• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Narendra Modi: 396 ಲೋಕಸಭಾ ಕ್ಷೇತ್ರಗಳು, 51 ಸಮಾವೇಶ! 1 ತಿಂಗಳಲ್ಲಿ 1 ಲಕ್ಷ ಮನೆಗೆ ಮೋದಿ ಸಂದೇಶ ತಲುಪಿಸಲು ಬಿಜೆಪಿ ನಿರ್ಧಾರ

Narendra Modi: 396 ಲೋಕಸಭಾ ಕ್ಷೇತ್ರಗಳು, 51 ಸಮಾವೇಶ! 1 ತಿಂಗಳಲ್ಲಿ 1 ಲಕ್ಷ ಮನೆಗೆ ಮೋದಿ ಸಂದೇಶ ತಲುಪಿಸಲು ಬಿಜೆಪಿ ನಿರ್ಧಾರ

ನರೇಂದ್ರ ಮೋದಿ

ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೀತಿಗಳು ಮತ್ತು ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಇನ್ನು ಈ ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಬಿಜೆಪಿಯ ಮುಖ್ಯಮಂತ್ರಿಗಳು, ರಾಜ್ಯಗಳ ವಿರೋಧ ಪಕ್ಷದ ನಾಯಕರು, ಸಂಸದರು ಮತ್ತು ಶಾಸಕರನ್ನು ಸಹ ಆಹ್ವಾನಿಸಲಾಗುತ್ತದೆ.

ಮುಂದೆ ಓದಿ ...
  • Share this:

ನವದೆಹಲಿ: ಕೇಂದ್ರದ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ (BJP) ಸರ್ಕಾರಕ್ಕೆ ಒಂಭತ್ತು ವರ್ಷ ತುಂಬುತ್ತಿದೆ. 2024ಕ್ಕೆ 10 ವರ್ಷ ತುಂಬಿ ಮತ್ತೊಮ್ಮೆ ಲೋಕಸಭಾ ಚುನಾವಣೆ (Lokasabha Election) ಎದುರಾಗಲಿದೆ. ಹೀಗಾಗಿ ಸಾರ್ವತ್ರಿಕ ಚುನಾವಣೆಗೆ ಒಂದು ವರ್ಷ ಇರುವಾಗಲೇ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಬೃಹತ್ ವಿಶೇಷ ಸಂಪರ್ಕ ಅಭಿಯಾನವನ್ನು ನಡೆಸಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ.


ಮುಂದಿನ ವರ್ಷ ಬರಲಿರುವ ಲೋಕಸಭಾ ಚುನಾವಣೆಗೂ ಮುನ್ನ ದೇಶಾದ್ಯಂತ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಬೃಹತ್ ವಿಶೇಷ ಸಂಪರ್ಕ ಅಭಿಯಾನವನ್ನು ನಡೆಸಲು ಬಿಜೆಪಿ ಮುಂದಾಗಿದ್ದು, ಇದೇ ಮೇ 30ರಿಂದ ಆರಂಭಗೊಂಡು ಜೂನ್ 30ರ ತನಕ ಈ ಕಾರ್ಯಕ್ರಮ ನಡೆಯಲಿದೆ. ಮೇ 30 ರಂದು ಬೃಹತ್ ರ್ಯಾಲಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು, ಮರುದಿನ ಮೇ 31ರಂದು ಎರಡನೇ ರ್ಯಾಲಿಯಲ್ಲೂ ನರೇಂದ್ರ ಮೋದಿ ಭಾಗಿಯಾಗಲಿದ್ದು, ಒಂದು ತಿಂಗಳ ಕಾಲ ನಡೆಯುವ ಒಟ್ಟು 51 ರ್ಯಾಲಿಗಳಲ್ಲಿ ಬಿಜೆಪಿಯ ಬೇರೆ ಬೇರೆ ಹಿರಿಯ ನಾಯಕರು ವಿವಿಧ ಭಾಗಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: Mallikarjun Kharge: ಪಿಎಫ್‌ಐ ಜೊತೆ ಭಜರಂಗದಳ ಹೋಲಿಕೆ, ಮಲ್ಲಿಕಾರ್ಜುನ ಖರ್ಗೆ ಕೋರ್ಟ್‌ನಿಂದ ಸಮನ್ಸ್!


ಒಟ್ಟು 396 ಲೋಕಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳು ನಡೆಯಲಿದ್ದು, ಇದರಲ್ಲಿ ಕೇಂದ್ರ ಸಚಿವರು ಅಥವಾ ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸುವುದು ಕಡ್ಡಾಯವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಹಲವಾರು ರ್ಯಾಲಿಗಳು ನಡೆಯುವ ಸಾಧ್ಯತೆ ಇದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೀತಿಗಳು ಮತ್ತು ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಇನ್ನು ಈ ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಬಿಜೆಪಿಯ ಮುಖ್ಯಮಂತ್ರಿಗಳು, ರಾಜ್ಯಗಳ ವಿರೋಧ ಪಕ್ಷದ ನಾಯಕರು, ಸಂಸದರು ಮತ್ತು ಶಾಸಕರನ್ನು ಸಹ ಆಹ್ವಾನಿಸಲಾಗುತ್ತದೆ.


ಪ್ರಭಾವಿಗಳ ಸಂಪರ್ಕ


ಇನ್ನು ಈ ಸಮಾವೇಶದ ಮೂಲಕ ಪ್ರತೀ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಕುಟುಂಬಗಳನ್ನು ಸಂಪರ್ಕಿಸುವ ಯೋಜನೆ ರೂಪಿಸಲಾಗಿದ್ದು, ಕ್ರೀಡಾಪಟುಗಳು, ಕಲಾವಿದರು, ಕೈಗಾರಿಕೋದ್ಯಮಿಗಳು ಮತ್ತು ಸೈನಿಕರಂತಹ ಪ್ರಭಾವಿ ವ್ಯಕ್ತಿಗಳ ಮನೆಗಳಿಗೆ ಭೇಟಿ ನೀಡುವ ಪ್ಲಾನ್ ಮಾಡಲಾಗಿದೆ. ಜೊತೆಗೆ ಮೇ 29ರಂದು ದೇಶದೆಲ್ಲೆಡೆ ಏಕಕಾಲಕ್ಕೆ ಪತ್ರಿಕಾಗೋಷ್ಠಿ ನಡೆಯಲಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ವಿರೋಧ ಪಕ್ಷದ ನಾಯಕರು ಮತ್ತು ಇತರ ಪಕ್ಷದ ಹಿರಿಯ ನಾಯಕರು ರಾಜ್ಯ ರಾಜಧಾನಿಗಳಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇನ್ನೆರಡು ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಭಾವ ಬೀರುವ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ ಅವರ ಮೂಲಕ ಜನರಿಗೆ ಸರ್ಕಾರದ ಸಾಧನೆಗಳನ್ನು ತಿಳಿಸುವ ಬಗ್ಗೆ ಚರ್ಚೆ ನಡೆಯಲಿದೆ.


ಒಟ್ಟು ಮೂರು ಹಂತದದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದರ ಭಾಗವಾಗಿ ಜೂನ್ 1 ರಿಂದ 22 ರವರೆಗೆ ಇತರ ಕಾರ್ಯಕ್ರಮಗಳನ್ನು ನಡೆಸಲು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಇವುಗಳಲ್ಲಿ ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ ಪತ್ರಿಕಾಗೋಷ್ಠಿ, ಗಣ್ಯ ವ್ಯಕ್ತಿಗಳ ಸಭೆ, ಸೋಶಿಯಲ್ ಮೀಡಿಯಾ ಪ್ರಭಾವಿಗಳ ಸಭೆ, ಉದ್ಯಮಿಗಳ ಸಮಾವೇಶಗಳು ಮತ್ತು 'ವಿಕಾಸ ತೀರ್ಥ' ಕಾರ್ಯಕ್ರಮಗಳನ್ನು ಆಯೋಜಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ.


ವಿಧಾನಸಭಾ ಮಟ್ಟದಲ್ಲೂ ಕಾರ್ಯಕ್ರಮ


ವಿಧಾನಸಭೆ ಮಟ್ಟದಲ್ಲೂ ಕಾರ್ಯಕ್ರಮಗಳು ನಡೆಯಲಿದ್ದು, ವಿಧಾನಸಭಾ ಕ್ಷೇತ್ರದ ಹಿರಿಯ ಕಾರ್ಯಕರ್ತರೊಂದಿಗೆ ಸಭೆ ಮತ್ತು ಊಟ, ಪಕ್ಷದ ಎಲ್ಲಾ ಏಳು ಮೋರ್ಚಾಗಳ ಜಂಟಿ ಸಮಾವೇಶ, ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ಯೋಗ ದಿನದಂದು (ಜೂನ್ 21) ಕಾರ್ಯಕ್ರಮಗಳು ಇದರಲ್ಲಿ ಸೇರಿವೆ. ಜೂನ್ 23 ರಂದು ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ಬೂತ್‌ಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಆನ್‌ಲೈನ್‌ ಸಂವಾದ ನಡೆಸಲಿದ್ದಾರೆ.


ಇದನ್ನೂ ಓದಿ: Ranjan Gogoi: ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ₹1 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು!


ಜೂನ್ 20 ರಿಂದ 30 ರವರೆಗೆ ಮನೆ-ಮನೆ ಸಂಪರ್ಕ ಅಭಿಯಾನಗಳನ್ನು ನಡೆಸೋದು ಮಾತ್ರವಲ್ಲದೇ, ‘ಮಿಸ್ಡ್ ಕಾಲ್ ಅಭಿಯಾನ’ ಸಹ ನಡೆಸಲು ಪ್ಲಾನ್ ರೂಪಿಸಲಾಗಿದೆ. ಈ ಬಾರಿ ಪ್ರಚಾರಕ್ಕೆ ಸಿದ್ಧತೆ ನಡೆಸಲು ಪಕ್ಷದ ರಾಜ್ಯ ಘಟಕಗಳಿಗೆ ರಾಜ್ಯ ಕಾರ್ಯಕಾರಿ ಸಮಿತಿಯ ಒಂದು ದಿನದ ಸಭೆ ಕರೆಯಲು ಸೂಚನೆ ನೀಡಲಾಗಿದೆ. ಪಕ್ಷದ ಪ್ರಚಾರ ಸಮಿತಿಯು ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ.

top videos



    ಪ್ರಚಾರದ ಮೇಲ್ವಿಚಾರಣೆಗಾಗಿ ಕೇಂದ್ರ ಸಚಿವರು, ಮಾಜಿ ಸಚಿವರು, ರಾಷ್ಟ್ರೀಯ ಉಪಾಧ್ಯಕ್ಷರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಸದಸ್ಯರು ಮತ್ತು ಹಿರಿಯ ನಾಯಕರನ್ನು ಒಳಗೊಂಡ ಎರಡು ಸದಸ್ಯರ ತಂಡಗಳನ್ನು ರಚಿಸಲಾಗಿದೆ. ಈ ಸಂಬಂಧ ಮಾಧ್ಯಮಗಳ ಸಂಪಾದಕರು, ಸೋಶಿಯಲ್ ಮೀಡಿಯಾ ಪ್ರಭಾವಿಗಳು ಸೇರಿದಂತೆ ರಾಜ್ಯ ಘಟಕಗಳ ಇನ್ನಿತರರ ಪ್ರಭಾವಿಗಳಿಂದ ನಿಗದಿತ ಸ್ವರೂಪದಲ್ಲಿ ಮಾಹಿತಿಯನ್ನು ಪಡೆಯಲು ಬಿಜೆಪಿ ಪ್ಲಾನ್ ಮಾಡಿದೆ.

    First published: