ಮಮತಾ ಬ್ಯಾನರ್ಜಿ ವಿರುದ್ಧದ ವಾಗ್ದಾಳಿಯನ್ನು ನಿಲ್ಲಿಸಿ; ಸುವೆಂಧು ಅಧಿಕಾರಿಗೆ ಬಿಜೆಪಿ ಹೈಕಮಾಂಡ್ ಸೂಚನೆ

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಅವರ ಕಷ್ಟಕ್ಕೆ ನೆರವಾಗೋಣ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯನ್ನು ಬಿಜೆಪಿ ಮುಖಂಡ ರಾಜೀವ್ ಬ್ಯಾನರ್ಜಿ ಕೋರಿದ್ದಾರೆ.

ಸುವೆಂಧು ಅಧಿಕಾರಿ. ಮಮತಾ ಬ್ಯಾನರ್ಜಿ

ಸುವೆಂಧು ಅಧಿಕಾರಿ. ಮಮತಾ ಬ್ಯಾನರ್ಜಿ

 • Share this:
  ಕೋಲ್ಕತ್ತಾ (ಜುಲೈ 08); ಪಶ್ಚಿಮ ಬಂಗಾಳದಲ್ಲಿ ಒಂದು ಕಾಲದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಸುವೆಂಧು ಅಧಿಕಾರಿ ಕಳೆದ ಚುನಾವಣೆ ಸಂದರ್ಭ ದಲ್ಲಿ ಬಿಜೆಪಿಗೆ ಪಕ್ಷಾಂತರ ಮಾಡಿ ಮಮತಾ ವಿರುದ್ಧವೇ ಸ್ಪರ್ಧಿಸಿದ್ದು ಇತಿಹಾಸ. ಆದರೆ, ಈ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸುವೆಂಧು ಅಧಿಕಾರಿ ಗೆಲುವು ದಾಖಲಿಸಿದ್ದರೂ ಸಹ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿತ್ತು. ಆದರೆ, ಚುನಾವಣಾ ಸಂದರ್ಭದಿಂದ ಇಂದಿನ ವರೆಗೆ ಮಮತಾ ವಿರುದ್ಧದ ವಾಗ್ದಾಳಿಯನ್ನು ಮಾತ್ರ ಸುವೆಂಧು ಅಧಿಕಾರಿ ನಿಲ್ಲಿಸುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಸುವೆಂಧು ಅಧಿಕಾರಿಯ ಈ ವರ್ತೆನೆ ಪಕ್ಷದಲ್ಲೇ ಆಕ್ಷೇಪ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ವಾಗ್ದಾಳಿ ನಡೆಸುವುದು ಬಿಟ್ಟು ಜನರ ಪರವಾಗಿ ಕೆಲಸ ಮಾಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

  ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಅವರ ಕಷ್ಟಕ್ಕೆ ನೆರವಾಗೋಣ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯನ್ನು ಬಿಜೆಪಿ ಮುಖಂಡ ರಾಜೀವ್ ಬ್ಯಾನರ್ಜಿ ಕೋರಿದ್ದಾರೆ. ಇದಕ್ಕೆ ರಾಜೀವ್ ಬ್ಯಾನರ್ಜಿ ಹೇಳಿಕೆ ಸರಿಯಾಗಿದೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

  ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿದ್ದ ರಾಜೀವ್ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ಪಕ್ಷವನ್ನು ತೊರೆದು ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿದ್ದರು. ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಜಯ ಗಳಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಯುತ್ತಿದೆ.

  "ಜನಾದೇಶ ಪಡೆದ ಮುಖ್ಯಮಂತ್ರಿ ವಿರುದ್ಧ ನ್ಯಾಯಯುತವಲ್ಲದ ವಾಗ್ದಾಳಿ ಮುಂದುವರಿಸದಂತೆ ನಾನು ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸುತ್ತೇನೆ. ಬಂಗಾಳದ ಜನರು ಅವರ ಪಕ್ಷಕ್ಕೆ 213 ಸ್ಥಾನಗಳನ್ನು ನೀಡಿದ್ದಾರೆ. ಅವರ ಮೇಲೆ ವಾಗ್ದಾಳಿ ನಡೆಸುವ ಬದಲು, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ ಬೆಲೆಗಳ ಏರಿಕೆಯಿಂದ ಜನರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಪ್ರಯತ್ನಿಸಿ" ಎಂದು ರಾಜೀವ್ ಬ್ಯಾನರ್ಜಿ ಹೇಳಿದ್ದಾರೆ.

  ಇದನ್ನೂ ಓದಿ: First Corona Vaccine| ವಿಶ್ವದ ಮೊದಲ ಲಸಿಕೆ ಯಾವುದು? ಅದು ಹೇಗೆ ಸಿದ್ಧವಾಯ್ತು ನೋಡಿ..!

  ರಾಜೀವ್ ಬ್ಯಾನರ್ಜಿ ಹೇಳೀಕೆಯನ್ನು ಸ್ವಾಗತಿಸಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, "ರಾಜೀವ್ ಬ್ಯಾನರ್ಜಿ ಹೇಳಿದ್ದು ಸರಿ. ರಾಜ್ಯದ ಆಳ್ವಿಕೆ ನಡೆಸಲು ಜನಾದೇಶ ಪಡೆದಿರುವ ನಮ್ಮ ನಾಯಕರನ್ನು ಸುವೇಂದು ಅಧಿಕಾರಿ ಅನ್ಯಾಯವಾಗಿ ಗುರಿಯಾಗಿಸಿಕೊಂಡಿದ್ದಾರೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೆ ಏರುತ್ತಿದ್ದರೂ ಈ ಬಗ್ಗೆ ಬಿಜೆಪಿ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ" ಎಂದಿದ್ದಾರೆ.

  ಇದನ್ನೂ ಓದಿ: ಮೋದಿ ಕ್ಯಾಬಿನೆಟ್​ 2.0| ಮೆಗಾ ರೀಬೂಟ್​ ನಂತರ ಇಂದು ಅಧಿಕಾರ ವಹಿಸಲಿದ್ದಾರೆ ನೂತನ ಸಚಿವರು!

  ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸುವೇಂದು ಅಧಿಕಾರಿಯ ಗೆಲುವು ಪ್ರಶ್ನಿಸಿ ಕೊಲ್ಕತ್ತಾ ಹೈಕೋರ್ಟಗೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಲಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ, ಬಿಜೆಪಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ ಎಂದು ಟಿಎಂಸಿ ನಾಯಕರು ಆರೋಪಿಸಿದ್ದರು. ಹೀಗಾಗಿ ಅವರನ್ನು ಬದಲಾಯಿಸುವಂತೆ ಮಮತಾ ಬ್ಯಾನಜಿ ಅರ್ಜಿ ಸಲ್ಲಿಸಿದ್ದರು. ಬುಧವಾರ ನ್ಯಾಯಾಧೀಶ ಕೌಶಿಕ್ ಚಂದಾ, ಮಮತಾ ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹಿಂದೆ ಸರಿದಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: