BS Yediyurappa: ರಾಷ್ಟ್ರಮಟ್ಟದಲ್ಲಿ ಬಿ ಎಸ್ ಯಡಿಯೂರಪ್ಪಗೆ ಸ್ಥಾನ ನೀಡಿದ ಬಿಜೆಪಿ

ಆದರೆ ಹಿರಿಯ ನಾಯಕರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿಯ ಪ್ರಮುಖ ಸಮಿತಿಯಿಂದ ಕೈಬಿಡಲಾಗಿದೆ. 

ಬಿ. ಎಸ್.ಯಡಿಯೂರಪ್ಪ

ಬಿ. ಎಸ್.ಯಡಿಯೂರಪ್ಪ

  • Share this:

    ದೆಹಲಿ: ಬಿಜೆಪಿ ನೂತನ ಸಂಸದೀಯ ಮಂಡಳಿಯನ್ನು ರಚಿಸಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರಮಟ್ಟದ ಸಂಸದೀಯ ಮಂಡಳಿಯಲ್ಲಿ (BJP Parliamentary Board) ಸ್ಥಾನ ನೀಡಿದೆ. ಈಮೂಲಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಬಿಜೆಪಿ (BJP) ರವಾನಿಸಿದೆ.  ಆದರೆ ಹಿರಿಯ ನಾಯಕರಾದ ನಿತಿನ್ ಗಡ್ಕರಿ (Nitin Gadkari) ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿಯ ಪ್ರಮುಖ ಸಂಸದೀಯ ಸಮಿತಿಯಿಂದ ಕೈಬಿಡಲಾಗಿದೆ. ಅಲ್ಲದೇ ಬಿ.ಎಲ್.ಸಂತೋಷ್ ಅವರನ್ನು ಸಹ ಬಿಜೆಪಿ ಸಂಸದೀಯ ಸಮಿತಿಗೆ ಸೇರ್ಪಡೆ ಮಾಡಿಕೊಂಡಿದೆ. ಬಿಜೆಪಿಯ ನೀತಿ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಸಂಸದೀಯ ಮಂಡಳಿ ಹೊಂದಿರಲಿದೆ. 


    ಬಿಜೆಪಿ ಸಂಸದೀಯ ಮಂಡಳಿ ಪಟ್ಟಿಯಲ್ಲಿ ಜೆಪಿ ನಡ್ಡಾ, ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ್ ಜಟಿಯಾ ಮತ್ತು ಬಿಎಲ್ ಸಂತೋಷ್ ಸೇರಿದ್ದಾರೆ.\

    ದೇವೇಂದ್ರ ಫಡ್ನವೀಸ್​ಗೂ ಸ್ಥಾನ
    ಸದ್ಯ ತೆಲಂಗಾಣದಲ್ಲಿ ಹಿಡಿತ ಸಾಧಿಸಲು ಯತ್ನಿಸುತ್ತಿರುವ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಕೆ. ಲಕ್ಷ್ಮಣ್ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ಶಿವಸೇನೆಯ ರೆಬೆಲ್ ಶಾಸಕರ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಪಾಳಯದೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಪರಿಷ್ಕರಿಸಿದ ಸಂಸದೀಯ ಮಂಡಳಿಯ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ.

    ತಮ್ಮ ಕ್ಷೇತ್ರವನ್ನು ಮಗ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದ ಬಿಎಸ್​ವೈ
    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ  ತಮ್ಮ ಕ್ಷೇತ್ರವನ್ನು ಕಿರಿಯ ಪುತ್ರ, ಬಿ ವೈ ವಿಜಯೇಂದ್ರ  ಅವರಿಗೆ ಬಿಟ್ಟುಕೊಡೋದಾಗಿ ಈಮುನ್ನ ಹೇಳಿದ್ದರು. 1983ರಿಂದ ಶಿಕಾರಿಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಯಡಿಯೂರಪ್ಪನವರು ಒಟ್ಟು 8 ಬಾರಿ ಗೆದ್ದಿದ್ದಾರೆ. 1999ರಲ್ಲಿ ಒಮ್ಮೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾದಾಗ, ಹಿರಿಯ ಪುತ್ರ ಬಿ.ವೈ.ರಾಘವೇಂದ್ರ  ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು.

    ಇದನ್ನೂ ಓದಿ: AIADMK Tussle: ಎಐಎಡಿಎಂಕೆ ಕಚ್ಚಾಟ; ಪನ್ನೀರಸೆಲ್ವಂ ಬಣಕ್ಕೆ ಭಾರೀ ಗೆಲುವು ನೀಡಿದ ಹೈಕೋರ್ಟ್ ತೀರ್ಪು​

    1983ರಿಂದ ಇಲ್ಲಿಯವರಗೆ ಶಿಕಾರಿಪುರ ಕ್ಷೇತ್ರ ಯಡಿಯೂರಪ್ಪ ಅವರ ಭದ್ರಕೋಟೆಯಾಗಿದೆ. 2023ರ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದೆ.

    ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ನಿರಾಳ
    ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇತ್ತೀಚಿಗಷ್ಟೇ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಭ್ರಷ್ಟಾಚಾರ ಪ್ರಕರಣದಲ್ಲಿ  ಸುಪ್ರೀಂಕೋರ್ಟ್  ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ರಿಲೀಫ್ ನೀಡಿತ್ತು. ಕರ್ನಾಟಕ ಹೈಕೋರ್ಟ್ ಈಮುನ್ನ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್​ಐಆರ್​  ರದ್ದುಗೊಳಿಸಲು ನಿರಾಕರಿಸಿತ್ತು. ಬಿಎಸ್​ವೈ ಮೇಲಿದ್ದ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿ ದೇಶದ ಸರ್ವೋಚ್ಛ ನ್ಯಾಯಾಲಯ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಿರಾಳ ಉಸಿರು ಬಿಡುವಂತಾಗಿತ್ತು.

    ಇದನ್ನೂ ಓದಿ: M K Stalin: ದೆಹಲಿಗೆ ಕೈಕಟ್ಟಿ ನಿಲ್ಲಲು ಹೋಗಲ್ಲ, ಬಿಜೆಪಿ ಜೊತೆ ಹೊಂದಾಣಿಕೆಯೇ ಇಲ್ಲ: ಎಂ ಕೆ ಸ್ಟಾಲಿನ್

    2006-07ರಲ್ಲಿನ ಡಿನೋಟಿಫೈ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶದ ವಿರುದ್ದ ಬಿಎಸ್​ವೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
    Published by:guruganesh bhat
    First published: