ಇಂದು ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಇಂದು ಸಂಜೆ 4 ಗಂಟೆಗೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

sushma chakre | news18
Updated:March 16, 2019, 9:35 AM IST
ಇಂದು ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಸಾಂದರ್ಭಿಕ ಚಿತ್ರ
sushma chakre | news18
Updated: March 16, 2019, 9:35 AM IST
ನವದೆಹಲಿ (ಮಾ. 16): ಈಗಾಗಲೇ ಕಾಂಗ್ರೆಸ್​, ಟಿಡಿಪಿ, ತೃಣಮೂಲ ಕಾಂಗ್ರೆಸ್​, ಸಮಾಜವಾದಿ ಪಕ್ಷಗಳು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಇದೀಗ, ಬಿಜೆಪಿ ಕೂಡ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಇಂದು ಸಂಜೆ 4 ಗಂಟೆಗೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸೇರಿ ರಾಜ್ಯ ಕಾಂಗ್ರೆಸ್ ನಾಯಕರ ಒತ್ತಡ

ಏಪ್ರಿಲ್ 11ರಂದು ನಡೆಯಲಿರುವ ಮೊದಲ ಹಂತದ 91 ಸ್ಥಾನಗಳ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಹುತೇಕ ಎಲ್ಲ ಅಭ್ಯರ್ಥಿಗಳ ಹೆಸರು ಈ ಮೊದಲ ಪಟ್ಟಿಯಲ್ಲಿರಲಿದೆ. 543 ಸಂಸದೀಯ ಸ್ಥಾನಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶವೂ ಪ್ರಕಟವಾಗಲಿದೆ.

ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ಹಾಲಿ ಸಚಿವರ ಹೆಸರು ಇರುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ 42 ಸೀಟುಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಹಾಗೇ, ಉತ್ತರಪ್ರದೇಶ, ಬಿಹಾರ್​, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಒರಿಸ್ಸಾ, ಅಸ್ಸಾಂನಲ್ಲಿ ಕೂಡ ಏಪ್ರಿಲ್ 11ರಂದು ನಡೆಯಲಿದೆ.

First published:March 16, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...