ನವ ದೆಹಲಿ; ಕೇಂದ್ರ ಸರ್ಕಾರ ಕೂಡಲೇ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದೆಹಲಿಯ ಹೊರ ವಲಯದಲ್ಲಿ ಆರಂಭಿಸಿರುವ ಚಳುವಳಿ 27ನೇ ದಿನಕ್ಕೆ ಕಾಲಿಟ್ಟಿದೆ. ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆದ 6 ಸುತ್ತಿನ ಮಾತುಕತೆಯೂ ವಿಫಲವಾಗಿದ್ದು, ರೈತರ ಬೇಡಿಕೆಗೆ ಸರ್ಕಾರ ಬಗ್ಗುವಂತೆ ಕಾಣುತ್ತಿಲ್ಲ. ಮತ್ತೊಂದೆಡೆ ರೈತರು ಸಹ ತಮ್ಮ ಹೋರಾಟವನ್ನು ಕೈಬಿಡುವ ಮನಸ್ಸು ಮಾಡಿಲ್ಲ. ಈ ನಡುವೆ ಜನವರಿ 26 ಗಣರಾಜ್ಯೋತ್ಸ ದಿನ ಹತ್ತಿರವಾಗುತ್ತಿದ್ದು, ಈ ವರ್ಷ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಆದರೆ, ಭಾರತದಲ್ಲಿನ ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ ಎಂದು ಬ್ರಿಟನ್ ಸಂಸದರಿಗೆ ಪತ್ರ ಬರೆಯಲು ಹೋರಾಟ ನಿರತ ರೈತರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಜನವರಿ 26ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಬರಲಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ. ಭಾರತ ಸರ್ಕಾರವು ರೈತರ ಹಕ್ಕೊತ್ತಾಯಗಳನ್ನು ಈಡೇರಿಸುವವರೆಗೂ ಇಂಗ್ಲೆಂಡ್‌ನ ಪ್ರಧಾನಿ ಭಾರತಕ್ಕೆ ಬರದಂತೆ ತಡೆಯಬೇಕೆಂದು ಅಲ್ಲಿನ ಸಂಸದರಿಗೆ ಪತ್ರ ಬರೆದು ಕೋರುತ್ತೇವೆ ಎಂದು ಪಂಜಾಬ್‌ನ ರೈತ ಮುಖಂಡ ಕುಲವಂತ್ ಸಿಂಗ್ ಸಂಧು ತಿಳಿಸಿದ್ದಾರೆ.
The UK PM is scheduled to visit India on 26th January. We are writing to British MPs asking them to stop the UK PM from visiting India till the time farmers' demands are not met by the Indian government: Kulwant Singh Sandhu, farmer leader from Punjab at Singhu border https://t.co/m2Z0ReXFrd
— ANI (@ANI) December 22, 2020
ಭಾರತೀಯ ಕಿಸಾನ್ ಯೂನಿಯನ್ ಮತ್ತು ಕಿಸಾನ್ ಸಂಘರ್ಷ ಸಮಿತಿಯ ಸದಸ್ಯರೊಂದಿಗೆ ಕೃಷಿ ಭವನದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆ ನಡೆಸುತ್ತಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಇನ್ನು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 27 ರಂದು ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಡೆಸುವ ವೇಳೆ ಜನ ದೇಶಾದ್ಯಂತ ಮನೆಯಿಂದ ಹೊರಬಂದು ತಟ್ಟೆ ಬಾರಿಸುವಂತೆ ಕರೆ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ