• Home
  • »
  • News
  • »
  • national-international
  • »
  • ಇಂದು ಜೆ.ಪಿ. ನಡ್ಡಾ-ರಮೇಶ್ ಜಾರಕಿಹೊಳಿ ಭೇಟಿ; ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಇಂದು ಜೆ.ಪಿ. ನಡ್ಡಾ-ರಮೇಶ್ ಜಾರಕಿಹೊಳಿ ಭೇಟಿ; ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಸಚಿವ ರಮೇಶ್​ ಜಾರಕಿಹೊಳಿ

ಸಚಿವ ರಮೇಶ್​ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಅವರ ಆಪ್ತ ವಲಯದ ಪ್ರಕಾರ, ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲದ ತಯಾರಿ ಶುರುವಾಗಿದೆ. ಅದರಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಈ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಉಸ್ತುವಾರಿ ಆಗಿರುವ ರಾಜ್ಯದವರೇಯಾದ ಸಿ.ಟಿ. ರವಿ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.

ಮುಂದೆ ಓದಿ ...
  • Share this:

ನವದೆಹಲಿ, ನ. 26: ಕಳೆದ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸಿದ್ದಾಗ ಕಾಡಿಬೇಡಿದ ಬಳಿಕ ಸಮಯಾವಕಾಶ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಕರೆಸಿಕೊಳ್ಳುತ್ತಿದ್ದಾರೆ. ಇದು ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಬುಧವಾರ ರಾತ್ರಿಯೇ ದೆಹಲಿಗೆ ಆಗಮಿಸಿರುವ ಸಚಿವ ರಮೇಶ ಜಾರಕಿಹೊಳಿ ಗುರುವಾರ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ. ಇದಾದ ಬಳಿಕ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.


ಯಡಿಯೂರಪ್ಪ ಅವರ ಭೇಟಿಗೆ ಸಮಯಾವಕಾಶ ನೀಡಲು ಸತಾಯಿಸಿದ ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ಅವರನ್ನು ‌ಕರೆಸಿಕೊಂಡು ಮಾತನಾಡುತ್ತಿರುವುದು ಸಹಜವಾಗಿ ರಾಜ್ಯ ರಾಜಕಾರಣದಲ್ಲಿ ‌ಕುತೂಹಲವನ್ನು ಹುಟ್ಟುಹಾಕಿದೆ. ಅದೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರೆ ಎಂಬ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಮತ್ತು ಸಂಪುಟ ಪುನರ್ರಚನೆ ಕಗ್ಗಂಟು ಇನ್ನೂ ಹಾಗೆ ಇರುವ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ನಡೆ‌ ನಿಗೂಢವಾಗಿದೆ.


ಸಾರ್ವಜನಿಕ ಸ್ಥಳಗಳಲ್ಲಿ ಜನರ ಪ್ರಾಣಕ್ಕೆ ಸಂಚಕಾರವಾಗುತ್ತಿರುವ ಮಾನಸಿಕ ಅಸ್ವಸ್ಥರು


ಇದಲ್ಲದೆ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ನಡೆಸುವ ಉಮೇದಿನಲ್ಲಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶೀಘ್ರದಲ್ಲೇ ತಮ್ಮ ಸರ್ಕಾರ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ‌ಮಹಾರಾಷ್ಟ್ರ ರಾಜಕಾರಣಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ರಮೇಶ್ ಜಾರಕಿಹೊಳಿ ಅವರನ್ನು ಕರೆಸಿಕೊಂಡಿರಬಹುದಾ ಎಂಬ ಅನುಮಾನವೂ‌ ಇದೆ.


ರಮೇಶ್ ಜಾರಕಿಹೊಳಿ ಅವರ ಆಪ್ತ ವಲಯದ ಪ್ರಕಾರ, ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲದ ತಯಾರಿ ಶುರುವಾಗಿದೆ. ಅದರಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಈ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಉಸ್ತುವಾರಿ ಆಗಿರುವ ರಾಜ್ಯದವರೇಯಾದ ಸಿ.ಟಿ. ರವಿ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.


ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿರುವ ರಮೇಶ್ ಜಾರಕಿಹೊಳಿ, ‘ಹೈಕಮಾಂಡ್ ನಾಯಕರಿಂದ ಕರೆ ಬಂದಿದೆ. ಹಾಗಾಗಿ ದೆಹಲಿಗೆ ಹೋಗುತ್ತಿದ್ದೇನೆ’ ಎಂದಷ್ಟೇ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ತರುವ ಸಂದರ್ಭದಲ್ಲಿ ಜೊತೆಗಿದ್ದ, ವಿಧಾನ ಪರಿಷತ್ ಸದಸ್ಯ ಸಿ.ಪಿ.‌ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಿರುವ ಬಗ್ಗೆ ಒಪ್ಪಿಕೊಂಡಿರುವ ರಮೇಶ್ ಜಾರಕಿಹೊಳಿ ಹೈಕಮಾಂಡ್ ನಾಯಕರ ಜೊತೆ ಆ ವಿಷಯವನ್ನೂ‌ ಪ್ರಸ್ತಾಪಿಸುವ ಸಾಧ್ಯತೆ ‌ಇದೆ.

Published by:Latha CG
First published: