HOME » NEWS » National-international » BUDGET 2020 SPEECH FINANCE MINISTER NIRMALA SITHARAMAN EDUCATION ALLOCATION FOREIGN DIRECT INVESTMENT MAK

Union Budget 2020: ಶಿಕ್ಷಣ ಕ್ಷೇತ್ರದಲ್ಲೂ ವಿದೇಶಿ ಬಂಡವಾಳದ ನೇರ ಹೂಡಿಕೆಗೆ ಅವಕಾಶ; ನಿರ್ಮಲಾ ಸೀತಾರಾಮನ್

ಮುಂದಿನ ದಿನಗಳಲ್ಲಿ ದೇಶದ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಪರಿಚಯಿಸಲಾಗುವುದು. ಇದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಗಣನೀಯ ಅಭಿವೃದ್ಧಿ ಸಾಧಿಸಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

MAshok Kumar | news18-kannada
Updated:February 1, 2020, 12:30 PM IST
Union Budget 2020: ಶಿಕ್ಷಣ ಕ್ಷೇತ್ರದಲ್ಲೂ ವಿದೇಶಿ ಬಂಡವಾಳದ ನೇರ ಹೂಡಿಕೆಗೆ ಅವಕಾಶ; ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.
  • Share this:
ನವ ದೆಹಲಿ (ಫೆಬ್ರವರಿ 01); ದೇಶದ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ 99,300 ಕೋಟಿ ಹಾಗೂ ಕೌಶಲ್ಯ ಅಭಿವೃದ್ಧಿಗೆ 3,000 ಕೋಟಿ ಅನುದಾನ ನೀಡಲಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಶಿಕ್ಷಣ ವಲಯದಲ್ಲಿ ವಿದೇಶಿ ನೇರ ಹೂಡಿಕೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಬಜೆಟ್ 2020 ಭಾಷಣದ ವೇಳೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸಂಸತ್​ನಲ್ಲಿ ಇಂದು ತಮ್ಮ ಎರಡನೇ ವಾರ್ಷಿಕ ಬಜೆಟ್ ಮಂಡಿಸಿ, ಬಜೆಟ್ ಮೇಲಿನ ಭಾಷಣದ ವೇಳೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾಹಿತಿ ನೀಡಿರುವ ಸಚಿವೆ ನಿರ್ಮಲಾ ಸೀತಾರಾಮನ್, “ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ. ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟಿನಲ್ಲಿ ಅಗ್ರ 100 ರಲ್ಲಿ ಸ್ಥಾನ ಪಡೆದ ಸಂಸ್ಥೆಗಳಿಂದ ಪದವಿ ಮಟ್ಟದ ಪೂರ್ಣ ಪ್ರಮಾಣದ ಆನ್​ಲೈನ್ ಶಿಕ್ಷಣ ಕಾರ್ಯಕ್ರಮವನ್ನು ನೀಡಲಾಗುವುದು ಎಂದು ಅವರು ಘೋಷಿಸಿದರು.

ಇದರ ಜೊತೆಗೆ ಮುಂದಿನ ದಿನಗಳಲ್ಲಿ ದೇಶದ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಪರಿಚಯಿಸಲಾಗುವುದು. ಇದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಗಣನೀಯ ಅಭಿವೃದ್ಧಿ ಸಾಧಿಸಬಹುದು. ಅಲ್ಲದೆ, ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸಲು ಸ್ಥಳೀಯ ಸಂಸ್ಥೆಗಳ ಮೂಲಕ ತರಬೇತಿ ನೀಡಲಾಗುವುದು. ಯುವ ವಿದ್ಯಾರ್ಥಿಗಳು ವಿದೇಶದಲ್ಲಿ ಕೆಲಸ ಪಡೆಯುವಲ್ಲಿಯೂ ಸಹಕರಿಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Union Budget 2020: ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಮಹಿಳೆಯರ ಹಾಗೂ ಯುವ ಜನರ ಅಭಿವೃದ್ಧಿಯೇ ಕೇಂದ್ರ ಬಜೆಟ್ 2020 ಆಶಯ
First published: February 1, 2020, 12:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories