ಪಂಜಾಬ್ನ ಲುಧಿಯಾನಾ ನ್ಯಾಯಾಲಯದ ( Ludhiana court )ಸಂಕೀರ್ಣದಲ್ಲಿ ಇಂದು ಬಾಂಬ್ ಸ್ಪೋಟ (Bomb Blast) ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿ ಆಗಿದೆ. ಇದರಲ್ಲಿ ಓರ್ವ ಮಹಿಳೆಯಾಗಿದ್ದು, ಇನ್ನಿಬ್ಬರು ಪುರುಷರಾಗಿದ್ದಾರೆ. ನ್ಯಾಯಾಲಯ ಸಂಕೀರ್ಣದಲ್ಲಿ ಐಇಡಿ (IED) ಬಾಂಬ್ ಸ್ಪೋಟ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಲಯದ ಮೂರನೇ ಮಹಡಿಯಲ್ಲಿರುವ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಬಾಂಬ್ ಸ್ಪೋಟದ ತೀವ್ರತೆ ಹೆಚ್ಚಿದ್ದು, ಇದರಿಂದ ವಾಶ್ರೂಂ ಗೋಡೆಗಳು ಛಿದ್ರವಾಗಿದ್ದು, ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ ಎಂದು ತಿಳಿದು ಬಂದಿದೆ.
Punjab | Several feared injured in explosion in Ludhiana District Court Complex
Details awaited. pic.twitter.com/H3jaqit93H
— ANI (@ANI) December 23, 2021
ನಗರದ ಹೃದಯ ಭಾಗದಲ್ಲಿಯೇ ಈ ನ್ಯಾಯಾಲಯ ಇದ್ದು, ಇದರ ಪಕ್ಕದಲ್ಲಿಯೇ ಜಿಲ್ಲಾಧಿಕಾರಿಗಳ ಕಚೇರಿ ಕೂಡ ಇದೆ.
Disturbing news of a blast at Ludhiana court complex. Saddened to know about the demise of 2 individuals, Praying for the recovery of those injured. @PunjabPoliceInd must get to the bottom of this.
— Capt.Amarinder Singh (@capt_amarinder) December 23, 2021
ಇದನ್ನು ಓದಿ: ವಿಶ್ವದ ಅತ್ಯಂತ ದುಬಾರಿ ವಿಚ್ಛೇದನ: 5,500 ಕೋಟಿ ರೂ ಜೀವನಾಂಶ ನೀಡಿದ ದುಬೈ ಶೇಖ್!
ಕಾನೂನು ಸುವ್ಯವಸ್ಥೆ ಕುರಿತು ಸುಖಬೀರ್ ಸಿಂಗ್ ಬಾದಲ್ ಟೀಕೆ
ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಎಸ್‌ಎಡಿ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್, ಈ ಸಂಬಂಧ ರಾಜ್ಯ ಸರ್ಕಾರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಲೂಧಿಯಾನ ನ್ಯಾಯಾಲಯದ ಸ್ಫೋಟವು ಸರ್ಕಾರದ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ
ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ತಕ್ಷಣಕ್ಕೆ ಲೂಧಿಯಾನಕ್ಕೆ ಭೇಟಿ ನೀಡುತ್ತಿದ್ದೇನೆ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೆಲವು ದೇಶವಿರೋಧಿಗಳು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಅಲರ್ಟ್ ಆಗಿದೆ. ತಪ್ಪಿತಸ್ಥರೆಂದು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ
ಲೂಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಪಂಜಾಬ್ ಸರ್ಕಾರದಿಂದ ವರದಿ ಕೇಳಿದೆ. ಇನ್ನು ಘಟನೆ ಸಂಬಂಧ ಪಂಜಾಬ್ ಗೃಹ ಸಚಿವರು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ದಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ