Assembly Elections2021: ಬಿಜೆಪಿ ಈ ಬಾರಿ ಪಶ್ಚಿಮ ಬಂಗಾಳದಲ್ಲಿ 200ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ: ಅಮಿತ್ ಶಾ

ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿ 26 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ಇದು ಸಾಧ್ಯವಾದರೆ, ಈ ವರ್ಷದ ವಿಧಾನಸಭೆ ಚುನಾವಣೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ನಮಗೆ ತುಂಬಾ ಸುಲಭ ಎಂದು ನಾನು ನಂಬುತ್ತೇನೆ ಎಂದು ಅಮಿತ್​ ಶಾ ತಿಳಿಸಿದ್ದಾರೆ.

ಅಮಿತ್​ ಶಾ.

ಅಮಿತ್​ ಶಾ.

 • Share this:
  ಕೋಲ್ಕತ್ತಾ (ಮಾರ್ಚ್​ 28); "ಪಶ್ಚಿಮ ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 200ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತದ ಸರ್ಕಾರವನ್ನು ರಚನೆ ಮಾಡಲಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಂದು ಮೊದಲ ಹಂತದ ಮತದಾನ ನಡೆದಿದೆ. ಇದರ ಬೆನ್ನಿಗೆ ಇಂದು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿರುವ ಅಮಿತ್​ ಶಾ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಬಹುಮತದ ಸರ್ಕಾರವನ್ನು ರಚನೆ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

  ಅಸ್ಸಾಂನ 47 ಮತ್ತು ಪಶ್ಚಿಮ ಬಂಗಾಳದ 30 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆದಿದೆ. ಎರಡು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತದ ಸ್ಥಾನಗಳನ್ನು ಪಡೆಯಲಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 200 ಕ್ಕೂ ಹೆಚ್ಚು ಸ್ಥಾನಗಳನ್ನು ಸುಲಭವಾಗಿ ಗೆಲ್ಲುತ್ತದೆ ಎಂಬುದನ್ನು ಅಲ್ಲಿಂದ ಪಡೆದ ಪ್ರತಿಕ್ರಿಯೆಗಳ ಆಧಾರದ ಮೇಲೆ ಹೇಳುತ್ತೇನೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  "ಮೊದಲ ಹಂತದಲ್ಲಿ, ಬಂಗಾಳದ 30 ಸ್ಥಾನಗಳಲ್ಲಿ 26 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಸ್ಥಾನಗಳು ಇನ್ನು ಹೆಚ್ಚಾಗಬಹುದು. ಅಸ್ಸಾಂನ 47 ಸ್ಥಾನಗಳಲ್ಲಿ 37 ಕ್ಕೂ ಹೆಚ್ಚು ಸ್ಥಾನಗಳನ್ನು ಪಕ್ಷವು ಗೆಲ್ಲುತ್ತದೆ ಎಂಬ ಸ್ಪಷ್ಟ ಸೂಚನೆಗಳನ್ನು ನಾವು ಪಡೆದುಕೊಂಡಿದ್ದೇವೆ" ಎಂದು ಅಮಿತ್​ ಶಾ ಹೇಳಿದ್ದಾರೆ.

  "ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿ 26 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ಇದು ಸಾಧ್ಯವಾದರೆ, ಈ ವರ್ಷದ ವಿಧಾನಸಭೆ ಚುನಾವಣೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ನಮಗೆ ತುಂಬಾ ಸುಲಭ ಎಂದು ನಾನು ನಂಬುತ್ತೇನೆ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನಗೆ ಈ ಬಗ್ಗೆ ಸಂಪೂರ್ಣ ನಂಬಿಕೆ ಇದೆ" ಎಂದು ಅವರು ತಿಳಿಸಿದ್ದಾರೆ.

  ಇದನ್ನೂ ಓದಿ: Ramesh Jarkiholi CD Case: ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ಕಾರಿನ ಮೇಲೆ ರಮೇಶ್ ಬೆಂಬಲಿಗರಿಂದ ದಾಳಿ; ಸಿದ್ದರಾಮಯ್ಯ ಖಂಡನೆ

  ಪಶ್ಚಿಮ ಬಂಗಾಳದಲ್ಲಿ ಶೇಕಡಾ 84 ಕ್ಕಿಂತ ಹೆಚ್ಚು ಮತ್ತು ಅಸ್ಸಾಂನಲ್ಲಿ ಶೇಕಡಾ 79 ಕ್ಕಿಂತ ಹೆಚ್ಚು ಮತದಾನ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅಮಿತ್ ಶಾ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸಿದ್ದಕ್ಕಾಗಿ ಎರಡೂ ರಾಜ್ಯಗಳ ಜನರಿಗೆ ಧನ್ಯವಾದ ತಿಳಿಸಿದ್ದಾರೆ.

  ಇತ್ತ, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸುವ ಬಿಜೆಪಿ ಮುಖಂಡರ ನಡುವಿನ ಫೋನ್ ಮಾತುಕತೆ ಆಡಿಯೋವನ್ನು ಟಿಎಂಸಿ ಬಿಡುಗಡೆ ಮಾಡಿದ್ದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ.
  Published by:MAshok Kumar
  First published: