ಮಧುರೈ (ಜ. 30): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರೆಸುವುದಾಗಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ತಿಳಿಸಿದ್ದಾರೆ. ಚುನಾವಣೆ ಹಿನ್ನಲೆ ತಮಿಳುನಾಡಿನ ರಾಜ್ಯದ ಮೂರು ದಿನಗಳ ಪ್ರವಾಸಲ್ಲಿರುವ ಅವರು ಮಧುರೈನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿಯೂ ಎಐಡಿಎಂಕೆ ಜೊತೆ ಮೈತ್ರಿ ಮೂಲಕ ಬಿಜೆಪಿ ಚುನಾವಣೆ ಎದುರಿಸಿತು. ಸಮಾವೇಶಕ್ಕೆ ಮೊದಲು ಮಧುರೈ ಮೀನಾಕ್ಷಿ ದೇವಾಸ್ಥಾನಕ್ಕೆ ಅವರು ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ನಡ್ಡಾ ನೇತೃತ್ವದಲ್ಲಿ ಬಿಜೆಪಿ ಕೋರ್ ಸಮಿತಿ ಸಭೆ ನಡೆಸಲಾಯಿತು. ಈ ವೇಳೆ ಚುನಾವಣೆ ರೂಪು ರೇಷ ಕುರಿತು ಚರ್ಚೆ ನಡೆಸಲಾಯಿತು.
ತಮಿಳುನಾಡು ಚುನಾವಣೆ ಹಿನ್ನಲೆ ಜನವರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನೀಡಿರುವ ಎರಡನೇ ಭೇಟಿ ಇದಾಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ನಮ್ಮ ನಗರ ಪೊಂಗಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿ ಅವರು ತಮಿಳುನಾಡಿಗೆ ಆಗಮಿಸಿದ್ದರು.
BJP President JP Nadda announces alliance with AIADMK in Tamil Nadu, at a public rally in Madurai.
(file pic) pic.twitter.com/Z70fgxdYoE
— ANI (@ANI) January 30, 2021
ನವೆಂಬರ್ನಲ್ಲಿ ಚೆನ್ನೈಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ವಿಧಾನಸಭಾ ಚುನಾವಣೆಯಲ್ಲಿ ಈ ಮೈತ್ರಿ ಮುಂದುವರೆಸುವ ಕುರಿತು ಘೋಸಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ