ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸುಮಾರು 228 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 28,2020 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ:
ಕಾನ್ಸ್ಟೇಬಲ್ - 75 ಹುದ್ದೆಗಳು
ಸಬ್ ಇನ್ಸ್ ಪೆಕ್ಟರ್ - 64 ಹುದ್ದೆಗಳು
ಜ್ಯುನಿಯರ್ ಇಂಜಿನಿಯರ್ / ಎಸ್‌ಐ - 52 ಹುದ್ದೆಗಳು
ಅಸಿಸ್ಟೆಂಟ್ ಏರ್ ಕ್ರಾಫ್ಟ್ ಮೆಕ್ಯಾನಿಕ್ - 22 ಹುದ್ದೆಗಳು
ಟೆಕ್ನೀಶಿಯನ್ - 15 ಹುದ್ದೆಗಳು
ವಿದ್ಯಾರ್ಹತೆ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. ಇನ್ನು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಎಕ್ಸ್- ಸರ್ವೀಸ್ ಮೆನ್ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ/ಎಕ್ಸ್ ಸರ್ವೀಸ್ ಮೆನ್/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.
ಅರ್ಜಿ ಸಲ್ಲಿಕೆ ಹೇಗೆ:
ಆಸಕ್ತರು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://bsf.gov.in/Home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಬೇಕು. ಅಕ್ಟೋಬರ್ 28,2020ರೊಳಗೆ ಅರ್ಜಿ ಸಲ್ಲಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ