Arun Jaitley: ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್​ ಆಸ್ಪತ್ರೆ ಮೂಲಗಳಿಂದ ಮಾಹಿತಿ

Arun Jaitley Health Updates: ಅರುಣ್​ ಜೇಟ್ಲಿ ಲೈಫ್ ಸಪೋರ್ಟ್​ ಮೂಲಕ ಉಸಿರಾಟ ನಡೆಸುತ್ತಿರುವುದಾಗಿ ಮಂಗಳವಾರ ವೈದ್ಯರು ತಿಳಿಸಿದ್ದರು. ಆದರೆ, ನಿನ್ನೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Sushma Chakre | news18-kannada
Updated:August 24, 2019, 9:31 AM IST
Arun Jaitley: ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್​ ಆಸ್ಪತ್ರೆ ಮೂಲಗಳಿಂದ ಮಾಹಿತಿ
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ
  • Share this:
ನವದೆಹಲಿ (ಆ. 24): ಅನಾರೋಗ್ಯದ ಕಾರಣದಿಂದ 2 ವಾರಗಳ ಹಿಂದೆ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ತೀರಾ  ಗಂಭೀರವಾಗಿದೆ. ಈ ಬಗ್ಗೆ ಏಮ್ಸ್​ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. 

ಅರುಣ್ ಜೇಟ್ಲಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ನಿನ್ನೆ ರಾತ್ರಿ ಏಮ್ಸ್​ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತೀವ್ರ ಉಸಿರಾಟದ  ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆ. 9ರಂದು ಅರುಣ್ ಜೇಟ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವಾರ ಕೇಂದ್ರದ ಸಚಿವರಾದ ಅಮಿತ್​ ಶಾ,  ಡಾ. ಹರ್ಷವರ್ಧನ್​, ಬಿಜೆಪಿ ನಾಯಕರಾದ ಎಲ್​.ಕೆ. ಅಡ್ವಾಣಿ, ಮನೇಕಾ ಗಾಂಧಿ ಮುಂತಾದವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಇದುವರೆಗೂ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಇಲಾಖೆಯ ರಾಜ್ಯ ಸಚಿವೆ ಅಶ್ವಿನಿ ಚೌಬೆ, ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಜೆಡಿಯು ಅಧ್ಯಕ್ಷ ಶರದ್ ಯಾದವ್  ಏಮ್ಸ್​ ಆಸ್ಪತ್ರೆಗೆ ತೆರಳಿ ಅರುಣ್​ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ.

Arun Jaitley: ಮಾಜಿ ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ; ರಾತ್ರೋರಾತ್ರಿ ಆಸ್ಪತ್ರೆಗೆ ದೌಡಾಯಿಸಿದ ಅಮಿತ್​ ಶಾ, ಹರ್ಷವರ್ಧನ್

ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್​ ಜೇಟ್ಲಿ ಈ ಹಿಂದೆಯೂ ಏಮ್ಸ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ಅರುಣ್​ ಜೇಟ್ಲಿ ಮೂಲತಃ ವಕೀಲರಾಗಿದ್ದು, ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಪ್ರಭಾವಿ ನಾಯಕರಾಗಿದ್ದವರು. ಜತೆಗೆ ಮೋದಿ ಸರ್ಕಾರದ ಟ್ರಬಲ್​ ಶೂಟರ್​ ಎಂದೂ ಕರೆಸಿಕೊಂಡವರು. ಈ ಬಾರಿ ಅವರ ಆರೋಗ್ಯ ಹದಗೆಟ್ಟ ಕಾರಣ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

2019ರ ಜನವರಿಯಲ್ಲಿ ಜೇಟ್ಲಿ ಅಮೆರಿಕಾದಲ್ಲಿ ಎಡಗಾಲಿನಲ್ಲಿ ಆಗಿದ್ದ ಸಾಫ್ಟ್​ ಟಿಶ್ಯು ಕ್ಯಾನ್ಸರ್​ ಆಪರೇಷನ್​ಗೆ ಒಳಗಾಗಿದ್ದರು. ಮೋದಿ ಸರ್ಕಾರದ ಆರನೇ ಮತ್ತು ಕೊನೆಯ ಬಜೆಟ್​ ಮಂಡನೆ ಮಾಡಲೂ ಸಾಧ್ಯವಾಗದೇ ಪಿಯೂಶ್​ ಗೋಯಲ್​ ಬಜೆಟ್​ ಮಂಡಿಸಿದ್ದರು. ಮೋದಿ ನೇತೃತ್ವದ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿ ಅಧಿಕಾರಕ್ಕೆ ಬಂದಾಗ ಜೇಟ್ಲಿ ಅವರೇ ಸಚಿವ ಸಂಪುಟದಿಂದ ದೂರ ಉಳಿಯುವ ನಿರ್ಧಾರವನ್ನು ತಿಳಿಸಿದ್ದರು.

ಅರುಣ್​ ಜೇಟ್ಲಿ ಲೈಫ್ ಸಪೋರ್ಟ್​ ಮೂಲಕ ಉಸಿರಾಟ ನಡೆಸುತ್ತಿರುವುದಾಗಿ ಮಂಗಳವಾರ ವೈದ್ಯರು ತಿಳಿಸಿದ್ದರು. ಆದರೆ, ನಿನ್ನೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮತ್ತು ಕುಟುಂಬಸ್ಥರು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. 

First published: August 24, 2019, 9:31 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading