮಂಡನೆ ರಾಜ್ಯಪಾಲರಿಗೆ ಬಂದಿರಲಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​​-ಎನ್​​ಸಿಪಿ ಮತ್ತು ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಶಿವಸೇನಾ ಮುಖ್ಯಸ್ಥ ಉದ್ಬವ್​ ಠಾಕ್ರೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನಲಾಗಿತ್ತು. ಆದರೀಗ ದಿಢೀರ್​​ ಬೆಳವಣಿಗೆಯಲ್ಲಿ ಎನ್​​ಸಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗಿದೆ. ದೇವೇಂದ್ರ ಪಡ್ನವೀಸ್ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೇ ಎನ್​​ಸಿಪಿಯ ಅಜಿತ್​​ ಪವರ್​​​​ ಉಪಮುಖ್ಯಮಂತ್ರಿಯಾಗಿ ಪ್ರಮಾಣ ತೆಗೆದುಕೊಂಡಿದ್ಧಾರೆ.

ಇದನ್ನು ಓದಿ: ಮಹಾ ಶಾಕ್ - ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ತರಾತುರಿ ಪ್ರಮಾಣ ವಚನ, ಸೇನೆಗೆ ಭಾರೀ ಮುಖಭಂಗ

First published: November 23, 2019, 4:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading