HOME » NEWS » National-international » BJP MUST WORK HARDER AS MODI AND SHAH CANT ALWAYS DELIVER VICTORIES IN STATE POLLS SAYS RSS MAK

ಮೋದಿ-ಶಾ ಎಲ್ಲಾ ಚುನಾವಣೆಯಲ್ಲೂ ಗೆಲ್ಲಲು ಸಾಧ್ಯವಿಲ್ಲ, ದೆಹಲಿಯಲ್ಲಿ ಬಿಜೆಪಿಯನ್ನು ಬಲಪಡಿಸಿ; ಮೋಹನ್ ಭಾಗವತ್​

ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಸರ್ಕಾರದ ವಿರುದ್ಧ ಯಾವುದೇ ಅಧಿಕಾರ ವಿರೋಧಿ ಅಲೆ ಗೋಚರಿಸಲಿಲ್ಲ. ನಗರವಾಸಿಗಳಿಗೆ ವಿದ್ಯುತ್ ಮತ್ತು ನೀರಿನ ಬಿಲ್​ಗಳನ್ನು ಕಡಿತಗೊಳಿಸಿದ್ದ ಕ್ರಮ ಆಮ್ ಆದ್ಮಿ ಪಕ್ಷಕ್ಕೆ ನೆರವಾಗಿದೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​ ಅಭಿಪ್ರಾಯಪಟ್ಟಿದ್ದಾರೆ.

MAshok Kumar | news18-kannada
Updated:February 20, 2020, 8:17 PM IST
ಮೋದಿ-ಶಾ ಎಲ್ಲಾ ಚುನಾವಣೆಯಲ್ಲೂ ಗೆಲ್ಲಲು ಸಾಧ್ಯವಿಲ್ಲ, ದೆಹಲಿಯಲ್ಲಿ ಬಿಜೆಪಿಯನ್ನು ಬಲಪಡಿಸಿ; ಮೋಹನ್ ಭಾಗವತ್​
ಮೋಹನ್ ಭಾಗವತ್.
  • Share this:
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಎಲ್ಲಾ ಚುನಾವಣೆಯಲ್ಲೂ ಗೆಲುವು ಸಾಧಿಸುವುದು ಸಾಧ್ಯವಿಲ್ಲ ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ತಳ ಮಟ್ಟದಿಂದ ಗಟ್ಟಿಗೊಳಿಸಬೇಕು, ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಕಮಲ ಪಾಳಯಕ್ಕೆ ಸಲಹೆ ನೀಡಿದ್ದಾರೆ.

ಪತ್ರಿಕೆಯೊಂದರ ಸಂಪಾದಕೀಯದಲ್ಲಿ “ದೆಹಲಿಯ ವಿಭಿನ್ನ ಆದೇಶ” ಎಂಬ ಶೀರ್ಷಿಕೆಯಲ್ಲಿ ಅಂಕಣ ಬರೆದಿರುವ ಮೋಹನ್ ಭಾಗವತ್, “ವಿಧಾನಸಭಾ ಮಟ್ಟದ ಚುನಾವಣೆಗಳಲ್ಲಿ ಅಮಿತ್ ಶಾ ಮತ್ತು ನರೇಂದ್ರ ಮೋದಿ ಎಲ್ಲಾ ಸಂದರ್ಭಗಳಲ್ಲೂ ಸಹಾಯ ಮಾಡಲು ಸಾಧ್ಯವಿಲ್ಲ. ಹೀಗಾಗಿ ದೆಹಲಿಯಲ್ಲಿ ಸ್ಥಳೀಯ ಆಕಾಂಕ್ಷೆಗಳನ್ನು ಪುನರ್ ನಿರ್ಮಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ, ಮತದಾರರು ಈ ಕುರಿತು ಸ್ಪಷ್ಟ ತೀರ್ಪು ನೀಡಿದ್ದಾರೆ” ಎಂದು ಅವರು ಬರೆದುಕೊಂಡಿದ್ದಾರೆ.

“ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಸರ್ಕಾರದ ವಿರುದ್ಧ ಯಾವುದೇ ಅಧಿಕಾರ ವಿರೋಧಿ ಅಲೆ ಗೋಚರಿಸಲಿಲ್ಲ. ನಗರವಾಸಿಗಳಿಗೆ ವಿದ್ಯುತ್ ಮತ್ತು ನೀರಿನ ಬಿಲ್​ಗಳನ್ನು ಕಡಿತಗೊಳಿಸಿದ್ದ ಕ್ರಮ ಆಮ್ ಆದ್ಮಿ ಪಕ್ಷಕ್ಕೆ ನೆರವಾಯಿತು. 2015 ರ ನಂತರ ಸಾಂಸ್ಥಿಕ ರಚನೆಯನ್ನು ತಳಮಟ್ಟದಲ್ಲಿ ಪುನರುಜ್ಜೀವನಗೊಳಿಸುವಲ್ಲಿ ಬಿಜೆಪಿ ವಿಫಲವಾಗಿದೆ ಇದು ಚುನಾವಣಾ ಸೋಲಿಗೆ ಪ್ರಮುಖ ಕಾರಣವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಫೆಬ್ರವರಿ 8 ರಂದು ದೆಹಲಿಯಲ್ಲಿ ಮತದಾನ ನಡೆದರೆ, ಮೂರು ದಿನಗಳ ನಂತರದ ಫಲಿತಾಂಶದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗಳಿಸುವ ಮೂಲಕ ಮತ್ತೊಂದು ಅವಧಿಗೆ ದೆಹಲಿ ಗದ್ದುಗೆಗೆ ಏರಿದು. ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಕೇವಲ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು.

ಇದನ್ನೂ ಓದಿ: ಯಾವ ಸರ್ಕಾರ ಇದ್ರೂ ಹೆಚ್.ಡಿ. ರೇವಣ್ಣ ಕೆಲಸ ಆಗುತ್ತೆ ಎಂಬ ಮಾತು ಮತ್ತೊಮ್ಮೆ ನಿಜವಾಯ್ತು
First published: February 20, 2020, 8:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories