news18-kannada Updated:December 21, 2020, 2:11 PM IST
ಬಿಜೆಪಿ ಸಂಸದನ ಹೆಂಡತಿ ಸುಜಾತಾ ಮೊಂಡಾಲ್ ಖಾನ್.
ಕೋಲ್ಕತ್ತಾ (ಡಿಸೆಂಬರ್ 21); ಬಹು ನಿರೀಕ್ಷಿತ ಪಶ್ಚಿಮ ಬಂಗಾಳ ಚುನಾವಣೆಗೆ ಮುಂದಿನ ವರ್ಷ ಏಪ್ರಿಲ್ ಮೇ ವೇಳೆಗೆ ನಡೆಯವುದು ನಿಶ್ಚಿತವಾಗಿದ್ದು, ಬಿಜೆಪಿ ಹೇಗಾದರೂ ಈ ಭಾರಿ ಅಧಿಕಾರದ ಗದ್ದುಗೆಗೆ ಏರಬೇಕು ಎಂಬ ನಿಶ್ಚಯದಲ್ಲಿದೆ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಬಂಗಾಳದಕ್ಕು ಒಂದರ ಹಿಂದೊಂದರಂತೆ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಇನ್ನೂ ಶನಿವಾರ ಭಾನುವಾರ ಬಂಗಾಳದ ಪ್ರವಾಸಕ್ಕೆ ತೆರಳಿದ್ದ ಅಮಿತ್ ಶಾ ಐದು ಜನ ಟಿಎಂಸಿ ಪಕ್ಷದ ಶಾಸಕರು ಸೇರಿದಂತೆ ಒಟ್ಟು 9 ಜನರನ್ನು ಬಿಜೆಪಿಗೆ ಬರಮಾಡಿಕೊಂಡಿದ್ದರು. ಒಟ್ಟಾರೆ ಕೋಲ್ಕತ್ತಾದಲ್ಲಿ ಬಿಜೆಪಿ ಪಕ್ಷಾಂತರ ಪರ್ವ ಆರಂಭವಾಗಿರುವ ಬೆನ್ನಿಗೆ ಇದೀಗ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಕೋಲ್ಕತ್ತಾದ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಟಿಎಂಸಿ ಪಕ್ಷದ ಪ್ರಬಲ ನಾಯಕ ಹಾಗೂ ಮಾಜಿ ಶಾಸಕ ಸುವೆಂಧು ಅಧಿಕಾರಿ ತಮ್ಮ ಮಾತೃಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಇದೀಗ ರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿದೆ.
ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, "ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕೇಂದ್ರ ಕೃಷಿ ಕಾನೂನಿಗೆ ವಿರೋಧ; ಪಂಜಾಬ್-ದೆಹಲಿ ಬೆನ್ನಿಗೆ ವಿಶೇಷ ಅಧಿವೇಶನ ಕರೆಯಲು ಮುಂದಾಗಿರುವ ಕೇರಳ!
ಅಲ್ಲದೆ, "ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ
ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ" ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.
Published by:
MAshok Kumar
First published:
December 21, 2020, 2:11 PM IST