Union Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ, ಸರ್ಕಾರದ ಮುಂದಿನ ಗುರಿ!

ಪಿಎಂ ಗತಿ ಶಕ್ತಿ ಯೋಜನೆಯಡಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Union Budget 2022: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Seetharaman) ಕೇಂದ್ರ ಬಜೆಟ್ 2022 (Union Budget 2022) ಮಂಡಿಸಿದ್ದಾರೆ. ಈಗಾಗಲೇ ಭಾರತದಲ್ಲಿ ನಿರುದ್ಯೋಗ (Unemployment) ಸಮಸ್ಯೆ ಇದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷದಲ್ಲಿ 60 ಲಕ್ಷ ಉದ್ಯೋಗ(Jobs)ಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿ ಎಂದು ಅವರು ಹೇಳಿದ್ದಾರೆ. ಪಿಎಂ ಗತಿ ಶಕ್ತಿ ಯೋಜನೆಯಡಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಕರೆದೊಯ್ಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳನ್ನು ನೀಡುತ್ತದೆ. ಭಾರತದಲ್ಲಿ ಯುವಕರು, ಮಹಿಳೆಯರು ಮತ್ತು ಬಡವರ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದೆ. ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್(Production Linked Incentive) (ಪಿಎಲ್‌ಐ) ಯೋಜನೆಯು ಆತ್ಮನಿರ್ಭರ ಭಾರತವನ್ನು ಯಶಸ್ವಿಯಾಗಿಸಲಿದೆ. ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಅವರು ಹೇಳಿದ್ದಾರೆ.

ಮೇಕ್ ಇನ್ ಇಂಡಿಯಾಗೆ ಒತ್ತು!

ಭಾರತ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸಶಕ್ತವಾಗಿದೆ. ಮಧ್ಯಮ ವರ್ಗದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೋವಿಡ್ ಸಂತ್ರಸ್ತರಿಗೆ ಸಕಲ ನೆರವು ನೀಡುವ ಭರವಸೆಯನ್ನು ನಿರ್ಮಲಾ ಸೀತರಾಮನ್​ ನೀಡಿದ್ದಾರೆ. ಈ ಬಜೆಟ್ ನಲ್ಲಿ ಭಾರತದ ಮುಂದಿನ 25 ವರ್ಷಗಳ ಅಭಿವೃದ್ಧಿಗೆ ಸಕಲ ಒತ್ತು ನೀಡಲಾಗಿದೆ. ಆತ್ಮ ನಿರ್ಭರ ಭಾರತಕ್ಕೆ ಒತ್ತು ನೀಡಿ, 60 ಲಕ್ಷ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದಾರೆ. ಏರ್ ಇಂಡಿಯಾ ವರ್ಗಾವಣೆ ಮುಕ್ತಾಯಗೊಂಡಿದ್ದು ಪಿಎಂ ಗತಿ ಶಕ್ತಿ ಯೋಜನೆಗೆ ಆದ್ಯತೆ ನೀಡಲಾಗಿದೆ. ಸಂಪರ್ಕ ವ್ಯವಸ್ಥೆ ಸುಧಾರಿಸಿ, ಮೂಲ ಸೌಕರ್ಯ ಹೆಚ್ಚಿಸುವ ಯೋಜನೆ ಇದ್ದು, ತಂತ್ರಜ್ಞಾನ ಬಳಸಿ, ರಾಷ್ಟ್ರೀಯ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ಇದನ್ನು ಓದಿ : ಮೇಕ್​ ಇನ್​ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಸರ್ಕಾರದ ಮುಂದಿನ ಗುರಿ!

ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (ಎವಿಜಿಸಿ) ವಲಯವು ಯುವಕರಿಗೆ ಉದ್ಯೋಗವನ್ನು ಒದಗಿಸುವ ಅಪಾರ ಸಾಮರ್ಥ್ಯವನ್ನು ಹೊಂದಿದೆ. ಮಾರುಕಟ್ಟೆ ಮತ್ತು ಜಾಗತಿಕ ಬೇಡಿಕೆಗಾಗಿ ನಮ್ಮ ದೇಶೀಯ ಸಾಮರ್ಥ್ಯವನ್ನು ಹೆಚ್ಚಿಸಲು ಎಲ್ಲಾ ಪಾಲುದಾರರೊಂದಿಗೆ AVGC ಪ್ರಚಾರ ಕಾರ್ಯಪಡೆಯನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್​ ಹೇಳಿದ್ದಾರೆ. ಯುವಕರಿಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗದೇ ಪರದಾಡುವಂತೆ ಆಗುವುದಿಲ್ಲ ಎಂಬುದು ಇದರಿಂದ ತಿಳಿಯಲಿದೆ. ಮೇಕ್​​ ಇನ್​ ಇಂಡಿಯಾಗೆ ಹೆಚ್ಚು ಒತ್ತು ನೀಡಲಾಗಿದೆ.

ಇದನ್ನು ಓದಿ : ಶೀಘ್ರದಲ್ಲೇ RBIನಿಂದಲೇ ಡಿಜಿಟಲ್​ ಕರೆನ್ಸಿ ಆರಂಭ, ಜೊತೆಗೆ ಈ ವರ್ಷವೇ 5ಜಿ ತರಂಗಾಂತರ ಹರಾಜು!

ದೇಶದಲ್ಲಿ ಕೊರೊನಾ ನೀಡಿದ ಆರ್ಥಿಕ ಹೊಡೆತದಿಂದಾಗಿ ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ವಿದ್ಯಾವಂತ ನಿರುದ್ಯೋಗಿಗಳಿಗೆ ಈ ಬಜೆಟ್ ಒಂದಷ್ಟು ಆಶಾಕಿರಣ ನೀಡುವಂತೆ ಕಾಣುತ್ತಿದೆ. ಇದಲ್ಲದೇ ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಮೂಲಕ ಹೆಚ್ಚು ಉದ್ಯೋಗ ಸೃಷ್ಟಿಯ ಆಲೋಚನೆ ಇರುವುದರಿಂದ ಶೀಘ್ರದಲ್ಲೇ ಇಷ್ಟು ಭಾರೀ ಪ್ರಮಾಣದ ಉ್ಯೋಗ ಸೃಷ್ಟಿಯೆಡೆಗೆ ಈ ಬಜೆಟ್ ದೃಷ್ಟಿ ನೆಟ್ಟಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಬಗೆಹರಿದರೆ ಸಾಕು ಎನ್ನುತ್ತಿದ್ದಾರೆ ಪಂಡಿತರು.
Published by:Vasudeva M
First published: