• Home
 • »
 • News
 • »
 • national-international
 • »
 • Assam New Chief Minister: ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿಮಂತ್ ಬಿಸ್ವಾ ಶರ್ಮಾ

Assam New Chief Minister: ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿಮಂತ್ ಬಿಸ್ವಾ ಶರ್ಮಾ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿಮಂತ್ ಬಿಸ್ವಾ ಶರ್ಮಾ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿಮಂತ್ ಬಿಸ್ವಾ ಶರ್ಮಾ

ಹಿಮಂತ ಬಿಸ್ವಾ ಶರ್ಮಾ 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರಿದ್ದರು. ನಂತರ ಪ್ರಬಲವಾಗಿ ಬೆಳೆದ ಅವರನ್ನು ಪಕ್ಷದ ಟ್ರಬಲ್ ಶೂಟರ್ ಎಂದು ಗುರುತಿಸಿಕೊಂಡರು. ಪ್ರಚೋದನಾಕಾರಿ ಹೇಳಿಕೆಗಳಿಗೆ ಕುಖ್ಯಾತಿಯಾದ ಹಿಮಂತ್ ಬಿಸ್ವಾ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.

ಮುಂದೆ ಓದಿ ...
 • Share this:

   ಹಿಮಂತ್ ಬಿಸ್ವಾ ಶರ್ಮಾ ಅಸ್ಸಾಂ ರಾಜ್ಯದ 15ನೇ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಿದರು. ಇವರೊಂದಿಗೆ 13 ಮಂದಿ ಸಚಿವ ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ್ ಬಿಸ್ವಾ ಶರ್ಮಾ ಅವರನ್ನು ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.


  ಈಶಾನ್ಯ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸಾರಥಿಯಾಗಿದ್ದ ಶರ್ಮಾ ಅವರು ರಾಜ್ಯಪಾಲ ಜಗದೀಶ್ ಮುಖಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

  ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಅಸ್ಸಾಂನಲ್ಲಿ ಮತ್ತೊಂದು ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ, ಈ ಹಿಂದಿನ ಅವಧಿಯಲ್ಲಿ ಎನ್​ಡಿಎ ಮೈತ್ರಿಕೂಟದ ಸಿಎಂ ಆಗಿದ್ದ ಸರ್ಬಾನಂದ ಸೋನೊವಾಲ್ ಮತ್ತೊಮ್ಮೆ ಸಿಎಂ ಆಗುವ ಕುರಿತು ಸಾಕಷ್ಟು ಪ್ರಶ್ನೆಗಳು ಉದ್ಭವಿಸಿದ್ದವು. ಹೀಗಾಗಿ ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಯೂ ಹುಟ್ಟಿಕೊಂಡಿತ್ತು. ಆದರೆ, ಸರ್ಬಾನಂದ ಸೋನೊವಾಲ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದರ ಬೆನ್ನಿಗೆ ಅಸ್ಸಾಂನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ತೆರೆಬಿದ್ದಿದೆ. ಕಳೆದ ಅವಧಿಯಲ್ಲಿ ಆರೋಗ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಹಿಮಂತ ಬಿಸ್ವಾ ಶರ್ಮಾ ಅವರನ್ನು ಅಸ್ಸಾಂನ ಎನ್​ಡಿಎ ಮೈತ್ರಿಯ ನೂತನ ಮುಖ್ಯಮಂತ್ರಿ ಎಂದು ಬಿಜೆಪಿ ಇಂದು ಅಧಿಕೃತವಾಗಿ ಘೋಷಿಸಿದೆ.


  ಇದನ್ನು ಓದಿ: ನನ್ನ ತವರು ದೇಶ ನರಳಬಾರದು: ಭಾರತದ ಸ್ಥಿತಿ ಕಂಡು ಮರುಗಿದ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್


  126 ಸದಸ್ಯ ಬಲದ ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಾಂಶ ಕಳೆದ ಭಾನುವಾರ ಪ್ರಕಟಗೊಂಡಿತ್ತು. ಬಿಜೆಪಿ ಮೈತ್ರಿ 60 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅತ್ಯಧಿಕ ದೊಡ್ಡಪಕ್ಷವಾಗಿ ಹೊರಹೊಮ್ಮಿತ್ತು. ಇದರೊಂದಿಗೆ ಮತ್ತೊಂದು ಅವಧಿಗೆ ಅಧಿಕಾರ ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಬಿಜೆಪಿ ಮೈತ್ರಿ ಪಕ್ಷಗಳಾದ ಎಜಿಪಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಯುಪಿಪಿಎಲ್​ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.


  ಅಸ್ಸಾಂನ ಸ್ಥಳೀಯ ಸೋನೊವಾಲ್-ಕಾಚಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಸರ್ಬಾನಂದ ಸೋನೊವಾಲ್ ಮತ್ತು ಈಶಾನ್ಯ ರಾಜ್ಯಗಳ ಎನ್‌ಡಿಎ ಕನ್ವೀನರ್ ಆಗಿರುವ ಅಸ್ಸಾಮೀ ಬ್ರಾಹ್ಮಣರಾದ ಹಿಮಂತ ಬಿಸ್ವಾ ಶರ್ಮಾರವರ ನಡುವೆ ಮೇ 02 ರಂದು ಫಲಿತಾಂಶ ಪ್ರಕಟವಾದಾಗಿನಿಂದಲೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ನಿನ್ನೆ ಇಬ್ಬರು ನಾಯಕರು ದೆಹಲಿಗೆ ತೆರಳಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಹಿಮಂತ ಬಿಸ್ವಾ ಶರ್ಮಾ 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರಿದ್ದರು. ನಂತರ ಪ್ರಬಲವಾಗಿ ಬೆಳೆದ ಅವರನ್ನು ಪಕ್ಷದ ಟ್ರಬಲ್ ಶೂಟರ್ ಎಂದು ಗುರುತಿಸಿಕೊಂಡರು. ಪ್ರಚೋದನಾಕಾರಿ ಹೇಳಿಕೆಗಳಿಗೆ ಕುಖ್ಯಾತಿಯಾದ ಹಿಮಂತ್ ಬಿಸ್ವಾ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.

  Published by:HR Ramesh
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು