Prophet Muhammad: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಮಾತು: ಬಿಜೆಪಿ ಶಾಸಕ T Raja Singh ಅರೆಸ್ಟ್!

ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಜನರು ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.

ಬಿಜೆಪಿ ಶಾಸಕ ಟಿ ರಾಜಾ ಸಿಂಗ್

ಬಿಜೆಪಿ ಶಾಸಕ ಟಿ ರಾಜಾ ಸಿಂಗ್

  • Share this:
ಹೈದರಾಬಾದ್(ಆ.23): ಪ್ರವಾದಿ ಮುಹಮ್ಮದ್ (Prophet Muhammad) ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ (Telangana BJP MLA T Raja Singh) ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ (Hyderabad) ಸೋಮವಾರ ರಾತ್ರಿ ಬಿಜೆಪಿ ಶಾಸಕರು ಪ್ರವಾದಿಯವರ ಬಗ್ಗೆ ಮಾತನಾಡುವ ವಿಡಿಯೋ ವೈರಲ್ ಆಗಿತ್ತು. ಇದಾದ ಬಳಿಕ ಈ ಮಾತುಗಳನ್ನು ಖಂಡಿಸಿ ಶಾಸಕರ ವಿರುದ್ಧ ಭಾರೀ ಪ್ರತಿಭಟನೆ ನಡೆದಿತ್ತು. ಇದಾದ ಬೆನ್ನಲ್ಲೇ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ ಅವರ ಕಚೇರಿ ಎದುರು ಹಾಗೂ ಪಟ್ಟಣದ ಇತರೆಡೆ ಪ್ರತಿಭಟನೆ ನಡೆದಿತ್ತು ಎಂಬುವುದು ಉಲ್ಲೇಖನೀಯ.

ನೂಪುರ್ ಶರ್ಮಾ ವಿವಾದ ತಣಿಯುವ ಮೊದಲೇ ಬಿಜೆಪಿಗೆ ಮತ್ತೊಂದು ಟೆನ್ಶನ್

ನೂಪುರ್ ಶರ್ಮಾ ನಂತರ ಇದೀಗ ಹೈದರಾಬಾದ್‌ನ ಗೋಶಾಮಹಲ್‌ನ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರಿಂದ ಜನರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈತನ ವಿರುದ್ಧ ಹಲವು ದೂರುಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ಡಬೀರ್‌ಪುರ, ಭವಾನಿ ನಗರ, ರೈನ್‌ಬಜಾರ್, ಮಿರ್ಚೋಕ್ ಠಾಣೆಗಳಿಗೆ ದೂರು ನೀಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಆಕ್ರೋಶಗೊಂಡ ಜನರು ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿರುದ್ಧವೂ ಪ್ರತಿಭಟನೆ ನಡೆಸಿದರು. ಬಶೀರ್ ಬಾಗ್‌ನಲ್ಲಿರುವ ಕಮಿಷನರ್ ಕಚೇರಿಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಹಲವು ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಿದರು.

ಇನ್ನೂ ಓದಿ: Prophet Comments Row: ಹಿಂಸಾರೂಪ ಪಡೆದ ನೂಪುರ್ ಶರ್ಮಾ ವಿರುದ್ಧದ ಪ್ರತಿಭಟನೆಗಳು; ಇಬ್ಬರ ಸಾವು

ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಜನರು, ಅವರು ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ, ಇದರಿಂದಾಗಿ ಶಾಸಕರ ವಿರುದ್ಧ ಜನರಲ್ಲಿ ಅಸಮಾಧಾನವಿದೆ. ಶಾಸಕ ಟಿ.ರಾಜಾ ಸಿಂಗ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ವಾಸ್ತವವಾಗಿ ಟಿ ರಾಜಾ ಇತ್ತೀಚೆಗೆ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದರು, ಅದರಲ್ಲಿ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಮಾಹಿತಿ ಪ್ರಕಾರ ಸೋಮವಾರ ರಾತ್ರಿಯೇ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಕಚೇರಿ ಎದುರು ಹಾಗೂ ನಗರದ ವಿವಿಧೆಡೆ ಪ್ರತಿಭಟನೆ ಆರಂಭವಾಯಿತು. ವೀಡಿಯೊದಲ್ಲಿ, ಟಿ ರಾಜಾ ಸಿಂಗ್ ಹಾಸ್ಯನಟ ಮುನವ್ವರ್ ಫಾರೂಕಿ ಮತ್ತು ಅವರ ತಾಯಿಯ ಬಗ್ಗೆಯೂ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಅವರ ಬಂಧನಕ್ಕೆ ಆಗ್ರಹಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಹೇಳಿದ್ದೇನು?

ಟಿ ರಾಜಾ ಸಿಂಗ್ ಹೈದರಾಬಾದ್‌ನ ಗೋಶಾಮಹಲ್‌ನ ಶಾಸಕರಾಗಿದ್ದಾರೆ. ಇದಕ್ಕೂ ಮುನ್ನ ಅವರು ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ಅವರಿಗೂ ಬೆದರಿಕೆ ಹಾಕಿದ್ದರು. ಮುನವ್ವರ್ ಫಾರುಕಿ ವಿರುದ್ಧ ಬಿಜೆಪಿ ಶಾಸಕ "ಕಾಮಿಡಿ" ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಅಲ್ಲದೇ ಫಾರೂಕಿ ಅವರ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಬೆದರಿಕೆ ಹಾಕಿ, ಸೆಟ್ ಅನ್ನು ಸುಟ್ಟು ಹಾಕುವುದಾಗಿ ಹೇಳಿದ್ದರು, ಇದಾದ ಬಳಿಕ ಬೆದರಿಕೆ ಹಾಕಿದ್ದ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು.

ಇನ್ನೂ ಓದಿ: Prophet Row: ನೂಪುರ್ ಶರ್ಮಾಗೆ ಗೌತಮ್ ಗಂಭೀರ್ ಸಪೋರ್ಟ್!

ಮುನವ್ವರ್ ಫಾರೂಕಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದ ರಾಜಾ ಸಿಂಗ್, ಹಾಸ್ಯನಟ ಮತ್ತು ಅವರ ತಾಯಿಯನ್ನು ಟೀಕಿಸಿದ್ದರು. ಅವರು ವಿಡಿಯೋದಲ್ಲಿ ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಆಡಳಿತಾರೂಢ ಟಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ರಾಜ್ಯ ಸಚಿವ ಕೆಟಿ ರಾಮರಾವ್ ಅವರು ಫಾರೂಕಿ ಅವರನ್ನು ಆಹ್ವಾನಿಸಿದ್ದಕ್ಕೆ ಶಾಸಕ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಹವರನ್ನು ಆಹ್ವಾನಿಸುವ ಬದಲು ತೆಲಂಗಾಣದ ಪ್ರತಿಭಾವಂತ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಶಾಸಕರು ಹೇಳಿದ್ದರು. ಇದೀಗ ಶಾಸಕ ಟಿ ರಾಜಾ ಸಿಂಗ್ ಪ್ರವಾದಿ ಮೊಹಮ್ಮದ್ ಕುರಿತು ಪ್ರತಿಕ್ರಿಯೆ ನೀಡಿದ್ದು, ಜನರು ಅವರ ಹೇಳಿಕೆಯನ್ನು ವಿರೋಧಿಸುತ್ತಿದ್ದಾರೆ.
Published by:Precilla Olivia Dias
First published: